Homeಕರ್ನಾಟಕರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಸರ್ಕಾರದ ಬಳಿ ವೃದ್ದಾಪ್ಯ ಮತ್ತು ವಿಧವಾ ವೇತನ ನೀಡಲು ಕೂಡಾ ಹಣವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಟ್ವೀಟ್ ಮಾಡಿ ಸರ್ಕಾರದ ವಿರುದ್ದ ಕಿಡಿ ಕಾರಿದ ವಿಪಕ್ಷ ನಾಯಕ, “ರಾಜ್ಯಸರ್ಕಾರ ದಿವಾಳಿಯಾಗಿದೆ. ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀಫ್ ಬಿರಿಯಾನಿ ತಿನ್ನಿ ಎಂದ ಒವೈಸಿ; ಹಂದಿಮಾಂಸದ ಬಿರಿಯಾನಿ ಆಫರ್ ನೀಡಿದ ಬಿಜೆಪಿ ನಾಯಕ!

“ಕೊರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ರಾಜ್ಯಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತೀವ್ರ ಟೀಕೆ: ಪೊಲೀಸ್ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಕೇರಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...