Homeಕರ್ನಾಟಕHijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ...

Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಲೇಜುಗಳ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಿದೆ. ಈ ವೇಳೆ ರಾಜ್ಯ ಸರ್ಕಾರವು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕೂರಿಸಿರುವುದರ ಬಗ್ಗೆ ನ್ಯಾಯಾಲಯದ ಮುಂದೆ ಸುಳ್ಳು ಹೇಳಿದೆ.

ವಿಚಾರಣೆ ವೇಳೆ ಕುಂದಾಪುರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್‌ ಕಾಮತ್‌, “ನಿನ್ನೆ ಹಿಜಾಬ್ ಧರಿಸಿದ ಹುಡುಗಿಯರನ್ನು ಒಳಗೆ ಪ್ರವೇಶಿಸಲು ಅನುಮತಿಸಲಾಯಿತು ಆದರೆ ಪ್ರತ್ಯೇಕ ಸಭಾಂಗಣದಲ್ಲಿ ಕುಳಿತುಕೊಳ್ಳುವಂತೆ ಮಾಡಲಾಯಿತು” ಎಂದು ಸೋಮವಾರಂದು ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದ ಘಟನೆಯನ್ನು ನ್ಯಾಯಾಲಯದ ಗಮನಕ್ಕೆ ತರುತ್ತಾರೆ.

ಇದನ್ನೂ ಓದಿ: Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಈ ವೇಳೆ ಜಸ್ಟಿಸ್ ದೀಕ್ಷಿತ್, “ಇದು ಅಮೇರಿಕನ್ ಪ್ರಕರಣದಂತೆಯೇ, ಪ್ರತ್ಯೇಕ ಆದರೆ ಸಮಾನತೆ ತರವೇ?” ಎಂದು ಪ್ರಶ್ನಿಸುತ್ತಾರೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕೂರಿಸುವುದು ‘ಧಾರ್ಮಿಕ ವರ್ಣಭೇದ ನೀತಿ’ ಮತ್ತು ‘ಅಸ್ಪೃಶ್ಯತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ’ ಎಂದು ಕಾಮತ್ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಇದನ್ನೂ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಇಂಥ ಆಧಾರರಹಿತ ಹೇಳಿಕೆ ನೀಡಬಾರದು. ಇದು ನಮ್ಮಂಥ ಸೂಕ್ಷ್ಮವಾದ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟು ಮಾಡಬಹುದು. ನ್ಯಾಯಾಲಯದಲ್ಲಿ ಕಾನೂನಾತ್ಮಕವಾಗಿ ಇರಬೇಕು, ರಾಜಕೀಯವಾಗಿ ಅಲ್ಲ” ಎಂದು ಹೇಳಿದ್ದಾರೆ.

ಇದಕ್ಕೆ ಮತ್ತೇ ಪ್ರತಿಕ್ರಿಯಿಸಿದ ದೇವದತ್‌ ಕಾಮತ್‌ ಅವರು, “ಹೀಗೆ ಪ್ರತ್ಯೇಕವಾಗಿ ಕೂರಿಸುವುದು ಆರ್ಟಿಕಲ್ 14 ರ ಉಲ್ಲಂಘನೆಯಾಗಿದೆ ಎಂಬುದು ನನ್ನ ಸಲ್ಲಿಕೆಯಾಗಿದೆ. ನ್ಯಾಯಾಲಯದ ಒಳಗೆ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ಹೇಳುತ್ತಾರೆ. ಈ ವೇಳೆ ನ್ಯಾಯಮೂರ್ತಿ ದೀಕ್ಷಿತ್ ಅವರು ಕಾಮತ್ ಅವರ ವಾದಗಳನ್ನು ಸಾರಾಂಶವಾಗಿ ಟಿಪ್ಪಣಿ ಮಾಡುತ್ತಾರೆ.

ಇದನ್ನೂ ಓದಿ: ತಾರಕಕ್ಕೇರಿದ ಹಿಜಾಬ್, ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ಕೇಸರಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ

ಇದರ ನಂತರ ಹಿಜಾಬ್ ಧರಿಸಿದ ಮಕ್ಕಳನ್ನು ಪ್ರತ್ಯೇಕವಾಗಿ ಕೂರಿಸಲಾಗಿದೆ ಎಂದು ಕಾಮತ್ ಅವರ ಹೇಳಿಕೆಯನ್ನು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮತ್ತೆ ಆಕ್ಷೇಪಿಸಿ, ಇಂತಹ ಹೇಳಿಕೆಗಳು ದೂರಗಾಮಿ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳುತ್ತಾರೆ.

ಸೋಮವಾರದಂದು ಕುಂದಾಪುರ ಕಾಲೇಜು ಗೇಟಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಇತರ ವಿದ್ಯಾರ್ಥಿಗಳಿಂದ ದೂರವಿಟ್ಟು ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಇರುವಂತೆ ಸೂಚಿಸಲಾಗಿತ್ತು ಎಂದು ಎಎನ್‌ಐ ಸಹಿತ ಹಲವು ಮಾಧ್ಯಮಗಳು ಉಲ್ಲೇಖಿಸಿತ್ತು. ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಯಾವುದೇ ಪಾಠ ಇರಲಿಲ್ಲ ಎಂದು ಮಾಧ್ಯಮಗಳು ಉಲ್ಲೇಖಿಸಿತ್ತು.

ಜೂಮ್‌ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸಿದ್ದಾರೆ. ಈಗಾಗಲೇ ಹಿಜಾಬ್‌ ಪರವಾಗಿ ಹಲವಾರು ವಿಷಯಗಳನ್ನು ನ್ಯಾಯಾಲಯದಲ್ಲಿ ಹಿರಿಯ ವಕೀಲ ದೇವದತ್ತ ಕಾಮತ್‌ ಮಂಡಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ನ್ಯಾಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...