Homeಕರ್ನಾಟಕಮಹಿಳೆಯರಿಗೆ ಉಚಿತ ಬಸ್‌ಪಾಸ್ ವಿಚಾರದಲ್ಲಿ ಮಾತು ತಪ್ಪಿದ ರಾಜ್ಯ ಸರ್ಕಾರ: ‘ಏಪ್ರಿಲ್ ಫೂಲ್’ ಎಂದ ಕಾಂಗ್ರೆಸ್

ಮಹಿಳೆಯರಿಗೆ ಉಚಿತ ಬಸ್‌ಪಾಸ್ ವಿಚಾರದಲ್ಲಿ ಮಾತು ತಪ್ಪಿದ ರಾಜ್ಯ ಸರ್ಕಾರ: ‘ಏಪ್ರಿಲ್ ಫೂಲ್’ ಎಂದ ಕಾಂಗ್ರೆಸ್

- Advertisement -
- Advertisement -

ಏಪ್ರಿಲ್‌ 1ರಿಂದ ರಾಜ್ಯದ ಎಲ್ಲ ದುಡಿಯುವ ವರ್ಗದ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದರು. ಆದರೆ ರಾಜ್ಯ ಸರ್ಕಾರದ ಈ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ.

ಶಾಲಾ ವಿದ್ಯಾರ್ಥಿನಿಯರು, ದುಡಿಯುವ ಮಹಿಳೆಯರಿಗೆ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಉಚಿತ ಬಸ್‌ಪಾಸ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದರೆ ”ಸರ್ಕಾರದಿಂದ ಯಾವುದೇ ಆದೇಶ ಬಾರದ ಕಾರಣ ಪಾಸ್ ವಿತರಣೆ ಮಾಡಿಲ್ಲ” ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸರ್ಕಾರವನ್ನು ವ್ಯಂಗ್ಯ ಮಾಡಿ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ”ಏಪ್ರಿಲ್ 1ರಿಂದ ಎಲ್ಲಾ ದುಡಿಯುವ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಎಂಬ ಹೂವನ್ನು ಕಿವಿ ಮೇಲಿಟ್ಟಿದ್ದರು ಬಸವರಾಜ ಬೊಮ್ಮಾಯಿ. “ಏಪ್ರಿಲ್ 1ರಿಂದ” ಎಂದಿದ್ದೇ ಮಹಿಳೆಯರನ್ನು ಮೂರ್ಖರಾಗಿಸುವ ಸಲುವಾಗಿಯೇ? ಎಂದು ಬಿಜೆಪಿಗೆ ಪ್ರಶ್ನಿಸಿದೆ. ಏಪ್ರಿಲ್ 1ರಂದೇ ಬಸ್ ಪಾಸ್ ನೀಡದೆ ಮಹಿಳೆಯರಿಗೆ ಏಪ್ರಿಲ್ ಫೂಲ್ ಮಾಡಿದೆ ಈ ರಾಜ್ಯ ಬಿಜೆಪಿ ಸರ್ಕಾರ” ಎಂದು ಕಾಂಗ್ರೆಸ್ ಗೇಲಿ ಮಾಡಿದೆ.

ಈ ಹಿಂದೆ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

”ನಮ್ಮ ಬಾಲಕಿಯರ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ದೂರದ ಪ್ರದೇಶಗಳಿಂದ ಶಾಲೆಗೆ ಬರುವ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ಪಾಸ್‌ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಶಾಲೆ ಆರಂಭವಾಗುವ ಸಮಯ, ಬಿಡುವ ಸಮಯಕ್ಕೆ ಬಸ್‌ಗಳು ಲಭ್ಯವಿರಬೇಕು. ಅದಕ್ಕಾಗಿ ಪ್ರಸ್ತುತ ಸಂಚರಿಸುತ್ತಿರುವ ಬಸ್‌ಗಳ ಜತೆಗೆ ಪ್ರತಿ ತಾಲ್ಲೂಕಿಗೆ ಕನಿಷ್ಠ ಮೂರರಿಂದ ಐದು ಬಸ್‌ಗಳ ವ್ಯವಸ್ಥೆ ಮಾಡಬೇಕು. ಸಂಸ್ಥೆಯ ಬಸ್‌ಗಳು ಲಭ್ಯವಿಲ್ಲದಿದ ಪ್ರದೇಶಗಳಲ್ಲಿ ಗುತ್ತಿಗೆ ಆಧಾರದಲ್ಲಿ ಬಸ್‌ಗಳನ್ನು ತೆಗೆದುಕೊಳ್ಳಬೇಕು. ಮಿನಿ ಬಸ್‌ಗಳ ಬಳಕೆ ಮಾಡಬೇಕು. ಅದಕ್ಕೆ ಅಗತ್ಯವಿರುವ ಅನುದಾನ ಒದಗಿಸಲಾಗುವುದು” ಎಂದು ಬೊಮ್ಮಾಯಿ ಅವರು ಹೇಳಿದ್ದರು.

”ಮಹಿಳೆಯರಿಗೆ ಗೌರವದ ಜತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ದುಡಿಯುವ ಮಹಿಳೆಯರಿಗೆ ಉತ್ತೇಜನ ನೀಡಲು ಉಚಿತ ಬಸ್‌ಪಾಸ್‌ ನೀಡಲಾಗುತ್ತಿದೆ. ಬಜೆಟ್‌ನಲ್ಲೂ ಘೋಷಣೆ ಮಾಡಲಾಗಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...