ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಹೇಳಿದೆ. ಹೈಕೋರ್ಟ್‌ನಲ್ಲಿ ಅರ್ಜಿಯೊಂದನ್ನು ವಿಚಾರಣೆ ನಡೆಸುತ್ತಿರುವಾಗ ರಾಜ್ಯ ಸರ್ಕಾರ ಈ ಮಾಹಿತಿಯನ್ನು ಬಹಿರಂಗಪಡಿಸಿದೆ.
ಎಲ್ಲಾ ಪುನಾವರ್ತಿತ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಿದ್ದು, 35% ದಷ್ಟು ಅಂಕ ಮತ್ತು 5% ರಷ್ಟು ಗ್ರೇಸ್ ಅಂಕವನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಖಾಸಗಿಯಾಗಿ ಕಟ್ಟಿದ್ದ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳು ಪರೀಕ್ಷೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ
ಖಾಸಗಿಯಾಗಿ 17,477 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಆಗಸ್ಟ್ 31 ರ ಒಳಗೆ ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜಿಸುವಂತೆ ಹಾಗೂ ಸೆಪ್ಟಂಬರ್ 20 ರೊಳಗೆ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ಈ ಹಿಂದೆಯೆ ರದ್ದು ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪುನಾವರ್ತಿತ ವಿದ್ಯಾರ್ಥಿಗಳು ತಮ್ಮನ್ನು ಕೂಡಾ ಹಾಗೆಯೆ ಪಾಸ್ ಮಾಡಬೇಕು ಎಂದು ಹೈಕೋರ್ಟ್ ಕದ ತಟ್ಟಿದ್ದರು.
ಪಿಯುಸಿ ಪರೀಕ್ಷೆ ರದ್ದು ಮಾಡಿದ್ದರೂ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸುವುದಾಗಿ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಗ್ರೇಡ್ ಆಧಾರದಲ್ಲಿ ಪಾಸ್!



I have completed my 1pu last year but now I am a private candidate kindly cancel private students exam to ??