Homeಕರ್ನಾಟಕರಾಜ್ಯದಲ್ಲಿ ಅಸಂವಿಧಾನಾತ್ಮಕವಾಗಿ ಇನ್ನೊಬ್ಬ ಮುಖ್ಯಮಂತ್ರಿಯಿದ್ದಾರೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಅಸಂವಿಧಾನಾತ್ಮಕವಾಗಿ ಇನ್ನೊಬ್ಬ ಮುಖ್ಯಮಂತ್ರಿಯಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ, ಒಬ್ಬರು ಸಂವಿಧಾನಾತ್ಮಕವಾಗಿ ಆಯ್ಕೆಯಾದರೆ, ಮತ್ತೊಬ್ಬರು ಅಸಂವಿಧಾನಾತ್ಮಕವಾದ ಮುಖ್ಯಮಂತ್ರಿ. ಅಸಂವಿಧಾನಾತ್ಮಕ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ, ಎಲ್ಲದಕ್ಕೂ ಅವರೇ ಸಹಿ ಹಾಕುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪಕ್ಷಾಂತರ ಮಾಡಿರುವ ಶಾಸಕರು ನನ್ನನ್ನು ಭೇಟಿ ಮಾಡಿಲ್ಲ. ಆದರೆ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಾಕಷ್ಟು ಮಂದಿ ನನ್ನನ್ನು ಭೇಟಿ ಮಾಡಿದ್ದು, ಅವರೆಲ್ಲರೂ ಸಹಜವಾಗಿಯೇ ತಮ್ಮ ಅಸಮಾಧಾನವನ್ನು ಹೇಳಿಕೊಂಡಿದ್ದಾರೆ. ಬಿಜೆಪಿ ಆಂತರಿಕ ವಿಚಾರಗಳ ಬಗ್ಗೆ ನಾವು ಕೈಹಾಕಲು ಹೋಗುವುದಿಲ್ಲ. ಆದರೆ, ಬಿಜೆಪಿಯಲ್ಲಿ ಭಿನ್ನಮತ ಇರುವುದು ಸತ್ಯ ಎಂದು ಹೇಳಿದರು.

‘ಬಿಜೆಪಿ ಭಿನ್ನಮತದಲ್ಲಿ ಕಾಂಗ್ರೆಸ್‌ ಪಕ್ಷ ಕೈ ಹಾಕಲ್ಲ. ಅವರ ಭಿನ್ನಮತದಿಂದ ಸರ್ಕಾರ ಬಿದ್ದರೆ ನಾವು ಜವಾಬ್ದಾರರಲ್ಲ. ರಾಜ್ಯದಲ್ಲಿ ಸರ್ಕಾರ ಒಟ್ಟಾರೆಯಾಗಿ ಸತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ನೌಕರರಿಗೆ ಸಂಬಳ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ. ಇದು ಕೇವಲ ರಾಜ್ಯದ ಪರಿಸ್ಥಿತಿಯಲ್ಲ. ಇಡೀ ದೇಶವೇ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ‘ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಸರ್ಕಾರವು ಕೊರೊನಾ ವೈರಸ್‌ನ ನೆಪವೊಡ್ಡಿ ಮುಂದೂಡಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಲು ಚಿಂತನೆ ನಡೆಸಲಾಗುತ್ತಿದೆ. ನಾಮನಿರ್ದೇಶನ ಮಾಡಲೂ ಸಹ ಸಂವಿಧಾನದಲ್ಲಿ ಅವಕಾಶ ಇಲ್ಲ‘ ಎಂದು ಸಿದ್ದರಾಮಯ್ಯ ಹೇಳಿದರು.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ: ಸಿದ್ದರಾಮಯ್ಯ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...