Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...