Homeಮುಖಪುಟಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟಿದೆ; ಭಯೋತ್ಪಾದಕರ ಕೇಂದ್ರವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ

- Advertisement -

ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಬಿಜೆಪಿ ಈಗಾಗಲೆ ತಯಾರಿ ನಡೆಸುತ್ತಿದೆ. ಇದೀಗ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌, “ಪಶ್ಚಿಮ ಬಂಗಾಳದ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದ್ದು, ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದ್ದೆ’’ ಎಂದು ವಿವಾದ ಸೃಷ್ಟಿಸಿದ್ದಾರೆ.

“ಇತ್ತೀಚೆಗೆ ಅಲ್‌-ಖೈದಾ ಸದಸ್ಯರನ್ನು ಪಶ್ಚಿಮ ಬಂಗಾಳದ ಕೂಚ್‌ಬೆಹರ್‌ನಲ್ಲಿ ಪತ್ತೆಹಚ್ಚಲಾಗಿದೆ. ಅವರ ಜಾಲ ಪಶ್ಚಿಮ ಬಂಗಾಳದಲ್ಲಿ ಬೆಳೆಯುತ್ತಿದೆ. ರಾಜ್ಯವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಪರಿಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ’ ಎಂದು ದಿಲೀಪ್ ಘೋಷ್‌ ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಇದನ್ನೂ ಓದಿ: ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು ಸಣ್ಣ ಘಟನೆ: ಬಂಗಾಳ BJP ಅಧ್ಯಕ್ಷ ದಿಲೀಪ್ ಘೋಷ್

ವಿವಾದಾತ್ಮಕ ಹೇಳಿಕೆಗೆ ದಿಲೀಪ್ ಘೋಷ್ ಹೆಸರುವಾಸಿಯಾಗಿದ್ದು, ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಮತ್ತು ಕ್ರಮೇಣ ಇದು ಉತ್ತರ ಪ್ರದೇಶ ಮತ್ತು ಬಿಹಾರದಂತಹ ಮಾಫಿಯಾ ಆಡಳಿತದ ರಾಜ್ಯವಾಗುತ್ತಿದೆ ಎಂದು ವಿಪಕ್ಷಗಳಿಂದ ಭಾರಿ ಹಾಸ್ಯಕ್ಕೊಳಗಾಗಿದ್ದರು.

ಇದನ್ನೂ ಓದಿ: ಮಾಫಿಯಾ ರಾಜ್ ಹೇಳಿಕೆ: ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಬಿಜೆಪಿಯ ದಿಲೀಪ್ ಘೋಷ್

 

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

1
"ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ" ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ...
Wordpress Social Share Plugin powered by Ultimatelysocial