Homeಮುಖಪುಟಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ

- Advertisement -
- Advertisement -

ರಾಜ್ಯದ ಸರ್ಕಾರಿ ಸಂಸ್ಥೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 2022 ರಲ್ಲಿ ಹಿಂದಿನ ಪೀಠದ ಇಬ್ಬರು ನ್ಯಾಯಾಧೀಶರು ನೀಡಿದ ವಿಭಜಿತ ತೀರ್ಪಿನ ದೃಷ್ಟಿಯಿಂದ ಈ ವಿಷಯವನ್ನು ತೆಗೆದುಕೊಳ್ಳಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ಹೇಳಿದ್ದಾರೆ.

“ನಾನು ವಿಷಯವನ್ನು ಪರಿಶೀಲಿಸುತ್ತೇನೆ ಮತ್ತು ದಿನಾಂಕವನ್ನು ನಿಗದಿಪಡಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ನೀವು ರಿಜಿಸ್ಟ್ರಾರ್‌ಗೆ ಟಿಪ್ಪಣಿಯನ್ನು ಸಲ್ಲಿಸಿ” ಎಂದು ಸಿಜೆಐ ವಿದ್ಯಾರ್ಥಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಮೀನಾಕ್ಷಿ ಅರೋರಾ ಅವರಿಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ರಾಜ್ಯ ಸರ್ಕಾರವು ಮುಂದುವರಿಸಿರುವ ನಿಷೇಧದ ದೃಷ್ಟಿಯಿಂದ ಹೆಚ್ಚಿನ ವಿದ್ಯಾರ್ಥಿನಿಯರು ಕೆಲವು ಖಾಸಗಿ ಕಾಲೇಜುಗಳಿಗೆ ಸೇರಿದ್ದಾರೆ ಎಂದು ಅರೋರಾ ಅವರು ಸುಪ್ರೀಂಕೋರ್ಟ್‌ನ ಗಮನಸೆಳೆದಿದ್ದಾರೆ.

“ಆದಾಗ್ಯೂ, ಪರೀಕ್ಷೆಗಳನ್ನು ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ನಡೆಸಲಾಗುತ್ತದೆ… ಖಾಸಗಿ ಕಾಲೇಜುಗಳು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ವಿಷಯವನ್ನು ಮಧ್ಯಂತರ ಆದೇಶ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ಅರೋರಾ ಸಿಜೆಐಗೆ ತಿಳಿಸಿದ್ದಾರೆ.

ಫೆಬ್ರವರಿ 6 ರಿಂದ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಆದ್ಯತೆಯ ಮೇಲೆ ವಿಷಯವನ್ನು ಪಟ್ಟಿ ಮಾಡಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ, ಸಿಜೆಐ ಅವರು ಈ ವಿಷಯವನ್ನು ತ್ರಿಸದಸ್ಯ ಪೀಠಕ್ಕೆ ಹಂಚಬೇಕಾಗುತ್ತದೆ. ಪ್ರಕರಣದ ಪಟ್ಟಿಗಾಗಿ ಆಡಳಿತಾತ್ಮಕ ಭಾಗದಲ್ಲಿ ಸೂಕ್ತ ಆದೇಶಗಳನ್ನು ರವಾನಿಸುವುದನ್ನು ಅವರು ಪರಿಗಣಿಸುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕುರಿತು 2022 ರ ಅಕ್ಟೋಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಒಬ್ಬ ನ್ಯಾಯಾಧೀಶರು ಶಾಲೆಗಳಲ್ಲಿ ಸಮವಸ್ತ್ರವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ದೃಢಪಡಿಸಿದರೆ, ಇನ್ನೊಬ್ಬರು ಹಿಜಾಬ್ ಅನ್ನು ಆಯ್ಕೆಯ ವಿಷಯ ಎಂದು ಕರೆದಿದ್ದು ಅದರನ್ನು ಸರ್ಕಾರದಿಂದ ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪಿನಲ್ಲಿ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯವಲ್ಲ. ಹೀಗಾಗಿ ಏಕರೂಪದ ಸಮವಸ್ತ್ರದ ಆದೇಶವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಅಧಿಕಾರವಿದೆ ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದರು.

ಆದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹೇಮಂತ್‌ ಗುಪ್ತಾ ಅವರ ತೀರ್ಪಿಗಿಂತ ಭಿನ್ನವಾಗಿ ತೀರ್ಪು ನೀಡಿದ್ದು, ಎಲ್ಲಾ ಮೇಲ್ಮನವಿಗಳನ್ನು ಅಂಗೀಕರಿಸಿದ್ದರು. ತಮ್ಮ ತೀರ್ಪಿನ ಆಪರೇಟಿವ್ ಭಾಗವನ್ನು ಓದಿದ ನ್ಯಾಯಮೂರ್ತಿ ಧುಲಿಯಾ, “ಹಿಜಾಬ್ ಧರಿಸುವುದು ಮುಸ್ಲಿಂ ಹುಡುಗಿಯ ಆಯ್ಕೆಯ ವಿಷಯವಾಗಿದೆ. ಅದರ ವಿರುದ್ಧ ಯಾವುದೇ ನಿರ್ಬಂಧ ಹೇರಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ರಾಜ್ಯ ಸರ್ಕಾರದ ನಿಷೇಧದ ಅಧಿಸೂಚನೆಯನ್ನು ರದ್ದುಗೊಳಿಸಿದ್ದರು. ತೀರ್ಪಿನ ವೇಳೆ ಅವರು, ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣದ ಬಗ್ಗೆ ಕಾಳಜಿ ನನ್ನ ಮನಸ್ಸಿನಲ್ಲಿ ಇದೆ ಎಂದು ಹೇಳಿದ್ದರು.

ಭಿನ್ನ ತೀರ್ಪಿನ ಹಿನ್ನಲೆಯಲ್ಲಿ, ಸೂಕ್ತ ಪೀಠವನ್ನು ರಚಿಸುವುದಕ್ಕಾಗಿ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪ್ರಕರಣವನ್ನು ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...