Homeಮುಖಪುಟಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

- Advertisement -
- Advertisement -

ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೊ ಮುಲಕ್ಕಲ್, ತನ್ನನ್ನು ಅತ್ಯಾಚಾರ ಪ್ರಕರಣದಿಂದ ಬಿಡುಗಡೆ ಮಾಡಬೇಕೆಂದು ಕೋರಿ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇದರೊಂದಿಗೆ, ಅನೇಕ ಕೆಳ ನ್ಯಾಯಾಲಯಗಳಲ್ಲಿ ಅವರ ಇದೇ ರೀತಿಯ ಮನವಿಗಳನ್ನು ರದ್ದುಪಡಿಸಲಾಗಿದ್ದು, ಪ್ರಕರಣದಲ್ಲಿ ಮುಕ್ತ ನ್ಯಾಯಾಲಯದ ವಿಚಾರಣೆಗೆ ಫ್ರಾಂಕೊ ಮಾಡಿದ ಮನವಿಯನ್ನು ಕೂಡಾ ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಮುಂದುವರಿದ ವಿಚಾರಣೆ ಈ ತಿಂಗಳ 12 ರಂದು ನಡೆಯಲಿದೆ.

ಇದನ್ನೂ ಓದಿ: ರೇಪಿಸ್ಟ್ ರಾಘು ಮೇಲೆ ‘ಪ್ರಬಲಾ’ ಚಾರ್ಚ್‍ಶೀಟ್!!

ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆ ಈಗಾಗಲೇ ವಿಚಾರಣೆಯ ಆರು ಅಧಿವೇಶನಗಳಿಗೆ ಹಾಜರಾಗಿದ್ದು, ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸಂತ್ರಸ್ಥೆಯ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು ಮತ್ತು ಪ್ರತಿವಾದಿ ವಕೀಲರಿಂದ ಅವರನ್ನು ರಕ್ಷಿಸಲು ಕೋರಿ ಎಸ್‌ಒಎಸ್ ಸಲ್ಲಿಸಿದರು.

ಬಿಷಪ್ ಫ್ರಾಂಕೊ 2014 ಮತ್ತು 2016 ರ ನಡುವೆ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ರಂಗೀಲಾ ರಾಘುಸ್ವಾಮಿ ಚೇಲಾಗಳ ಕಿತಾಪತಿ, ಗಿರಿನಗರ ಪೊಲೀಸರ ಹುಚ್ಚಾಟದಿಂದ ಸತ್ತವರ ಮೇಲೆ ದಾಖಲಾಯ್ತು ಎಫ್‌ಐಆರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸತ್ಯ ಆದಷ್ಟು ಬೇಗ ಹೊರಬರಲಿದೆ..’; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

0
ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ...