Homeಮುಖಪುಟಕೇರಳ: ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಕೇರಳ: ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಎರಡನೇ ಕ್ಷೇತ್ರವಾಗಿ ಕೇರಳದ ವಯನಾಡ್‌‌‌‌ನಿಂದ ಸ್ಫರ್ಧಿಸಿ ಗೆದ್ದಿದ್ದರು.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ ಕ್ಷೇತ್ರದಿಂದ ಚುನಾಯಿತರಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ.

ಕೇರಳದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ ಸೋಲಾರ್‌ ಹಗರಣದ ಅಪರಾಧಿ ಸರಿತಾ ನಾಯರ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆಂದು ಮೂರು ಬಾರಿ ಕೈಗೆತ್ತಿಕೊಂಡಾಗಲೂ ಅರ್ಜಿದಾರರ ಪರ ಯಾರು ಹಾಜರಾಗದೆ ಇರುವುದರಿಂದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತು.

ಇದನ್ನೂ ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಸರಿತಾ ನಾಯರ್‌ ಅವರ ಉಮೇದುವಾರಿಕೆಯನ್ನು ವಯನಾಡ್‌ ಮತ್ತು ಎರ್ನಾಕುಲಂ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಹತ್ತಿದ್ದ ಸರಿತಾ ನಾಯರ್‌ ಅವರ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯ, ಎರಡು ಕ್ರಿಮಿನಲ್‌ ಅಪರಾಧದಲ್ಲಿ ದೋಷಿ ಎಂದು ಘೋಷಿಸಲ್ಪಟ್ಟ ಹಿನ್ನೆಲೆಯಲ್ಲಿ ಆಯೋಗವು ಅರ್ಜಿದಾರರ ಉಮೇದುವಾರಿಕೆಯನ್ನು ತಿರಸ್ಕರಿಸಿದ್ದು ಸರಿಯಾಗಿದೆ, ಈ ಕಾರಣಕ್ಕಾಗಿ ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗದು ಎಂದು ಹೇಳಿತ್ತು.

ಇದನ್ನು ಮತ್ತೇ ಪ್ರಶ್ನಿಸಿದ್ದ ಸರಿತಾ ನಾಯರ್‌ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಇದೀಗ ಅವರು ವಿಚಾರಣೆಗೆ ಹಾಜರಾಗದೆ ಇರುವುದರಿಂದ ಅರ್ಜಿಯನ್ನು ವಜಾಮಾಡಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್‌ 8 (3)ರ ಅನ್ವಯ ಅಭ್ಯರ್ಥಿಯು ಕ್ರಿಮಿನಲ್‌ ಅಪರಾಧದಲ್ಲಿ ಎರಡು ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾಗಿದ್ದರೆ ಅವರ ಉಮೇದುವಾರಿಕೆಯನ್ನು ಚುನಾವಣಾಧಿಕಾರಿ ತಿರಸ್ಕರಿಸಬಹುದಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಎರಡನೇ ಕ್ಷೇತ್ರವನ್ನಾಗಿ ಕೇರಳದ ವಯನಾಡ್‌ ಅನ್ನು ಆಯ್ಕೆ ಮಾಡಿಕೊಂಡಿದ್ದ ರಾಹುಲ್‌ ಗಾಂಧಿ, ದಾಖಲೆಯ 706,367 ಮತಗಳಿಂದ ಗೆದ್ದಿದ್ದರು. ಎದುರಾಳಿ ಅಭ್ಯರ್ಥಿ ಸಿಪಿಐನ ಪಿ.ಪಿ. ಸುನೀರ್‌ 274,597 ಮತ ಪಡೆದಿದ್ದರು.

ಇದನ್ನೂ ಓದಿ: ಕೇರಳ ಭೂಕುಸಿತ: ಮನೆ ಕಳೆದುಕೊಂಡಿದ್ದ ಸಹೋದರಿಯರಿಗೆ ನೆರವಾದ ರಾಹುಲ್ ಗಾಂಧಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

0
ಯೂಟ್ಯೂಬರ್ ಮನೀಶ್ ಕಶ್ಯಪ್ ಇಂದು ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ...