Homeಮುಖಪುಟತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

ತನ್ನ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಸಂಜೀವ್ ಭಟ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ತಮ್ಮ ವಿರುದ್ಧದ ದೂರುಗಳನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಸಂಜೀವ್ ಭಟ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಕರಣಗಳನ್ನು ವಜಾಗೊಳಿಸಲು ಗುಜರಾತ್ ಹೈಕೋರ್ಟ್ ಈಗಾಗಲೇ ನಿರಾಕರಿಸಿದೆ ಮತ್ತು ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2002ರ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾಯಕ ವ್ಯಕ್ತಿಗಳನ್ನು ಸಿಲುಕಿಸಲು ಸಂಚು ರೂಪಿಸಿದ ಆರೋಪ ಸಂಜೀವ್ ಭಟ್ ಮೇಲೆ ಹೊರಿಸಲಾಗಿದೆ. ಜೊತೆಗೆ ಅವರು ಮತ್ತು ಅವರ ಸಹೋದ್ಯೋಗಿಗಳು ಜನರನ್ನು ಅಕ್ರಮವಾಗಿ ಬಂಧಿಸಿ ಕಸ್ಟಡಿಯಲ್ಲಿಟ್ಟು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಂಧಿತರಾಗಿ ಬಿಡುಗಡೆಯಾದ 133 ಜನರಲ್ಲಿ ಮೂವರು ಸಂಜೀವ್ ವಿರುದ್ಧ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅರ್ಜಿದಾರರಾದ ಆರೋಪಿಗೆ ಸಮನ್ಸ್ ನೀಡಿದ ಮ್ಯಾಜಿಸ್ಟ್ರೇಟ್ ಆದೇಶ, ಹೈಕೋರ್ಟ್ ನೀಡಿದ ತೀರ್ಪು ಹಾಗೂ ಆದೇಶವನ್ನು ಪರಿಶೀಲಿಸಿದಾಗ, ಹೈಕೋರ್ಟ್‌ನ ತೀರ್ಪು ಮತ್ತು ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಮೋದಿ, ಅಮಿತ್ ಶಾ ಕುರಿತು ಕಟುಟೀಕೆಯೇ ಸಂಜೀವ್ ಭಟ್ ಜೀವಾವಧಿ ಶಿಕ್ಷೆಗೆ ಕಾರಣವೆ?

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ ಅದು ಪೊಲೀಸ್ ಅಧಿಕಾರಿಗಳಿಗೆ ಕೆಟ್ಟ ನಿದರ್ಶನವನ್ನು ನೀಡುತ್ತದೆ ಎಂದು ಭಟ್ ಪರ ವಕೀಲರು ಹೇಳಿದ್ದಾರೆ.

ಸಂಜೀವ್‌ ಭಟ್ ವಿರುದ್ಧ ಗುಜರಾತ್ ಪೊಲೀಸರು ಸೆಕ್ಷನ್ 468 (ವಂಚನೆಯ ಉದ್ದೇಶಕ್ಕಾಗಿ ನಕಲಿ ಮಾಡುವುದು), 471 (ನಿಜವಾದ ದಾಖಲೆಗಳನ್ನು ದುರುಪಯೋಗಪಡಿಸುವುದು), 194 (ಮರಣದಂಡನೆ ಅಪರಾಧದ ಶಿಕ್ಷೆಯನ್ನು ನೀಡುವ ಉದ್ದೇಶದಿಂದ ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು) ಮತ್ತು 120 (ಬಿ) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಐಪಿಎಸ್ ಆಗಿರುವ ಸಂಜೀವ್‌ ಭಟ್ ಅವರನ್ನು ಕಳೆದ ನಾಲ್ಕು ವರ್ಷಗಳಿಂದ ಬಂಧನದಲ್ಲಿ ಇಡಲಾಗಿದೆ. ಅವರ ವಿರುದ್ಧ ದಾಖಲಾಗಿದ್ದ ಮೂರು ದೂರುಗಳಲ್ಲಿ ಎರಡು ದೂರನ್ನು ಗುಜರಾತ್ ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನೂ ಓದಿ: ನಮ್ಮ ನಡುವೆ ರಾಜಿಯೆಲ್ಲಿ ಸಾಧ್ಯ? ಆರಂಭವಾಗಲಿ ಬಿಡಿ ಯುದ್ಧ…. – ಸಂಜೀವ್ ಭಟ್

ಆದರೆ, ಮೂರನೇ ದೂರನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ಆಲಿಸಿದ ಸುಪ್ರೀಂಕೋರ್ಟ್‌ ಈ ವಿಷಯದಲ್ಲಿ ಮತ್ತು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ನಿರ್ಧರಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅತ್ಯಾಚಾರ ಮತ್ತು ಕೊಲೆ ಮಾಡಿದವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಿರಪರಾದಿಗಳ ಸಹಾಯಕ್ಕೆ ಸುಪ್ರೀಂ ಕೋರ್ಟ್ ಸಹ ಬರುತ್ತಿಲ್ಲ, ಇದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...