Homeಮುಖಪುಟಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

ಮೂವರು ಅತ್ಯಾಚಾರಿ, ಕೊಲೆಗಡುಕರನ್ನು ಬಿಡುಗಡೆ ಮಾಡಿದ ಸುಪ್ರೀಂಕೋರ್ಟ್

“ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು.

- Advertisement -
- Advertisement -

2012ರಲ್ಲಿ ನಿರ್ಭಯಾ ಪ್ರಕರಣ ಘಟಿಸುವ ಒಂದು ತಿಂಗಳ ಮೊದಲು ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಅಪರಾಧಿಗಳನ್ನು ಸುಪ್ರೀಂಕೋರ್ಟ್ ಬಿಡುಗಡೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿಯ 19 ವರ್ಷದ ಹೆಣ್ಣುಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುತ್ತಿದೆ. “ಬೇಟೆಗಾಗಿ ಬೀದಿಗಿಳಿಯುವ ಪರಭಕ್ಷಕರು” ಎಂದು ಈ ಅಪರಾಧಿಗಳನ್ನು ದೆಹಲಿ ಹೈಕೋರ್ಟ್ ಬಣ್ಣಿಸಿತ್ತು ಎಂದು ವರದಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿರೂಪಗೊಂಡ ಹಾಗೂ ಸುಟ್ಟ ಸ್ಥಿತಿಯಲ್ಲಿ ಯುವತಿಯ ದೇಹವು ಹರಿಯಾಣದ ರೇವಾರಿ ಜಿಲ್ಲೆಯ ಹೊಲವೊಂದರಲ್ಲಿ ಫೆಬ್ರವರಿ 2012ರಲ್ಲಿ ಪತ್ತೆಯಾಗಿತ್ತು. ಅಪಹರಿಸಿದ ದಿನಗಳ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಸಿಕ್ಕಿತ್ತು. ಕಾರಿನ ಉಪಕರಣಗಳು ಮತ್ತು ಮಣ್ಣಿನ ಮಡಕೆಗಳಿಂದ ಯುವತಿಗೆ ಹೊಡೆಯಲಾಗಿದೆ ಎಂಬುದನ್ನು ತೀವ್ರವಾದ ಗಾಯದ ಗುರುತುಗಳು ಸೂಚಿಸಿದ್ದವು.

ದೆಹಲಿಯ ನಜಾಫ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಯುವತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಶವವನ್ನು ರೇವಾರಿ ಗದ್ದೆಯಲ್ಲಿ ಎಸೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಅಪಹರಣ, ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ರವಿಕುಮಾರ್, ರಾಹುಲ್ ಮತ್ತು ವಿನೋದ್ ಎಂಬ ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಫೆಬ್ರವರಿ 2014ರಲ್ಲಿ ಶಿಕ್ಷೆ ವಿಧಿಸಿತು. ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ನೀಡಲಾಗಿತ್ತು.

ಮರಣದಂಡನೆ ಶಿಕ್ಷೆಯನ್ನು ವಿಧಿಸಿದ ಕೋರ್ಟ್, “ಬೇಟೆಯನ್ನು ಹುಡುಕುತ್ತಾ ಬೀದಿಗಳಲ್ಲಿ ಚಲಿಸುವ ಪರಭಕ್ಷಕ ಅಪರಾಧಿಗಳಿವರು” ಎಂದು ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್ ತೀರ್ಪನ್ನು ಮೂವರು ಅಪರಾಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತಮ್ಮ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂದು ಕೋರಿದ್ದರು. ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠವು ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು. ಮೂವರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಮರಣದಂಡನೆ ಶಿಕ್ಷೆಯನ್ನು ಕಡಿಮೆ ಮಾಡಬೇಕೆಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿ ಪೊಲೀಸರು ವಿರೋಧಿಸಿದ್ದರು. ಅಪರಾಧ ನಡೆದಿರುವುದು ಸಂತ್ರಸ್ತರ ವಿರುದ್ಧ ಮಾತ್ರವಲ್ಲ, ಸಮಾಜದ ವಿರುದ್ಧ ಎಂದು ಅವರು ಹೇಳಿದ್ದರು. ಅಪರಾಧದ ಹೇಯ ಸ್ವರೂಪವನ್ನು ಪೊಲೀಸರು ಉಲ್ಲೇಖಿಸಿದ್ದರು. ಅಪರಾಧಿಗಳಿಗೆ ಯಾವುದೇ ರಿಯಾಯಿತಿಯನ್ನು ನೀಡಬಾರದೆಂದು ಮನವಿ ಮಾಡಿದ್ದರು.

ಅಪರಾಧಿಗಳ ಪರವಾಗಿ ವಾದಿಸಿದ ವಕೀಲರು, “ಅಪರಾಧಿಗಳ ವಯಸ್ಸು, ಕುಟುಂಬದ ಹಿನ್ನೆಲೆ ಮತ್ತು ಹಿಂದಿನ ಕ್ರಿಮಿನಲ್ ದಾಖಲೆಯನ್ನು ಉಲ್ಲೇಖಿಸಿ ಶಿಕ್ಷೆಯನ್ನು ಕಡಿತಗೊಳಿಸಬೇಕು” ಎಂದು ಒತ್ತಾಯಿಸಿದ್ದರು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಯುವತಿಯ ಪೋಷಕರು ಪ್ರತಿಕ್ರಿಯೆ ನೀಡಿದ್ದು, “ತೀರ್ಪಿನಿಂದಾಗಿ ಘಾಸಿಯಾಗಿದ್ದೇವೆ. ಆದರೆ ನಮ್ಮ ಕಾನೂನು ಹೋರಾಟವನ್ನು ಮುಂದುವರೆಸುತ್ತೇವೆ” ಎಂದು ತಿಳಿಸಿದ್ದಾರೆ. “ನಾವು ನ್ಯಾಯಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಇದು ಕುರುಡು ನ್ಯಾಯ ವ್ಯವಸ್ಥೆ” ಎಂದು ನೊಂದು ನುಡಿದಿದ್ದಾರೆ.

ನ್ಯಾಯಕ್ಕಾಗಿ ತಮ್ಮ 12 ವರ್ಷಗಳ ಹೋರಾಟವನ್ನು ಪ್ರಸ್ತಾಪಿಸಿದ ಅವರು, ಅಪರಾಧಿಗಳು ನ್ಯಾಯಾಲಯದ ಒಳಗೆಯೂ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣ ನಡೆದ ನಂತರ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಚಲಿಸುವ ಬಸ್‌ನಲ್ಲಿ 23 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ದೇಶದ್ಯಾಂತ ಬೃಹತ್ ಪ್ರತಿಭಟನೆಗಳು ನಡೆದವು. ಲೈಂಗಿಕ ದೌರ್ಜನ್ಯದ ಮೇಲೆ ಕಠಿಣ ಕಾನೂನು ರೂಪಿಸಲು ಈ ಹೋರಾಟ ಕಾರಣವಾಗಿತ್ತು.

ಇದನ್ನೂ ಓದಿರಿ: 10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

ಅತ್ಯಾಚಾರಿಗಳಿಗೆ ಬಿಡುಗಡೆ ನೀಡುತ್ತಿರುವ ಬೆಳವಣಿಗೆಗಳು ಇತ್ತೀಚಿನ ದಿನಗಳಲ್ಲಿ ತಲೆದೋರಿದ್ದು, ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು ಟೀಕೆಗೆ ಗುರಿಯಾಗಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೇಲೆ ಅತ್ಯಾಚಾರ ಎಸಗಲಾಗಿತ್ತು.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಇತ್ತೀಚೆಗೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...