Homeಮುಖಪುಟಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಟ್ವೀಟ್‌ಗಳ ವಿರುದ್ಧದ ವಿಚಾರಣೆ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಟ್ವಿಟರ್ ಸಾಮಾಜಿಕ ಮಾಧ್ಯಮ ವೇದಿಕೆಯಾಗಿರುವುದರಿಂದ ಭೂಷಣ್ ಅವರ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

- Advertisement -
- Advertisement -

ನ್ಯಾಯಾಂಗಕ್ಕೆ ಅವಹೇಳನಕಾರಿ ಎಂದು ಪರಿಗಣಿಸಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಅನಿರ್ದಿಷ್ಟ ಟ್ವೀಟ್‌ಗಳಿಗಾಗಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪ್ರಷಾಂತ್ ಭೂಷಣ್ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದರಿಂದ ಟ್ವಿಟರ್ ಇಂಡಿಯಾ ವಿರುದ್ಧ ಸಹ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪ್ರಾರಂಭಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ವಿಷಯವನ್ನು ಬುಧವಾರ ವಿಚಾರಣೆ ನಡೆಸಲಿದೆ.

ಪ್ರಶಾಂತ್ ಭೂಷಣ್ ನ್ಯಾಯಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬಹಳ ಹಿಂದಿನಿಂದಲೂ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕದ ಮಧ್ಯೆ ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ವಿಷಯಗಳನ್ನು ಸರ್ವೋಚ್ಚ ನ್ಯಾಯಾಲಯವು ನಿಭಾಯಿಸಿದ ರೀತಿಯ ಬಗ್ಗೆ ವಿರೋಧ ವ್ಯಕ್ತಪಡಿಸಿ ಧ್ವನಿ ಎತ್ತಿದ್ದರು.

ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಾದ ವರವಾರ ರಾವ್ ಮತ್ತು ಸುಧಾ ಭಾರದ್ವಾಜ್ ಅವರಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಸಹ ಅವರು ನೀಡಿದ್ದರು.

ಕಳೆದ ಒಂದು ದಶಕದಲ್ಲಿ, 2 ಜಿ ಹಗರಣದಿಂದ ಹಿಡಿದು, ರಫೇಲ್, ವೈದ್ಯಕೀಯ ಕಾಲೇಜು ಹಗರಣ ಮತ್ತು ಬಿರ್ಲಾ-ಸಹಾರಾ ಡೈರಿಗಳವರೆಗೆ ಉನ್ನತ ವ್ಯಕ್ತಿಗಳ ಭ್ರಷ್ಟಾಚಾರದ ಕುರಿತು ಹಲವಾರು ಸಮಸ್ಯೆಗಳನ್ನು ಎತ್ತಿತೋರಿಸಿ ಪ್ರಶ್ನಿಸುವಲ್ಲಿ ಪ್ರಶಾಂತ್ ಭೂಷಣ್ ಪ್ರಮುಖ ಪಾತ್ರ ವಹಿಸಿದ್ದರು.

ಆದರೆ ಈಗ ಭೂಷಣ್ ಅವರ ಯಾವ ಟ್ವೀಟ್‌ಗಳ ಕುರಿತು ವಿಚಾರಣೆಯನ್ನು ಪ್ರಾರಂಭಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

ಮುಖ್ಯ ನ್ಯಾಯಮೂರ್ತಿಗಳಾಗಿರುವ ಎಸ್. ಎ. ಬಾಬ್ಡೆ, ರಂಜನ್ ಗೊಗೊಯ್, ದೀಪಕ್ ಮಿಶ್ರಾ ಮತ್ತು ಜೆ. ಎಸ್. ಖೇಹರ್ ಸೇರಿ ದೇಶದಲ್ಲಿ ಅಘೋಷಿತ ತುರ್ತುಸ್ಥಿತಿ ಇದೆ ಪ್ರಜಾಪ್ರಭುತ್ವ ನಾಶದಲ್ಲಿದೆ ಎಂದು ಹೇಳಿದ್ದರ ಕುರಿತು, ಸುಪ್ರೀಂ ಕೋರ್ಟ್ ಪಾತ್ರವನ್ನು ಟೀಕಿಸಿ ಭೂಷಣ್ ಅವರು ಟ್ವೀಟ್ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ಹೆಲ್ಮೆಟ್ ಮತ್ತು ಮಾಸ್ಕ್ ಇಲ್ಲದೇ ಬಿಜೆಪಿ ನಾಯಕರೊಬ್ಬರ ಹಾಡ್ಲಿ ಡೇವಿಡ್ಸನ್ ಗಾಡಿಯಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದರು.

ಆದಾಗ್ಯೂ, ಹೆಚ್ಚಿನ ಕಾನೂನು ತಜ್ಞರು ಈ ಟ್ವೀಟ್‌ಗಳು ಪದಗಳನ್ನು ಔಪಚಾರಿಕವಾಗಿ ಅರ್ಥೈಸಿಕೊಳ್ಳುವುದರಿಂದ ನ್ಯಾಯಾಲಯದ ನಿಂದನೆಗೆ ಕಾರಣವಾಗುವುದಿಲ್ಲ ಎಂದಿದ್ದಾರೆ.

ಗೌತಮ್ ಭಾಟಿಯಾ ಹೀಗೆ ಟ್ವೀಟ್ ಮಾಡಿದ್ದಾರೆ;


ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...