Homeಚಳವಳಿಗೌತಮ್ ನವಲಖಾ ಜಾಮೀನು ಅರ್ಜಿ - ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಗೌತಮ್ ನವಲಖಾ ಜಾಮೀನು ಅರ್ಜಿ – ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

- Advertisement -

ಭೀಮಾ ಕೊರೆಗಾವ್‌ ಹಿಂಸಾಚಾರ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಹೋರಾಟಗಾರ ಗೌತಮ್ ನವಲಖಾ ಸಲ್ಲಿಸಿದ್ದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಫೆಬ್ರವರಿ 8 ರಂದು ಅವರ ಮನವಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ತನಿಖಾ ಸಂಸ್ಥೆ ಎನ್‌ಐಎ ನ್ಯಾಯಾಲಯದ ಜುಲೈ 12, 2020 ರ ತೀರ್ಪನ್ನು ಉಲ್ಲೇಖಿಸಿ, “ವಿಶೇಷ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ಹೇಳಿತ್ತು. ನಂತರ ನವಲಖಾ ಫೆಬ್ರವರಿ 19 ರಂದು ಸುಪ್ರೀಂ ಕೋರ್ಟ್‌ಗೆ ತೆರಳಿದ್ದರು.

ಇದನ್ನೂ ಓದಿ: ‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಇಂದಿರಾ ಬ್ಯಾನರ್ಜಿ ಮತ್ತು ಕೆ.ಎಂ. ಜೋಸೆಫ್ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠವು ಈ ತಿಂಗಳ ಆರಂಭದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ನೋಟಿಸ್ ನೀಡಿತ್ತು.

69 ವರ್ಷದ ನವಲಖಾ ತಾಲೋಜ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಎನ್ಐಎ ನಿಗದಿತ 90 ದಿನಗಳ ಅವಧಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿರಲಿಲ್ಲ. ಹಾಗಾಗಿ ಡೀಫಾಲ್ಟ್ ಜಾಮೀನು ಪಡೆಯಲು ಅರ್ಹನಾಗಿರುವ ಕಾರಣಕ್ಕಾಗಿ ಅವರು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಅಡಿಯಲ್ಲಿ ಶಾಸನಬದ್ಧ ಜಾಮೀನು ಕೋರಿದ್ದರು.

ಇದನ್ನೂ ಓದಿ: ‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial