Homeಮುಖಪುಟಸಿಜೆಐ ಕಛೇರಿ ಕೂಡ ಆರ್‌ಟಿಐ ವ್ಯಾಪ್ತಿಗೆ ಒಳಪಡುತ್ತದೆ: ಸುಪ್ರೀಂಕೋರ್ಟ್‌ ತೀರ್ಪು

ಸಿಜೆಐ ಕಛೇರಿ ಕೂಡ ಆರ್‌ಟಿಐ ವ್ಯಾಪ್ತಿಗೆ ಒಳಪಡುತ್ತದೆ: ಸುಪ್ರೀಂಕೋರ್ಟ್‌ ತೀರ್ಪು

- Advertisement -
- Advertisement -

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶರ ಕಚೇರಿ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ ಎಂದು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ತೀರ್ಪು ನೀಡಿದೆ. ಈ ಮೂಲಕ 2010ರಲ್ಲಿ ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌, ನ್ಯಾಯಮೂರ್ತಿ ಸಂಜೀವ್‌ ಖನ್ನಾ, ದೀಪಕ್‌ ಗುಪ್ತಾ, ಎನ್‌ವಿ ರಮಣ ಮತ್ತು ಡಿ.ವೈ.ಚಂದ್ರಚೂಡ ಇದ್ದ ಪಂಚ ಪೀಠ ತೀರ್ಪು ನೀಡಿದೆ. ದೆಹಲಿ ಹೈಕೋರ್ಟ್ ಮತ್ತು ಕೇಂದ್ರ ಮಾಹಿತಿ ಆಯೋಗದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಗಳು 2010ರಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಪಂಚಪೀಠ ಏಪ್ರಿಲ್ 04 ರಂದು ತೀರ್ಪು ಕಾಯ್ದಿರಿಸಿತ್ತು.

ಇನ್ನು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳು ಒಂದೇ ಅಭಿಪ್ರಾಯ ವ್ಯಕ್ತಪಡಿಸಿದರು. ಭಿನ್ನ ಅಭಿಪ್ರಾಯ ವ್ಯಕ್ತವಾಗದೇ ಪ್ರಕಟವಾದ ಬಹುಮತದ ತೀರ್ಪು ಇದಾಗಿದೆ. ಇನ್ನು ಪಾದರರ್ಶಕತೆ ಕಾಪಾಡಿಕೊಂಡು ಹೋಗಲು ತೀರ್ಪು ಅನುಕೂಲ ಮಾಡಿಕೊಡುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಇದು ಧಕ್ಕೆ ತರುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರಲಿದ್ದಾರೆ. ಮಾಹಿತಿ ಹಕ್ಕು ಮತ್ತು ಖಾಸಗಿ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಎಂದು ಪಂಚ ಪೀಠ ಹೇಳಿದೆ. .

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...