Homeರಾಜಕೀಯಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್; ‘ಬಾಳಾಸಾಹೇಬರ ಹಿಂದುತ್ವದ ವಿಜಯ’ ಎಂದ ಏಕನಾಥ್ ಶಿಂಧೆ

- Advertisement -
- Advertisement -

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಅನರ್ಹತೆ ನೋಟಿಸ್‌ನ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸಲ್ಲಿಸಿರುವ ಮನವಿಯ ಮೇರೆಗೆ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ. ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಇದನ್ನು “ಬಾಳಾಸಾಹೇಬರ ಹಿಂದುತ್ವದ ವಿಜಯ” ಎಂದು ಬಣ್ಣಿಸಿದ್ದಾರೆ.

ವಿವಾದದ ಮುಂದಿನ ವಿಚಾರಣೆಯನ್ನು ಜುಲೈ 11 ರಂದು ನ್ಯಾಯಾಲಯ ಪಟ್ಟಿ ಮಾಡಿದೆ. ಶಿಂಧೆ ಬದಲಿಗೆ ಅಜಯ್ ಚೌಧರಿ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ (ಎಸ್‌ಎಸ್‌ಎಲ್‌ಪಿ) ನಾಯಕ ಎಂದು ಗುರುತಿಸಿರುವ ಡೆಪ್ಯುಟಿ ಸ್ಪೀಕರ್ ನರಹರಿ ಜಿರ್ವಾಲ್ ಅವರ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಶಿಂಧೆ ಹಾಗೂ 15 ಶಾಸಕರ ಅನರ್ಹತೆಯ ಬಗ್ಗೆಗಿನ ಎರಡು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ ಸಂಸದ ಸಂಜಯ್‌ ರಾವತ್ ಅವರಿಗೆ ಸೋಮವಾರದಂದು ಜಾರಿ ನಿರ್ದೇಶನಾಲಯ ಸಮನ್ಸ್‌‌ ಜಾರಿ ಮಾಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಜಕೀಯ ಬಿಕ್ಕಟ್ಟಿನ ಸಮಯದಲ್ಲಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಡುವುದನ್ನು ತಡೆಯಲು ಮಾಡಿರುವ ‘ಪಿತೂರಿ’ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪಕ್ಷದ ಬಂಡಾಯಗಾರರ ವಿರುದ್ಧ ಬೀದಿಗಿಳಿದ ಶಿವಸೇನಾ ಕಾರ್ಯಕರ್ತರು

“ಜಾರಿ ನಿರ್ದೇಶನಾಲಯ ಉಲ್ಲೇಖಿಸಿರುವ ಯಾವುದೇ ಕಂಪನಿಗಳೊಂದಿಗೆ ನಾನು ಸಂಪರ್ಕ ಹೊಂದಿಲ್ಲ. ನಾಳೆ, ಅಲಿಬಾಗ್‌ನಲ್ಲಿ ನಾನು ಮಾತನಾಡಬೇಕಾದ ರ್‍ಯಾಲಿ ಇರುವುದರಿಂದ ನಾನು ಜಾರಿ ನಿರ್ದೇಶನಾಲಯಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಅದೊಂದು ಕಾನೂನು ಹೋರಾಟ. ನನ್ನನ್ನು ಬಂಧಿಸುವಂತೆ ಬಿಜೆಪಿಯಿಂದ ನಿಮಗೆ ಆದೇಶವಿದ್ದರೆ ನನ್ನನ್ನು ಬಂಧಿಸಿ” ಎಂದು ರಾವತ್ ಹೇಳಿದ್ದಾರೆ.

“ನಮ್ಮಲ್ಲಿ ಕೆಲವರ ವಿರುದ್ಧ ಇಂತಹ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ನಮಗೆಲ್ಲರಿಗೂ ತಿಳಿದಿತ್ತು. ಇಂತಹ ಬೋಗಸ್ ಪ್ರಕರಣಗಳಿಗೆ ನಾನು ಹೆದರುವುದಿಲ್ಲ ಮತ್ತು ಗುವಾಹಟಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

ಶಾಸಕರ ಅನರ್ಹತೆ ಮತ್ತು ಅಜಯ್ ಚೌಧರಿ ಅವರನ್ನು ಶಿವಸೇನಾ ಪಕ್ಷದ ನಾಯಕರನ್ನಾಗಿ ನೇಮಿಸುವುದರ ವಿರುದ್ಧ ಬಂಡಾಯ ಶಾಸಕರು ಬಾಂಬೆ ಹೈಕೋರ್ಟ್‌ಗೆ ಯಾಕೆ ಅರ್ಜಿ ಸಲ್ಲಿಸಿಲ್ಲ ಎಂಬ ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಬಂಡಾಯ ಶಾಸಕರು-ಮೂಲಗಳು

ಈ ಪ್ರಶ್ನೆಗೆ ಉತ್ತರಿಸಿರುವ ಏಕನಾಥ್ ಶಿಂಧೆ ಅವರ ವಕೀಲರು,“ಶಾಸಕಾಂಗ ಪಕ್ಷದ ಅಲ್ಪಸಂಖ್ಯಾತ ಸದಸ್ಯರು ರಾಜ್ಯ ಯಂತ್ರವನ್ನು ಬುಡಮೇಲು ಮಾಡುತ್ತಾ ನಮ್ಮ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಅಸ್ಸಾಂನಿಂದ ನಮ್ಮ ಮೃತ ದೇಹಗಳು ಹಿಂತಿರುಗುತ್ತವೆ ಎಂದು ಅವರು ಹೇಳುತ್ತಿದ್ದಾರೆ. ಮುಂಬೈನಲ್ಲಿ ನಮ್ಮ ಹಕ್ಕುಗಳನ್ನು ಚಲಾಯಿಸುವಷ್ಟು ವಾತಾವರಣವು ಅನುಕೂಲಕರವಾಗಿಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...