Homeಮುಖಪುಟಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

ಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿರುವ ‘ಶಿವಲಿಂಗ’ ಎಷ್ಟು ವರ್ಷಗಳ ಹಿಂದಿನದ್ದು ಎನ್ನುವುದನ್ನು ನಿರ್ಧರಿಸಲು ಕಾರ್ಬನ್ ಡೇಟಿಂಗ್ ಸೇರಿದಂತೆ ”ವೈಜ್ಞಾನಿಕ ಸಮೀಕ್ಷೆ”ಗೆ ಅವಕಾಶ ನೀಡುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರ ಪೀಠವು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಹುಜೆಫಾ ಅಹ್ಮದಿ ಅವರ ಸಲ್ಲಿಕೆಗಳನ್ನು ಗಮನಿಸಿದ ನಂತರ ಅರ್ಜಿಯನ್ನು  ಆಲಿಸಿತು.

ಹೈಕೋರ್ಟ್ ಆದೇಶದ ವಿರುದ್ಧ ಮಸೀದಿ ಸಮಿತಿಯ ಮನವಿಗೆ ಸುಪ್ರೀಂ ಕೋರ್ಟ್ ಕೇಂದ್ರ, ಉತ್ತರ ಪ್ರದೇಶ ಸರ್ಕಾರ ಮತ್ತು ಹಿಂದೂ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ. “ಆಕ್ಷೇಪಿಸಲಾದ ಆದೇಶದ ಪರಿಣಾಮಗಳು ನಿಕಟ ಪರಿಶೀಲನೆಗೆ ಅರ್ಹವಾದ ಕಾರಣ, ಆದೇಶಸ ಅನುಷ್ಟಾನವನ್ನು ಮುಂದಿನ ದಿನಾಂಕದವರೆಗೆ  ಮುಂದೂಡಲಾಗುವುದು” ಎಂದು ಪೀಠವು ಹೇಳಿದೆ.

”ಶಿವಲಿಂಗ್”ದ ವೈಜ್ಞಾನಿಕ ಸಮೀಕ್ಷೆಯನ್ನು ಸದ್ಯಕ್ಕೆ ಮುಂದೂಡುವ ಮನವಿಗೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡೂ ಒಪ್ಪಿಕೊಂಡಿವೆ.

ಇದನ್ನೂ ಓದಿ: ರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಕೆಳ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ ಅಲಹಾಬಾದ್ ಹೈಕೋರ್ಟ್, ಕಳೆದ ವರ್ಷ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಳೆದ ವರ್ಷ ವಿಡಿಯೋಗ್ರಾಫಿಕ್ ಸಮೀಕ್ಷೆಯ ವೇಳೆ ಕಂಡುಬಂದಿದೆ ಎಂದು ಹೇಳಲಾದ “ಶಿವಲಿಂಗ” ಕಾರ್ಬನ್ ಡೇಟಿಂಗ್ ಸೇರಿದಂತೆ “ವೈಜ್ಞಾನಿಕ ಸಮೀಕ್ಷೆ” ಗೆ ಮೇ 12 ರಂದು ನಿರ್ದೇಶನ ನೀಡಿತ್ತು.

ಕಳೆದ ವರ್ಷ ಮೇ 16ರಂದು ಮಸೀದಿ ಆವರಣದಲ್ಲಿ ಸಮೀಕ್ಷೆಯ ನಡೆಸುವಾಗ ಒಂದು ರಚನೆ ಕಂಡುಬಂದಿದ್ದು, ಅದನ್ನು ಹಿಂದೂಗಳ ಕಡೆಯವರು “ಶಿವಲಿಂಗ” ಮತ್ತು ಮುಸ್ಲಿಂ ಕಡೆಯವರು ”ಕಾರಂಜಿ” ಎಂದು ಹೇಳಿಕೊಂಡಿದ್ದರು.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಅಕ್ಟೋಬರ್ 14, 2022 ರಂದು ”ಶಿವಲಿಂಗ” ದ ವೈಜ್ಞಾನಿಕ ಸಮೀಕ್ಷೆ ಮತ್ತು ಕಾರ್ಬನ್ ಡೇಟಿಂಗ್‌ಗಾಗಿ ಅವರ ಅರ್ಜಿಯನ್ನು ತಿರಸ್ಕರಿಸಿದ ನಂತರ, ಅರ್ಜಿದಾರರಾದ ಲಕ್ಷ್ಮಿ ದೇವಿ ಮತ್ತು ಇತರ ಮೂವರು ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...