Homeಮುಖಪುಟಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ಅರ್ಜಿದಾರರ ಪರ ಹಾಜರಾದ ವಕೀಲರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶಾಲೆಗಳಿಗೆ ಹೆಚ್ಚಿನ ಶುಲ್ಕ ವಿಧಿಸಲು ಅವಕಾಶ ನೀಡಿವೆ ಎಂದು ಸೂಚಿಸಿದರು.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ ಶಾಲಾ ಶುಲ್ಕವನ್ನು ಮುಂದೂಡಬೇಕೆಂದು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಜೊತೆಗೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಏಕೆಂದರೆ ವಾಸ್ತವ ಸ್ಥಿತಿಗತಿಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಬಹುದು. ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಚರ್ಚಿಸಿ ಎಂದು ಹೇಳಿದೆ.

“ಈ ಮನವಿಯನ್ನು ರಾಜ್ಯ ಹೈಕೋರ್ಟ್‌ಗಳ ಮುಂದೆ ಸಲ್ಲಿಸಬೇಕಿತ್ತು. ಇದು ಸುಪ್ರೀಂ ಕೋರ್ಟ್‌ಗೆ ಏಕೆ ಬಂದಿದೆ? ಪರಿಸ್ಥಿತಿ ನಿಜಕ್ಕೂ ತೀವ್ರವಾಗಿದೆ” ಎಂದು ತ್ರಿಸದಸ್ಯ ನ್ಯಾಯಾಧೀಶರ ಪೀಠದ ಮುಖ್ಯಸ್ಥರಾದ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಮೂರ್ತಿಗಳಾದ ಆರ್. ಸುಭಾಷ್ ರೆಡ್ಡಿ ಮತ್ತು ಎ ಎಸ್ ಬೋಪಣ್ಣ ಅವರನ್ನೂ ಒಳಗೊಂಡ ನ್ಯಾಯಪೀಠ, “ಪ್ರತಿ ರಾಜ್ಯದ ಸಮಸ್ಯೆಗಳು ವಿಭಿನ್ನವಾಗಿವೆ. ನೀವು ಇಡೀ ದೇಶಕ್ಕಾಗಿ ಮನವಿ ಸಲ್ಲಿಸಿದ್ದೀರಿ. ಇಡೀ ದೇಶಕ್ಕಾಗಿ ಯಾರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಸ್ಪಷ್ಟವಲ್ಲದ ವಿಷಯವಾಗಿದೆ” ಎಂದಿದ್ದಾರೆ.

ಅರ್ಜಿದಾರರ ಪರ ಹಾಜರಾದ ವಕೀಲರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶಾಲೆಗಳಿಗೆ ಹೆಚ್ಚಿನ ಶುಲ್ಕ ವಿಧಿಸಲು ಅವಕಾಶ ನೀಡಿವೆ ಎಂದು ಸೂಚಿಸಿದರು.

“ಈ ಹಂತದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಅರ್ಜಿದಾರರು ತಮ್ಮ ಮನವಿಯನ್ನು ಹಿಂತೆಗೆದುಕೊಳ್ಳಲು ಮತ್ತು ಹೈಕೋರ್ಟ್‌ಗಳನ್ನು ಸಂಪರ್ಕಿಸುವಂತೆ ಹೇಳಲಾಗಿದೆ.

ರಾಜಸ್ಥಾನ, ಒಡಿಶಾ, ಪಂಜಾಬ್, ಗುಜರಾತ್, ಹರಿಯಾಣ, ಉತ್ತರಾಖಂಡ, ದೆಹಲಿ ಮತ್ತು ಮಹಾರಾಷ್ಟ್ರದ ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿದ ಮನವಿಯು ಹಣಕಾಸಿನ ತೊಂದರೆಗಳನ್ನು ಉಲ್ಲೇಖಿಸಿ ಲಾಕ್ ಡೌನ್ ಅವಧಿಗೆ ಶಾಲಾ ಶುಲ್ಕವನ್ನು ಪಾವತಿಸುವುದನ್ನು ನಿಷೇಧಿಸಲು ಅಥವಾ ಮುಂದೂಡಲು ಕೋರಿತ್ತು.

ಆನ್‌ಲೈನ್ ವರ್ಚುವಲ್ ತರಗತಿಗಳ ನಡವಳಿಕೆಗೆ ನಿಜವಾದ ಖರ್ಚಿನ ಆಧಾರದ ಮೇಲೆ ಪ್ರಮಾಣಾನುಗುಣವಾದ ಶುಲ್ಕವನ್ನು ಮಾತ್ರ ವಿಧಿಸಲು ಖಾಸಗಿ ಅನುದಾನರಹಿತ / ಅನುದಾನಿತ ಶಾಲೆಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಮತ್ತು ರಾಜ್ಯಗಳನ್ನು ಕೋರಬೇಕೆಂದು ನ್ಯಾಯಾಲಯವನ್ನು ಕೋರಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಮನವಿಯಲ್ಲಿ ಸೂಚಿಸಲಾಗಿದೆ.


ಇದನ್ನೂ ಓದಿ: ಶಾಲಾ ಕಾಲೇಜುಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಪಶ್ಚಿಮ ಬಂಗಾಳದಾದ್ಯಂತ ಎಸ್‌ಎ‌ಫ್‌ಐ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...