Homeಕರ್ನಾಟಕಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

ಜಾರ್ಖಂಡ್ ಸಿಎಂ ವಿರುದ್ಧ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌‌ಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಪ್ರಶ್ನಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದೆ.

ಗಣಿಗಾರಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸೋರೆನ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಹೈಕೋರ್ಟ್ ನಡೆಸಿತ್ತು. ಸೊರೆನ್ ಮನವಿಯನ್ನು ಅಂಗೀಕರಿಸಿರುವ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೇಮಂತ್ ಸೊರೆನ್ ಅವರು ಟ್ವಿಟರ್‌ನಲ್ಲಿ “ಸತ್ಯಮೇವ ಜಯತೇ!” ಎಂಬ ಸಂದೇಶದೊಂದಿಗೆ ಸುಪ್ರೀಂ ಕೋರ್ಟ್‌ನ ಆದೇಶವನ್ನು ಹಂಚಿಕೊಂಡಿದ್ದಾರೆ.

2021ರಲ್ಲಿ ತಮಗೆ ತಾವೇ ಗಣಿ ಗುತ್ತಿಗೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ನೀಡಿತ್ತು. ಸೋರೆನ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಲಾಗಿತ್ತು. ಚುನಾವಣಾ ಆಯೋಗವು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ರಮೇಶ್ ಬೈಸ್‌ಗೆ ಶಿಫಾರಸು ಮಾಡಿತ್ತು.

ಜುಲೈನಲ್ಲಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವು ಗಣಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್‌ ಅವರ ಸಹಾಯಕ ಪಂಕಜ್ ಮಿಶ್ರಾ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು. ಮಿಶ್ರಾ ಅವರ ಬ್ಯಾಂಕ್ ಖಾತೆಗಳಿಂದ ₹ 11.88 ಕೋಟಿ ವಶಪಡಿಸಿಕೊಂಡ ನಂತರ, ಮಿಶ್ರಾ ಅವರ ಮನೆಯಿಂದ ₹ 5.34 ಕೋಟಿ “ಲೆಕ್ಕ ರಹಿತ” ನಗದು ಪತ್ತೆಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿತ್ತು. ಮೂರು ತಿಂಗಳ ಹಿಂದೆ ಸೋರೆನ್ ಅವರ ಪತ್ರಿಕಾ ಸಲಹೆಗಾರ ಅಭಿಷೇಕ್ ಪ್ರಸಾದ್ ಅವರನ್ನೂ ಇ.ಡಿ. ಪ್ರಶ್ನಿಸಿತ್ತು.

ಮುಖ್ಯ ಆರೋಪಿ ಮಿಶ್ರಾ ಅವರ ಮನೆಯಿಂದ ಹೇಮಂತ್ ಸೊರೆನ್ ಅವರ ಪಾಸ್‌ಬುಕ್ ಮತ್ತು ಅವರು ಸಹಿ ಮಾಡಿದ ಕೆಲವು ಚೆಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಹೇಳಿರುವುದಾಗಿ ವರದಿಯಾಗಿತ್ತು.

ಹೇಮಂತ್ ಸೊರೆನ್ ಅವರ ರಾಜಕೀಯ ಪ್ರತಿನಿಧಿಯಾಗಿರುವ ಪಂಕಜ್ ಮಿಶ್ರಾ ಅವರು ತಮ್ಮ ಸಹಚರರ ಮೂಲಕ ಮುಖ್ಯಮಂತ್ರಿಗಳ ವಿಧಾನಸಭಾ ಕ್ಷೇತ್ರವಾದ ಬರ್ಹೈತ್‌ನಲ್ಲಿ ಅಕ್ರಮ ಗಣಿಗಾರಿಕೆ ವ್ಯವಹಾರವನ್ನು “ನಿಯಂತ್ರಿಸುತ್ತಾರೆ” ಎಂದು ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿರಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಸೊರೆನ್ ಅವರು ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಇತ್ತೀಚಿನ ಇಡಿ ಸಮನ್ಸ್ ಅನ್ನು “ಬುಡಕಟ್ಟು ಮುಖ್ಯಮಂತ್ರಿಗೆ ಕಿರುಕುಳ ನೀಡುವ ಸಂಚಿನ ಭಾಗ” ಎಂದು ಕರೆದಿದ್ದಾರೆ.

“ನಾನು ತಪ್ಪಿತಸ್ಥನಾಗಿದ್ದರೆ, ನೀವು ನನ್ನನ್ನು ಏಕೆ ಪ್ರಶ್ನಿಸುತ್ತಿದ್ದೀರಿ? ನಿಮಗೆ ಸಾಧ್ಯವಾದರೆ ಬಂದು ನನ್ನನ್ನು ಬಂಧಿಸಿ” ಎಂದು ಅವರು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದರು.

“ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಜಾರ್ಖಂಡ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ಕಳಹಿಸಿದೆ. ನಾನು ಇ.ಡಿ. ಮತ್ತು ಸಿಬಿಐಗೆ ಹೆದರುವುದಿಲ್ಲ. ಇದು ಸಾಂವಿಧಾನಿಕ ಸಂಸ್ಥೆಗಳನ್ನು ವಿರೋಧಿಸುವ ಯಾರೊಬ್ಬರ ಧ್ವನಿಯನ್ನು ಹತ್ತಿಕ್ಕಲು ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗವಾಗಿದೆ” ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಕಳೆದ ವಾರ ಸೊರೆನ್ ಭಾಷಣ ಮಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...