Homeಮುಖಪುಟಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

ಪ್ರೊ.ಜಿ.ಎನ್. ಸಾಯಿಬಾಬಾ ಬಿಡುಗಡೆಯ ಆದೇಶ ಅಮಾನತು ಮಾಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಮಾವೋವಾದಿ ಸಂಪರ್ಕಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪನ್ನು ಸುಪ್ರೀಂ ಕೋರ್ಟ್ ಶನಿವಾರ ಅಮಾನತುಗೊಳಿಸಿದೆ. ಈ ಅಮಾನತಿನಿಂದಾಗಿ ಸಾಯಿಬಾಬಾ ಸೇರಿದಂತೆ ಐವರ ಬಿಡುಗಡೆಗೆ ತಡೆ ಆಗಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

ತಮ್ಮ ಬಂಧನದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿತ್ತು. ಆದರೆ ಬಾಂಬೆ ಹೈಕೋರ್ಟ್‌‌ನ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತುರ್ತು ಮನವಿಯನ್ನು ಸಲ್ಲಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ಆಲಿಸಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬೇಲಾ ತ್ರಿವೇದಿ ಅವರ ಪೀಠದ ವಿಶೇಷ ವಿಚಾರಣೆಯನ್ನು ನಿಗದಿಪಡಿಸಿತ್ತು ಮತ್ತು ಹೈಕೋರ್ಟ್‌ ನೀಡಿದ್ದ ತೀರ್ಪಗೆ ತಡೆ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಶುಕ್ರವಾರ ಸುಪ್ರೀಂಕೋರ್ಟ್‌ ನಿರಾಕರಿಸಿತ್ತು.

ಇದನ್ನೂ ಓದಿ: ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಬಂಧನಕ್ಕೊಳಗಾದ ಎಂಟು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ ಶುಕ್ರವಾರ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಶುಕ್ರವಾರ ಆದೇಶಿಸಿತ್ತು.

2017 ರಲ್ಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾಯಿಬಾಬಾ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದರು. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಪ್ರಕರಣದಲ್ಲಿ ಅವರ ಜೊತೆಗೆ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿತ್ತು. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...