Homeಮುಖಪುಟಹಿಜಾಬ್ ನಿಷೇಧ ಪ್ರಕರಣದ ಕುರಿತು ತೀರ್ಪು ನೀಡಲಿರುವ ಸುಪ್ರೀಂಕೋರ್ಟ್‌‌

ಹಿಜಾಬ್ ನಿಷೇಧ ಪ್ರಕರಣದ ಕುರಿತು ತೀರ್ಪು ನೀಡಲಿರುವ ಸುಪ್ರೀಂಕೋರ್ಟ್‌‌

- Advertisement -
- Advertisement -

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ (ಇಂದು) ಬೆಳಿಗ್ಗೆ 10:30 ಕ್ಕೆ ನೀಡುವ ನಿರೀಕ್ಷೆಯಿದೆ. ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು 10 ದಿನಗಳ ಕಾಲ ವಾದಗಳನ್ನು ಆಲಿಸಿ, ಸೆಪ್ಟೆಂಬರ್ 22 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಪೀಠದ ನೇತೃತ್ವದ ನ್ಯಾಯಮೂರ್ತಿ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿರುವ ಕಾರಣ ತೀರ್ಪು ಈ ವಾರದ ಪಟ್ಟಿಯಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಚಾರಣೆಯ ಸಮಯದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ ಅರ್ಜಿದಾರರ ಪರ ಹಾಜರಾದ ವಕೀಲರು, ಮುಸ್ಲಿಂ ಹುಡುಗಿಯರು ತರಗತಿಗೆ ಹಿಜಾಬ್ ಧರಿಸಿ ಆಗಮಿಸುವುದನ್ನು ತಡೆಯುವುದರಿಂದ ಅವರ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಇದರಿಂದಾಗಿ ಅವರು ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸುವ ರಾಜ್ಯ ಸರ್ಕಾರ ಹೊರಡಿಸಿದ್ದ ಫೆಬ್ರವರಿ 5, 2022 ರ ಆದೇಶ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ವಕೀಲರು ಗಮನಸೆಳೆದಿದ್ದರು. ಹಿಜಾಬನ್ನು ಹಿಂದೂಗಳು ಧರಿಸಿರುವ ಘೂಂಗಾಟ್ ಅಥವಾ ಬಿಂದಿಗೆ ಮತ್ತು ಸಿಖ್ಖರ ಟರ್ಬನ್‌ಗಳಿಗೆ ಹೋಲಿಸಿದ್ದರು.

ಕೆಲವು ವಕೀಲರು ಈ ವಿಷಯವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೂಡಾ ವಾದಿಸಿದ್ದರು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ವಕೀಲರು, ವಿವಾದ ಹುಟ್ಟುಹಾಕಿರುವ ಸರ್ಕಾರದ ಆದೇಶ ಧರ್ಮ ತಟಸ್ಥವಾಗಿದೆ ಎಂದು ಪ್ರತಿಪಾದಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಆಂದೋಲನವು ‘ಸ್ವಾಭಾವಿಕ’ ಅಲ್ಲ ಎಂದು ಹೇಳಿದ್ದರು.

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ಗುಂಪು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಮಾರ್ಚ್ 15 ರಂದು ಹೈಕೋರ್ಟ್ ವಜಾಗೊಳಿಸಿತ್ತು. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು.

ಇದನ್ನೂ ಓದಿ: ಹಿಜಾಬ್ ವಿವಾದದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಸಾಮಾಜಿಕ ಪ್ರತ್ಯೇಕತೆ ಅನುಭವಿಸುತ್ತಿದ್ದಾರೆ: ಪಿಯುಸಿಎಲ್ ವರದಿ

ಫೆಬ್ರವರಿ 5, 2022 ರಂದು ರಾಜ್ಯ ಸರ್ಕಾರ ಹಿಜಾಬ್ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಮುಸ್ಲಿಂ ಹುಡುಗಿಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...