Homeಮುಖಪುಟ"ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ": ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

- Advertisement -
- Advertisement -

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ ‘ಐತಿಹಾಸಿಕ ಅನ್ಯಾಯ’ ಎಂದು ಕರೆದಿದ್ದಾರೆ ಮತ್ತು ಗುರುವಾರ (ಏ16) ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ ನೀಡಿದ್ದಾರೆ.

“ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ದಕ್ಷಿಣ ರಾಜ್ಯಗಳನ್ನು ಶಿಕ್ಷಿಸಲಾಗುತ್ತಿದೆಯೇ” ಎಂದು ಸ್ಟಾಲಿನ್ ಪ್ರಶ್ನಿಸಿದ್ದು, ಈ ಕ್ರಮವು ದಕ್ಷಿಣದಾದ್ಯಂತ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ಎಚ್ಚರಿಸಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಯನ್ನು ‘ಗಂಭೀರ ಅಪಾಯ’ ಎಂದು ಕರೆದಿರುವ ಸ್ಟಾಲಿನ್, ಕ್ಷೇತ್ರ ಮರುವಿಂಗಡನೆ ವಿರುದ್ಧ ಹೋರಾಟ ರೂಪಿಸಲು ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ನಡೆಸಿದರು.

“ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಮೇಲೆ ಇಳಿದಿದೆ… ಇದು ಬರೀ ಪಕ್ಷಗಳು ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ವಿಷಯವಲ್ಲ. ಇದು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವ ವಿಷಯ. ನಮ್ಮ ಪ್ರಜಾಪ್ರಭುತ್ವವನ್ನು ಕಾಪಾಡಲು ಭಾರತದಾದ್ಯಂತ ಎಲ್ಲಾ ಪಕ್ಷಗಳು ಮತ್ತು ಸಂಸದರು ಒಂದಾಗಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಿದ ನಂತರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಈ ಕ್ರಮವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು (ಮೂರನೇ ಒಂದು ಭಾಗದಷ್ಟು) ಮೀಸಲಾತಿಯನ್ನು ಜಾರಿಗೆ ತರುವುದರೊಂದಿಗೆ ಸಂಬಂಧ ಹೊಂದಿದೆ.

ಎಕ್ಸ್‌ನ ಮತ್ತೊಂದು ಪೋಸ್ಟ್‌ನಲ್ಲಿ ಸ್ಟಾಲಿನ್ ಅವರು, “ಕ್ಷೇತ್ರ ಮರುವಿಂಗಡನೆ ಭಾರತದ ಪ್ರಗತಿಗೆ ಕೊಡುಗೆ ನೀಡಿದ್ದಕ್ಕಾಗಿ ನಮಗೆ ವಿಧಿಸುತ್ತಿರುವ ಶಿಕ್ಷೆಯೇ” ಎಂದು ಪ್ರಶ್ನಿಸಿದ್ದಾರೆ. “ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳಿಗೆ ಮರುಪಾವತಿ ಮಾಡುವ ವಿಧಾನ ಇದುವೇ?” ಎಂದು ಕೇಳಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರ ನಾಳೆ ಸಂಸತ್ತಿನಲ್ಲಿ ಮಂಡಿಸಲು ಯೋಜಿಸಿರುವ ಕ್ಷೇತ್ರ ಮರುವಿಂಗಡನೆ ತಿದ್ದುಪಡಿಯು ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳ ವಿರುದ್ಧದ ಬೃಹತ್ ಐತಿಹಾಸಿಕ ಅನ್ಯಾಯವಾಗಿದೆ. ವಿಂಧ್ಯ ಪರ್ವತಗಳ ದಕ್ಷಿಣದಲ್ಲಿರುವ ಪ್ರತಿಯೊಬ್ಬ ದಕ್ಷಿಣ ಭಾರತೀಯರು ಕೋಪದಿಂದ ಕುದಿಯುತ್ತಿದ್ದಾರೆ” ಎಂದು ಸ್ಟಾಲಿನ್ ಬರೆದುಕೊಂಡಿದ್ದಾರೆ.

“ಬಿಜೆಪಿ ಬೆಂಕಿಯೊಂದಿಗೆ ಆಟವಾಡುತ್ತಿದೆ. ತಮಿಳುನಾಡಿನಾದ್ಯಂತ, ಕ್ಷೇತ್ರ ಮರುವಿಂಗಡನೆ ವಿರೋಧಿಸಿ ನಾಳೆ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಿಂದ ಕಪ್ಪು ಬಾವುಟಗಳು ಮೇಲೇರಲಿವೆ… ಕೇಂದ್ರ ಸರ್ಕಾರ ತಮಿಳುನಾಡಿನ ಧ್ವನಿಯನ್ನು ಗೌರವಿಸಲು ಮತ್ತು ತನ್ನ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದರೆ, ನೀವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನೀವು ತೆರಬೇಕಾದ ಬೆಲೆ ಭಾರೀ ಪ್ರಮಾಣದಲ್ಲಿರುತ್ತದೆ. ಡಿಎಂಕೆ ಅಧ್ಯಕ್ಷನಾಗಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸ್ವಾಭಿಮಾನಿ ತಮಿಳನಾಗಿ ಇದು ನನ್ನ ಕಠಿಣ ಎಚ್ಚರಿಕೆ” ಎಂದು ಸ್ಟಾಲಿನ್ ಖಾರವಾಗಿ ಹೇಳಿದ್ದಾರೆ.

ಈ ಪ್ರಕ್ರಿಯೆ ರಾಜ್ಯದ ಹಿತಾಸಕ್ತಿಗಳಿಗೆ ಹಾನಿ ಮಾಡಿದರೆ ಅಥವಾ ದಕ್ಷಿಣ ರಾಜ್ಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರಿದರೆ ತಮಿಳುನಾಡು ದೊಡ್ಡ ಪ್ರಮಾಣದ ಪ್ರತಿಭಟನೆಯನ್ನು ಪ್ರಾರಂಭಿಸುತ್ತದೆ ಎಂದು ಸ್ಟಾಲಿನ್ ಮಂಗಳವಾರ (ಏ.14) ಎಚ್ಚರಿಸಿದ್ದರು. ಏಪ್ರಿಲ್ 16 ರಂದು ನಡೆಯುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಉಲ್ಲೇಖಿಸಿರುವ ಅವರು, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳ ಮಧ್ಯೆ ಸಂಸತ್ತಿನ ವಿಶೇಷ ಅಧಿವೇಶನವನ್ನು ‘ಬಲವಂತವಾಗಿ ಕರೆಯಲಾಗಿದೆ’ ಎಂದು ಹೇಳಿದ್ದರು.

ವಿಶೇಷ ಅಧಿವೇಶನದಲ್ಲಿ, ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡನೆ ಕುರಿತು ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತರಲು ಉದ್ದೇಶಿಸಿದೆ. ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಮೇಲೆ ಕೇಂದ್ರವು ತನ್ನ ನಿರ್ಧಾರವನ್ನು ಒತ್ತಾಯಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಸೀಮಿತ ವಿಂಗಡಣೆಯನ್ನು ಜಾರಿಗೆ ತರುವ ಈ ಆತುರದ ಪ್ರಯತ್ನವು ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಸ್ಪಷ್ಟ ದಾಳಿಯಾಗಿದೆ. ಅದಕ್ಕಿಂತ ಹೆಚ್ಚಾಗಿ, ಇದು ರಾಜ್ಯಗಳ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ನೀವು ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ಇನ್ನು ಮುಂದೆ ನೋಡಲಿದ್ದೀರಿ. 1950 ಮತ್ತು 1960ರ ದಶಕದ ಡಿಎಂಕೆ ಪಕ್ಷದ ಆವೇಶ ಮತ್ತು ಸ್ಫೂರ್ತಿಯನ್ನು ಭಾರತವು ಮತ್ತೊಮ್ಮೆ ಸಾಕ್ಷೀಕರಿಸಲಿದೆ. ಇದನ್ನು ಬೆದರಿಕೆ ಎಂದು ತಪ್ಪಾಗಿ ಭಾವಿಸಬೇಡಿ; ಇದೊಂದು ಎಚ್ಚರಿಕೆ. ನೀವು ಇದನ್ನು ಬೆದರಿಕೆ ಎಂದೇ ವ್ಯಾಖ್ಯಾನಿಸಲು ಬಯಸಿದರೂ ನಮಗೇನೂ ತೊಂದರೆಯಿಲ್ಲ. ಹೌದು, ಇದು ತಮಿಳುನಾಡಿನಿಂದ ನೀಡುತ್ತಿರುವ ಎಚ್ಚರಿಕೆ” ಸ್ಟಾಲಿನ್ ಖಾರವಾಗಿ ನುಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...