Homeಮುಖಪುಟಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟಕ್ಕೆ ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದೆ, ಆದರೆ ಕೇಂದ್ರದ ಮೋದಿ ಸರ್ಕಾರ ಮಾತ್ರ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಕೂಡಾ ಸಿದ್ಧವಾಗಿಲ್ಲ ಎಂದು ಶಿವಸೇನೆ ಶನಿವಾರ ಕೇಂದ್ರದ ವಿರುದ್ದ ಕಿಡಿ ಕಾರಿದೆ.

ಹಿಂದಿನ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾದ ವ್ಯವಸ್ಥೆಯೆ ಈ ಕಠಿಣ ಸಂದರ್ಭವನ್ನು ಎದುರಿಸಲು ದೇಶಕ್ಕೆ ಸಹಾಯ ಮಾಡಿದೆ ಎಂದು ಶಿವಸೇನೆ ಹೇಳಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

“ದೇಶದಲ್ಲಿ ಕೊರೊನಾ ವೈರಸ್ ಹರಡುವ ವೇಗದಿಂದಾಗಿ ಭಾರತವು ಜಗತ್ತಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಅದು ಕೊರೊನಾ ವಿರುದ್ಧದ ಹೋರಾಟದಲ್ಲಿ ಗರಿಷ್ಠ ಸಂಖ್ಯೆಯ ದೇಶಗಳು ಭಾರತಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದೆ. ಬಾಂಗ್ಲಾದೇಶ 10,000 ರೆಮ್‌ಡೆಸಿವಿರ್ ಬಾಟಲುಗಳನ್ನು ಕಳುಹಿಸಿದರೆ, ಭೂತಾನ್ ವೈದ್ಯಕೀಯ ಆಮ್ಲಜನಕವನ್ನು ಕಳುಹಿಸಿದೆ. ನೇಪಾಳ, ಮ್ಯಾನ್ಮಾರ್ ಮತ್ತು ಶ್ರೀಲಂಕಾ ಸಹ ‘ಆತ್ಮನಿರ್ಭರ್’ ಭಾರತಕ್ಕೆ ಸಹಾಯವನ್ನು ನೀಡಿವೆ” ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಪಕ್ಷವು ತಿಳಿಸಿದೆ.

“ಸ್ಪಷ್ಟವಾಗಿ ಹೇಳುವುದಾದರೆ, ನೆಹರೂ-ಗಾಂಧಿ ನಿರ್ಮಿಸಿದ ವ್ಯವಸ್ಥೆಯಲ್ಲಿ ಭಾರತ ಉಳಿದುಕೊಂಡಿದೆ. ಅನೇಕ ಬಡ ದೇಶಗಳು ಭಾರತಕ್ಕೆ ಸಹಾಯವನ್ನು ನೀಡುತ್ತಿವೆ. ಈ ಹಿಂದೆ ಪಾಕಿಸ್ತಾನ, ರುವಾಂಡಾ ಮತ್ತು ಕಾಂಗೋ ಮುಂತಾದ ದೇಶಗಳು ಇತರರಿಂದ ಸಹಾಯ ಪಡೆಯುತ್ತಿದ್ದವು. ಆದರೆ ಇಂದಿನ ಆಡಳಿತಗಾರರ ತಪ್ಪು ನೀತಿಗಳಿಂದಾಗಿ ಭಾರತವು ಈಗ ಆ ಪರಿಸ್ಥಿತಿಯನ್ನು ಎದುರಿಸುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಆದರೆ ಈ ಬಡ ದೇಶಗಳು ಭಾರತಕ್ಕೆ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೆ, ದೆಹಲಿಯಲ್ಲಿನ 20,000 ಕೋಟಿ ಮೌಲ್ಯದ ಸೆಂಟ್ರಲ್ ವಿಸ್ಟಾದ ಯೋಜನೆಯನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಿಲ್ಲ ಎಂದು ಶಿವಸೇನೆ ಹೇಳಿದೆ.

ಒಂದು ಕಡೆ ಭಾರತವು ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭೂತಾನ್ ಮುಂತಾದ ದೇಶಗಳ ಸಹಾಯವನ್ನು ಸ್ವೀಕರಿಸುತ್ತಿದೆ, ಮತ್ತೊಂದೆಡೆ ಬಹು ಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಪ್ರಧಾನಿ ಮೋದಿ ಸಿದ್ಧರಿಲ್ಲ ಎಂಬ ಬಗ್ಗೆ ಯಾರೂ ವಿಷಾದ ವ್ಯಕ್ತಪಡಿಸುತ್ತಿಲ್ಲ ಎಂದು ಪಕ್ಷವು ಆಶ್ಚರ್ಯ ವ್ಯಕ್ತಪಡಿಸಿದೆ.

ಕೊರೊನಾ ಎರಡನೇ ಅಲೆಯ ವಿರುದ್ದ ಜಗತ್ತು ಹೋರಾಡುತ್ತಿದ್ದರೆ, ಮೂರನೇ ಅಲೆವು ಇದಕ್ಕಿಂತ ಹೆಚ್ಚು ತೀವ್ರವಾಗಿರುತ್ತದೆ ಎಂದು ತಜ್ಞರು ಊಹಿಸಿದ್ದಾರೆ ಎಂದು ಶಿವಸೇನೆ ಹೇಳಿದೆ. ಆದರೆ ಆಡಳಿತಾರೂಢ ಬಿಜೆಪಿ ಇಂದಿಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...