Homeಅಂತರಾಷ್ಟ್ರೀಯಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

ಕೆಲವೆ ಗಂಟೆಗಳಲ್ಲಿ ಹೊಸ ಸರ್ಕಾರ ರಚಿಸಲಿರುವ ತಾಲಿಬಾನ್‌

- Advertisement -
- Advertisement -

ತಾಲಿಬಾನ್‌‌‌ ಇಂದು ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರವನ್ನು ಘೋಷಿಸಲು ಸಜ್ಜಾಗಿದೆ ಎಂದು ವರದಿಗಳು ಹೇಳಿವೆ. ಅಷ್ಟೇ ಅಲ್ಲದೆ ದೇಶದಲ್ಲಿ ಆಹಾರ ಪೂರೈಕೆಯ ಅಭಾವ ಕಾಡುತ್ತಿದ್ದು, ದೇಶವು ಬಡತನಕ್ಕೆ ಜಾರುತ್ತಿದೆ ಎಂದು ವರದಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಅಂತರ್‌ರಾಷ್ಟ್ರೀಯ ಮಾನವೀಯ ನೆರವು ಪಡೆಯಲು ಸಹಿಷ್ಣು ಸರ್ಕಾರವನ್ನು ಸ್ಥಾಪಿಸಲು ತಾಲಿಬಾನ್‌ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಒತ್ತಡವಿದೆ.

ಪ್ರಸ್ತಾಪಿತ ತಾಲಿಬಾನ್‌ ಸರ್ಕಾರವು ಇರಾನಿನ ನಾಯಕತ್ವದ ಮಾದರಿಯಲ್ಲಿರುತ್ತದೆ ಎಂದು ವರದಿಯಾಗಿದ್ದು, ತಾಲಿಬಾನ್‌‌ನ ಉನ್ನತ ಧಾರ್ಮಿಕ ನಾಯಕ ಮುಲ್ಲಾ ಹಿಬಾತುಲ್ಲಾ ಅಖುಂನ್‌ಜಾದ ಅಫ್ಘಾನಿಸ್ತಾನದ ಸರ್ವೋಚ್ಚ ಅಧಿಕಾರದ ಪಟ್ಟವನ್ನು ಏರಲಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ತಿಳಿದಿರುವ ತಾಲಿಬಾನ್‌ ಅಧಿಕಾರಿಗಳ ಪ್ರಕಾರ, ಇಂದಿನ ಶುಕ್ರವಾರದ ಪ್ರಾರ್ಥನೆಯ ನಂತರ ಹೊಸ ಆಡಳಿತವನ್ನು ಘೋಷಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು, ಹೊಸ ಸರ್ಕಾರದ ಕುರಿತು ಸಮಾಲೋಚನೆ ಮತ್ತು ಚರ್ಚೆಯನ್ನು ಈಗಾಗಲೇ ಮಾಡಲಾಗಿದೆ. ಹೊಸ ರಚನೆಯ ಪ್ರಕಾರ, ದೇಶದ ಅಧ್ಯಕ್ಷರು ಸರ್ವೋಚ್ಚ ನಾಯಕನ ಕೆಳಗೆ ಇರುತ್ತಾರೆ.

ಹೊಸ ಸರ್ಕಾರದಲ್ಲಿ 60 ವರ್ಷದ ಮುಲ್ಲಾ ಅಖುಂನ್‌ಜಾದ ತಾಲಿಬಾನ್ ಸರ್ಕಾರದ ಸರ್ವೋಚ್ಚ ನಾಯಕರಾಗಿರುತ್ತಾರೆ. ಇದು ಇರಾನ್‌ ನಾಯಕತ್ವದ ಮಾದರಿಯಾಗಿದೆ. ಅಲ್ಲಿ ಸರ್ವೋಚ್ಚ ನಾಯಕನೆ ದೇಶದ ಅತ್ಯುನ್ನತ ನಾಯಕನಾಗಿದ್ದು, ರಾಜಕೀಯ ಮತ್ತು ಧಾರ್ಮಿಕ ನೀತಿಗಳ ಮುಖ್ಯಸ್ಥನಾಗಿ ಕಾರ್ಯ ನಿರ್ವಹಿಸುತ್ತಾರೆ. ಅವರು ದೇಶದ ಅಧ್ಯಕ್ಷರಿಗಿಂತ ಉನ್ನತ ಸ್ಥಾನದಲ್ಲಿದ್ದು, ದೇಶದ ಮಿಲಿಟರಿ, ಸರ್ಕಾರ ಮತ್ತು ನ್ಯಾಯಾಂಗದ ಮುಖ್ಯಸ್ಥರನ್ನು ನೇಮಿಸುತ್ತಾರೆ. ದೇಶದ ರಾಜಕೀಯ, ಧಾರ್ಮಿಕ ಮತ್ತು ಸೇನಾ ವ್ಯವಹಾರಗಳಲ್ಲಿ ಸರ್ವೋಚ್ಚ ನಾಯಕನ ತೀರ್ಮಾನವೆ ಅಂತಿಮ.

ಮುಲ್ಲಾ ಅಖುಂನ್‌ಜಾದ ಅವರು ಸರ್ಕಾರದ ನಾಯಕರಾಗಿರುತ್ತಾರೆ ಮತ್ತು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿ ಆಯೋಗದ ಹಿರಿಯ ಅಧಿಕಾರಿ ಮುಫ್ತಿ ಇನಾಮುಲ್ಲಾ ಸಮಂಗಾನಿ ಹೇಳಿದ್ದು, ಅಧ್ಯಕ್ಷರು ಅವರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ ಎಂದು ಅವರು ಸೂಚಿಸಿದ್ದಾರೆ. ಮುಲ್ಲಾ ಅಖುಂನ್‌ಜಾದ ಅವರು ತಾಲಿಬಾನ್‌ನ ಉನ್ನತ ಧಾರ್ಮಿಕ ನಾಯಕರಾಗಿದ್ದು, 15 ವರ್ಷಗಳಿಂದ ಬಲೂಚಿಸ್ತಾನ ಪ್ರಾಂತ್ಯದ ಕಚ್ಲಾಕ್ ಪ್ರದೇಶದ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ಪಾಕಿಸ್ತಾನದ ಸೆರೆಮನೆಯಲ್ಲಿದ್ದ ತಾಲಿಬಾನ್‌ನ ಸಹ-ಸಂಸ್ಥಾಪಕ ಮತ್ತು ಉಪ ನಾಯಕರಾಗಿರುವ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರು ಕೂಡಾ ಸರ್ಕಾರದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

2013 ರಲ್ಲಿ ನಿಧನರಾದ ತಾಲಿಬಾನ್‌ ಸಂಸ್ಥಾಪಕ ಮುಲ್ಲಾ ಮುಹಮ್ಮದ್ ಒಮರ್ ಅವರ ಪುತ್ರ ಮೊಹಮ್ಮದ್ ಯಾಕೂಬ್ ಮತ್ತು ಇನ್ನೊಬ್ಬ ಉಪನಾಯಕ ಸಿರಾಜುದ್ದೀನ್ ಹಕ್ಕಾನಿ ಸೇರಿದಂತೆ ತಾಲಿಬಾನ್‌‌ನ ಹಿರಿಯ ನಾಯಕರು ಸರ್ಕಾರದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಹೊಸ ಸರ್ಕಾರದ ಅಡಿಯಲ್ಲಿ, ಗವರ್ನರ್‌ಗಳು ಪ್ರಾಂತ್ಯಗಳನ್ನು ನಿಯಂತ್ರಿಸುತ್ತಾರೆ, ಜಿಲ್ಲಾ ಗವರ್ನರ್‌ಗಳು ತಮ್ಮ ಜಿಲ್ಲೆಗಳ ಉಸ್ತುವಾರಿ ವಹಿಸುತ್ತಾರೆ ಎಂದು ಸಮಂಗಾನಿ ಹೇಳಿದ್ದಾರೆ.

ತಾಲಿಬಾನ್‌ ಈಗಾಗಲೇ ಪ್ರಾಂತ್ಯಗಳು ಮತ್ತು ಜಿಲ್ಲೆಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು ಮತ್ತು ಪೊಲೀಸ್ ಕಮಾಂಡರ್‌ಗಳನ್ನು ನೇಮಿಸಿದೆ. ಹೊಸ ಆಡಳಿತ ವ್ಯವಸ್ಥೆಯ ಹೆಸರು, ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆ ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...