Homeಮುಖಪುಟಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಜಾತ್ಯತೀತತೆಯ ಉಲ್ಲೇಖವಿರುವ ಸರ್ಕಾರದ ಭಾಷಣ ಓದದೆ ಸದನದಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

- Advertisement -
- Advertisement -

ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡಲು ಸ್ಪೀಕರ್‌ಗೆ ಸೂಚಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್.ರವಿ ಅವರು ಇಂದು (ಜ.9) ವಿಧಾನಸಭೆಯಿಂದ ಹೊರನಡೆದಿದ್ದಾರೆ.

ರಾಜ್ಯ ಸರ್ಕಾರ ಸಿದ್ಧಪಡಿಸಿದ ಮತ್ತು ಸ್ಪೀಕರ್ ಅನುವಾದಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ರೆಕಾರ್ಡ್ ಮಾಡುವ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ರಾಜ್ಯಪಾಲರು ತಮ್ಮ ಭಾಷಣಕ್ಕೆ ಸರ್ಕಾರ ಸಿದ್ಧಪಡಿಸದ ಕೆಲವು ಭಾಗಗಳನ್ನು ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ಯತೀತತೆಯ ಬಗ್ಗೆ ಉಲ್ಲೇಖಗಳನ್ನು ಒಳಗೊಂಡಿರುವ, ತಮಿಳುನಾಡು ಶಾಂತಿಯ ಸ್ವರ್ಗ ಎಂದು ಬಣ್ಣಿಸಲಾದ ಮತ್ತು ಪೆರಿಯಾರ್, ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ್, ಸಿ.ಎನ್.ಅಣ್ಣಾದೊರೈ, ಕರುಣಾನಿಧಿ ಅವರಂತಹ ನಾಯಕರನ್ನು ಸ್ಮರಿಸಿ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟಿಬಿಟ್ಟರು. ಆನಂತರ ಮುಖ್ಯಮಂತ್ರಿ ನಿರ್ಣಯ ಮಂಡಿಸಿದರು. ಆಡಳಿತಾರೂಢ ಡಿಎಂಕೆ ಪ್ರತಿಪಾದಿಸುವ ‘ದ್ರಾವಿಡ ಮಾದರಿ’ಯ ಉಲ್ಲೇಖವನ್ನೂ ಅವರು ಓದಲಿಲ್ಲ.

ರಾಜ್ಯಪಾಲರ ಕ್ರಮವು ವಿಧಾನಸಭೆ ಸದನದ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ತಮ್ಮ ನಿರ್ಣಯದಲ್ಲಿ ಎಂ.ಕೆ. ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಈ ಹಿಂದೆ ರಾಜ್ಯಪಾಲರ ಭಾಷಣವನ್ನು ಬಹಿಷ್ಕರಿಸಿದ್ದವು. ಪ್ರತಿಭಟನೆಯ ನಂತರ, ಘೋಷಣೆಗಳನ್ನು ಕೂಗಲಾಗಿದೆ.

ರಾಜ್ಯಪಾಲ ರವಿ ವಿರುದ್ಧ ವಿಧಾನಸಭೆಯಲ್ಲಿ ‘ತಮಿಳುನಾಡು ಬಿಟ್ಟು ತೊಲಗಿ’ ಘೋಷಣೆಗಳು ಪ್ರತಿಧ್ವನಿಸಿದವು. ಆಡಳಿತಾರೂಢ ಡಿಎಂಕೆ ಶಾಸಕರು, “ಬಿಜೆಪಿ, ಆರೆಸ್ಸೆಸ್ ಸಿದ್ಧಾಂತವನ್ನು ಹೇರಬೇಡಿ” ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸಂಸದ ಕಾರ್ತಿ ಪಿ.ಚಿದಂಬರಂ ಅವರು ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಕರೆ ನೀಡಿದ್ದಾರೆ.

“ತಮಿಳಗಂ ತಮಿಳುನಾಡಿಗೆ ಹೆಚ್ಚು ಸೂಕ್ತವಾದ ಹೆಸರು” ಎಂದು ರಾಜ್ಯಪಾಲರು ಇತ್ತೀಚೆಗೆ ಹೇಳಿಕೆ ನೀಡಿದ ಬಳಿಕ ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ವಿವಾದ ಉಂಟಾಗಿದೆ. ಡಿಎಂಕೆ ಶಾಸಕರು ರಾಜ್ಯಪಾಲರ ಹೇಳಿಕೆಯನ್ನು ಖಂಡಿಸಿದ್ದಾರೆ.

(‘ನಾಡು’ ಎಂಬ ಪದವು ಭೂಮಿ ಎಂದರ್ಥವನ್ನು ಹೊಂದಿದೆ. ಕೆಲವೊಮ್ಮೆ ದೇಶ ಅಥವಾ ರಾಷ್ಟ್ರ-ರಾಜ್ಯ ಎಂದು ಅರ್ಥೈಸಲಾಗುತ್ತದೆ. ‘ತಮಿಳಗಂ’ ಎಂದರೆ ತಮಿಳರು ವಾಸಿಸುವ ಪ್ರದೇಶ ಎಂಬುದಾಗಿದೆ.)

“ದುರದೃಷ್ಟವಶಾತ್ ತಮಿಳುನಾಡಿನಲ್ಲಿ ನಾವು ದ್ರಾವಿಡರು ಎಂಬ ಹಿಂಜರಿಕೆಯ ರಾಜಕಾರಣವಿದೆ. ಸಂವಿಧಾನದ ಬಲದಿಂದ ನಮ್ಮನ್ನು ಒಟ್ಟುಗೂಡಿಸಲಾಗಿದೆ. ನಾವು ದೇಶದ ಭಾಗವಲ್ಲ ಎಂಬ ವಿಚಾರವನ್ನು ಬಲಪಡಿಸಲು ಅರ್ಧಶತಮಾನ ಕಾಲ ಪ್ರಯತ್ನಿಸಲಾಗಿದೆ. ಇಡೀ ದೇಶಕ್ಕೆ ಅನ್ವಯಿಸುವ ಎಲ್ಲವನ್ನೂ ತಮಿಳುನಾಡು ವಿರೋಧಿಸುತ್ತಿದೆ”ಎಂದು ರಾಜ್ಯಪಾಲರು ಬುಧವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ  ಹೇಳಿದ್ದರು. ಕಾಶಿ-ತಮಿಳು ಸಂಗಮದ ಸಂಘಟಕರು ಮತ್ತು ಸ್ವಯಂಸೇವಕರನ್ನು ಅಭಿನಂದಿಸುವ ಕಾರ್ಯಕ್ರಮ ಅದಾಗಿತ್ತು.

“ಇದೊಂದು ಅಭ್ಯಾಸವಾಗಿದೆ. ಅನೇಕ ಪ್ರಬಂಧಗಳನ್ನು ಸುಳ್ಳು ಮತ್ತು ಕಳಪೆ ಕಾಲ್ಪನಿಕ ಸಂಗತಿಗಳಿಂದ ಬರೆಯಲಾಗಿದೆ. ಇದನ್ನು ಹೋಗಲಾಡಿಸಬೇಕು. ಸತ್ಯವು ಮೇಲುಗೈ ಸಾಧಿಸಬೇಕು. ವಾಸ್ತವವಾಗಿ, ತಮಿಳುನಾಡು ಭಾರತದ ಆತ್ಮವನ್ನು ಹಿಡಿದಿಟ್ಟುಕೊಂಡಿರುವ ನಾಡು. ಆದರೆ ತಮಿಳಗಂ ಎಂಬುದು ಸೂಕ್ತ ಪದವಾಗಿ ಹೋಗಿದೆ” ಎಂದಿದ್ದರು ರಾಜ್ಯಪಾಲರು.

ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ವಾಗ್ವಾದ ನಡೆದಿದ್ದು, ಬಿಜೆಪಿಯ ಆಶಯದಂತೆ ರಾಜ್ಯಪಾಲ ರವಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದೆ.

“ರಾಜ್ಯಪಾಲ ಆರ್.ಎನ್.ರವಿ ಅವರು ದಿನನಿತ್ಯ ಒಂದಷ್ಟು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಗೊಂದಲ, ಪ್ರತ್ಯೇಕತೆ ಮತ್ತು ಸಂಘರ್ಷ ಸೃಷ್ಟಿಸುತ್ತಿದ್ದಾರೆ. 50 ವರ್ಷಗಳ ದ್ರಾವಿಡ ರಾಜಕಾರಣದಲ್ಲಿ ಜನರಿಗೆ ಮೋಸ ಮಾಡಲಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ.

ಡಿಎಂಕೆ ವಕ್ತಾರ ಸೇಲಂ ಧರಣೀಧರನ್ ಪ್ರತಿಕ್ರಿಯಿಸಿದ್ದು, “ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಭಾಷಣದ ವೇಳೆ ಕೆಲವು ಪ್ರಮುಖ ವಿಷಯಗಳನ್ನು ಬಿಟ್ಟು ಸಾಂವಿಧಾನಿಕ ನಿಯಮಗಳಿಂದ ಉಲ್ಲಂಘಿಸಿದ್ದಾರೆ. ಈ ರಾಜ್ಯಪಾಲರು ರಾಜಕೀಯ ಅಜೆಂಡಾವನ್ನು ಹೊಂದಿದ್ದಾರೆ. ಅವರು ತಮಿಳುನಾಡಿನ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...