Homeಮುಖಪುಟದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

- Advertisement -
- Advertisement -

ಕೆಲವು ಶಿಕ್ಷಕರು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ ಆರು ವರ್ಷದ ದಲಿತ ಮಗುವನ್ನು, ಜನಸತ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪ್ರಾಂಶುಪಾಲರಾದ ಸಂಧ್ಯಾ ಜೈನ್ ಮತ್ತು ತರಗತಿ ಶಿಕ್ಷಕಿ ರವಿತಾ ರಾಣಿ ಅವರ ನಿರ್ಲಕ್ಷ್ಯದ ಕಾರಣಕ್ಕಾಗಿ ಒಂದನೇ ತರಗತಿಯ ಆರು ವರ್ಷದ ವಿದ್ಯಾರ್ಥಿಯೊಬ್ಬ ಶಾಲೆಯ ತರಗತಿಯಲ್ಲಿ ಕೂಡಿಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದು, “ದಲಿತ ಮಕ್ಕಳ ಮೇಲೆ ದ್ವೇಷ ಹೊಂದಿದ್ದರಿಂದ ಇಬ್ಬರು ಶಿಕ್ಷಕರು ನನ್ನ ಮಗನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸುತ್ತಿದ್ದರು” ಎಂದು ಆರೋಪಿಸಿದ್ದಾರೆ.

ಶಿಕ್ಷಕರ ನಿರ್ಲಕ್ಷ್ಯದಿಂದ ಶಾಲೆ ಮುಚ್ಚಿದ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ಮಗ ಬೀಗ ಹಾಕಿದ್ದ ತರಗತಿ ಕೋಣೆಯಲ್ಲಿ ಸಿಲುಕಿದ್ದ ಎಂದು ಆರೋಪಿಸಿದರು. ಶಾಲೆಯನ್ನು ಮುಚ್ಚಿದ ನಂತರ ತನ್ನ ಮಗ ಮನೆಗೆ ಬಾರದಿದ್ದಾಗ, ಅವರು ಇತರ ವಿದ್ಯಾರ್ಥಿಗಳೊಂದಿಗೆ ಅವನ ಬಗ್ಗೆ ವಿಚಾರಿಸಿದ್ದಾರೆ. ಆದರೆ, ಅವರು ಆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಶಾಲೆ ಬಳಿಗೆ ಹೋದಾಗ ಬೀಗ ಹಾಕಿರುವುದು ಕಂಡು ತನ್ನ ಮಗುವಿನ ಅಳಲು ಕೇಳಿದ ನಂತರ ಗ್ರಾಮಸ್ಥರು ಮತ್ತು ಆಕೆಯ ಕುಟುಂಬಸ್ಥರು ಪ್ರಾಂಶುಪಾಲರಿಗೆ ಕರೆ ಮಾಡಿದ್ದಾರೆ. ಬಳಿಕ ಶಿಕ್ಷಕಿ ರವಿತಾ ರಾಣಿ ಅವರ ಪತಿ ಕೀ ಸಮೇತ ಶಾಲೆಗೆ ಆಗಮಿಸಿ ತೆರೆದರು. ಮಗು ತರಗತಿಯಲ್ಲಿ ಮಲಗಿರಬಹುದು ಎಂದು ರಾಣಿಯ ಪತಿ ಜನರಿಗೆ ಹೇಳಿದ್ದಾರೆ.

ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಶಿಕ್ಷಕಿ ರಾಣಿ ಅವರಿಗೆ ವರ್ಗಾವಣೆ ನೀಡಲಾಗಿದೆ ಎಂದು ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂದೀಪ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಬ್ಲಾಕ್ ಶಿಕ್ಷ ಣಾಧಿಕಾರಿ ಜನಸತ್ ಮತ್ತು ಶಹಪುರ ನೇತೃತ್ವದ ದ್ವಿಸದಸ್ಯ ಸಮಿತಿ ಪರಿಶೀಲನೆ ನಡೆಸಿ ಮೂರು ದಿನಗಳಲ್ಲಿ ವರದಿ ಸಲ್ಲಿಸಲಿದೆ.

ಶಾಲೆ ಮುಚ್ಚುವ ಮುನ್ನ ತರಗತಿ ಕೊಠಡಿಗಳನ್ನು ಪರಿಶೀಲಿಸುವಂತೆ ಎಲ್ಲ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಕುಮಾರ್ ಹೇಳಿದರು.

ಇದಕ್ಕೆ ತರಗತಿ ಶಿಕ್ಷಕಿಯೇ ಕಾರಣ ಎಂಬ ಕಾರಣಕ್ಕೆ ಆಕೆಗೆ ಅನ್ಯಾಯವಾಗಿದೆ ಎಂದು ಪ್ರಾಂಶುಪಾಲ ಜೈನ್ ಹೇಳಿದ್ದಾರೆ. “ಮಗು ಮಲಗಿದ್ದರೂ ತರಗತಿಗೆ ಬೀಗ ಹಾಕುವ ಮುನ್ನ ತಪಾಸಣೆ ನಡೆಸಬೇಕಿತ್ತು” ಎಂದು ಹೇಳಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; “ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಬಂಧಿಸುವಿರಾ..?’; ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...