Homeಕ್ರೀಡೆಒಲಂಪಿಕ್‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ಒಲಿಂಪಿಕ್ಸ್‌‌ ಕ್ರೀಡಾ ಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿ ಸಮಿಫೈನಲ್‌ಗೆ ತಲುಪಿ ಇತಿಹಾಸ ನಿರ್ಮಿಸಿತ್ತು

- Advertisement -
- Advertisement -

ಒಲಿಂಪಿಕ್ಸ್‌ ಕ್ರೀಡಾ ಕೂಟದ ಇತಿಹಾಸದಲ್ಲೇ ಭಾರತೀಯ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದ್ದು, ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಗೋಲ್ ಅಂತರದಲ್ಲಿ ಸೋತಿತ್ತು. ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ. ಆದರೆ ಈ ಮಧ್ಯೆ ಭಾರತ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಸೆಮಿಫೈನಲ್‌ನಲ್ಲಿ ಸೋತ ಕೆಲವೆ ಗಂಟೆಗಳ ಅಂತರದಲ್ಲಿ ಮಹಿಳಾ ತಂಡದ ಪ್ರಮುಖ ಆಟಗಾರ್ತಿ ‘ವಂದನಾ ಕಟಾರಿಯಾ’ ಅವರು ದಲಿತೆ ಎನ್ನುವ ಕಾರಣಕ್ಕೆ ಜಾತಿ ನಿಂದನೆಗೆ ಒಳಗಾಗಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ವಂದನಾ ಕಟಾರಿಯಾ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಗೋಲ್‌ ಸಾಧಿಸಿದ ಭಾರತದ ಮೊದಲ ಮಹಿಳಾ ಹಾಕಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಭಾರತೀಯ ಮಹಿಳಾ ತಂಡ ಸೋತ ಕೆಲವೆ ಗಂಟೆಗಲ್ಲಿ ಹರಿದ್ವಾರದ ರೋಷನಾಬಾದ್ ಹಳ್ಳಿಯಲ್ಲಿರುವ ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಹತ್ತಿರ ಇಬ್ಬರು ಮೇಲ್ಜಾತಿಯ ವ್ಯಕ್ತಿಗಳು ಆಗಮಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ

ದುಷ್ಕರ್ಮಿಗಳು ಪಟಾಕಿ ಸಿಡಿಸಿ, ಅಣಕು ಸಂಭ್ರಮಾಚರಣೆ ಮಾಡಿ ನೃತ್ಯ ಮಾಡಿದ್ದು, “ತಂಡದಲ್ಲಿ ಹೆಚ್ಚು ದಲಿತ ಆಟಗಾರರು ಇರುವುದರಿಂದಲೇ ಆಟ ಸೋತಿದೆ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ವಂದನಾ ಅವರ ಕುಟುಂಬವು ಆರೋಪಿಸಿದೆ ಎಂದು ಪತ್ರಿಕೆ ತಿಳಿಸಿದೆ.

“ಪಂದ್ಯವು ಸೋತಿದ್ದರ ಬಗ್ಗೆ ನಮಗೆ ಬೇಸರವಿದೆ. ಆದರೆ ತಂಡವು ಹೋರಾಟ ನಡೆಸಿಯೆ ಪಂದ್ಯದಲ್ಲಿ ಸೋತಿದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ವಂದನಾ ಅವರ ಸಹೋದರ ಶೇಖರ್‌ ಅವರು ತಿಳಿಸಿದ್ದಾರೆ ಎಂದು TOI ಉಲ್ಲೇಖ ಮಾಡಿದೆ.

“ಪಂದ್ಯ ಸೋತ ದುಃಖದಲ್ಲಿದಾಗ, ಇದ್ದಕ್ಕಿದ್ದಂತೆ ದೊಡ್ಡ ಶಬ್ದಗಳು ಕೇಳಿ ಬಂದವು. ನಮ್ಮ ಮನೆಯ ಹೊರಗೆ ಪಟಾಕಿ ಸಿಡಿಸಲಾಗಿತ್ತು. ನಾವು ಹೊರಗೆ ತೆರಳಿ ನೋಡಿದಾಗ ನಮಗೆ ತಿಳಿದಿರುವ ನಮ್ಮದೆ ಹಳ್ಳಿಯ ಮೇಲ್ಜಾತಿಯ ಇಬ್ಬರು ವ್ಯಕ್ತಿಗಳು ಮನೆಯ ಮುಂದೆ ನೃತ್ಯ ಮಾಡುತ್ತಿದ್ದರು” ಎಂದು ಶೇಖರ್‌ ಹೇಳಿದ್ದಾರೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಮನೆಯ ಹೊರಗಿನ ಗಲಾಟೆಯನ್ನು ತಡೆಯಲು ವಂದನಾ ಅವರ ಕುಟುಂಬವು ಪ್ರಯತ್ನಿಸಿದಾಗ ಆರೋಪಿಗಳು ಮತ್ತಷ್ಟು ಆಕ್ರೋಶಗೊಂಡು, ಜಾತಿ ನಿಂದನೆ ಮಾಡಿ ಕುಟುಂಬವನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.

“ತಂಡದಲ್ಲಿ ಹಲವಾರು ದಲಿತ ಆಟಗಾರರನ್ನು ಸೇರಿಸಿದ್ದರಿಂದಲೇ ಪಂದ್ಯ ಸೋತಿದೆ. ಕೇವಲ ಹಾಕಿ ಮಾತ್ರವಲ್ಲ, ಪ್ರತಿ ಕ್ರೀಡೆಯಲ್ಲೂ ದಲಿತರನ್ನು ಹೊರಗಿಡಬೇಕು ಎಂದು ಅವರು ಹೇಳಿದ್ದಾರೆ. ಇದು ಖಂಡತವಾಗಿಯೂ ಜನಾಂಗೀಯ ನಿಂದನೆಯಾಗಿದೆ” ಎಂದು ಶೇಖರ್ ಅವರು ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ ಎಂದು ವರದಿ ಹೇಳಿದೆ. ದೂರಿನ ಆಧಾರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. “ನಾವು ದೂರು ಸ್ವೀಕರಿಸಿದ್ದೇವೆ ಮತ್ತು ವಿಚಾರಣೆ ನಡೆಯುತ್ತಿದೆ, ನಂತರ ಪ್ರಕರಣ ದಾಖಲಿಸಲಾಗುವುದು” ಎಂದು ಸಿಡ್ಕಲ್‌ ಪೊಲೀಸ್ ಠಾಣೆಯ ಅಧಿಕಾರಿ  ಹೇಳಿದ್ದಾರೆಂದು TOI ವರದಿ ಮಾಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ಕೊಳೆತ ಮನಸ್ಥಿತಿಯ ದ್ಯೋತಕ. ವಂದನಾ, ಚಿಂತಿಸಬೇಡ, ನೀನು ನಮ್ಮೆಲ್ಲರ ಹೆಮ್ಮೆ!

  2. ದೇಶ ಹೆಮ್ಮೆ ಪಡುವಂತಹ ಕೆಲಸ ಮಾಡಿದರೂ ವಂದನಾ ಕಟಾರಿಯ ದಲಿತೆ ಎಂಬ ಕಾರಣಕ್ಕೆ ಹಂಗಿಸಲ್ಪಡುವುದು ದುರದ್ರಷ್ಟಕರ ಎದೆಗುಂದದೆ ಮುನ್ನಡೆಯಿರಿ ಎಂತಹಾ ವಿಪರ್ಯಾಸ ನೋಡಿ ಈ ಕಾಲಘಟ್ಟದಲ್ಲಿ ಈ ಕೆಟ್ಟ ಮನಸ್ಸು/ ಕೊಳಕು ಮನಸ್ಸಿರುವ ಜನರಿಂದಲೇ ಈ ದೇಶ ಈಗೆ.ತಾವು ಧೃತಿಗೆಡದೆ ಮುನ್ನೂಗ್ಗಿ ನಿಮ್ಮ ಜೊತೆಗೆ ನಾವಿದ್ದೇವೆ ವಂದನಾ ನಮ್ಮೆಲ್ಲರ ಆಸ್ತಿ, ನಮ್ಮ ಹೆಮ್ಮೆಯ ಪುತ್ರಿ ಚಂತೆಬೇಡ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...