HomeಮುಖಪುಟSIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್ ಅಳಲು ತೋಡಿಕೊಂಡಿದ್ದಾರೆ.

“ಇಡೀ ವೃತ್ತಿಜೀವನವನ್ನು ಪತ್ರಿಕೋದ್ಯಮದಲ್ಲೇ ಕಳೆದು, ದೇಶದ ಪ್ರಸಿದ್ಧ ಪತ್ರಿಕೆಯೊಂದರ ಸಂಪಾದಕನಾಗಿದ್ದ ನನಗೇ ಇಂತಹ ಪರಿಸ್ಥಿತಿ ಎದುರಾಗಿರುವಾಗ, ಸಮಾಜದ ಕಟ್ಟಕಡೆಯ ಮತ್ತು ಸೌಲಭ್ಯವಂಚಿತ ಜನರ ಸ್ಥಿತಿ ಏನಾಗಿರಬೇಡ” ಎಂದು ರಾಜಗೋಪಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಗೋಪಾಲ್ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬ್ಯಾಲಿಗಂಜ್ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದರು. ಆದರೆ, ಇತ್ತೀಚೆಗೆ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ಕಿತ್ತುಹಾಕಲಾಗಿದೆ. ಪರಿಣಾಮ, ಅವರ ಪಾಸ್‌ಪೋರ್ಟ್ ನವೀಕರಣದ ಅರ್ಜಿಗೆ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ ನೀಡಿದ್ದಾರೆ. ಇದರಿಂದಾಗಿ ರಾಜ್‌ಗೋಪಾಲ್ ಅವರು ತಮ್ಮ ನಾಗರಿಕತ್ವವನ್ನು ಸಾಬೀತುಪಡಿಸಲು ಹೋರಾಡುವಂತಾಗಿದೆ.

“ಈ ವರ್ಷದ ಮಾರ್ಚ್‌ನಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನನ್ನ ತಂದೆಯ ಹೆಸರನ್ನು 2002ರ ಮತಪಟ್ಟಿಯಲ್ಲಿ ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂಬ ಕಾರಣ ನೀಡಿ, ‘ತಾರ್ಕಿಕ ವ್ಯತ್ಯಾಸ’ದ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಆಧಾರದಲ್ಲಿ ನನ್ನ ಹೆಸರನ್ನು ಮತದಾರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ. ನನ್ನ ತಂದೆ ಒಬ್ಬ ಗಾಂಧಿವಾದಿ, ನಿವೃತ್ತ ಪ್ರೊಫೆಸರ್ ಮತ್ತು ಕೇರಳದ ಗಾಂಧಿ ಸ್ಮಾರಕ ನಿಧಿಯ ಮಾಜಿ ರಾಜ್ಯ ಕಾರ್ಯದರ್ಶಿಯಾಗಿದ್ದರು. ಅವರು 2016ರಲ್ಲಿ ನಿಧನರಾದರು. ನಾನು ನನ್ನ ಎಸ್ಎಸ್‌ಎಲ್‌ಸಿ ಅಂಕಪಟ್ಟಿಯನ್ನು ಸಲ್ಲಿಸಿದ್ದರೂ, ಅಧಿಕಾರಿಗಳು ಯಾವುದೇ ಕಾರಣ ನೀಡದೆ ನನ್ನ ಅಪೀಲನ್ನು ತಿಸ್ಕರಿಸಿದ್ದಾರೆ. ಈಗ, ಸುಪ್ರೀಂ ಕೋರ್ಟ್‌ ರಚಿಸಿರುವ ನ್ಯಾಯಮಂಡಳಿಯ ಎದುರು ನನ್ನ ಅಪೀಲು ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ಪರಿಸ್ಥಿತಿಯಲ್ಲಿ ನಾನು ನನ್ನ ಪಾಸ್‌ಪೋರ್ಟ್‌ಅನ್ನು ನವೀಕರಣ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ರಾಜಗೋಪಾಲ್‌ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಕಿತ್ತುಹಾಕಿದ ಪರಿಣಾಮವಾಗಿ ರಾಜಗೋಪಾಲ್ ಅವರ ಪಾಸ್‌ಪೋರ್ಟ್ ನವೀಕರಣಕ್ಕೆ ದೊಡ್ಡ ಕಂಟಕ ಎದುರಾಗಿದೆ. 2026ರ ಮಾರ್ಚ್ 19ರಂದು ಅವರ ಬಯೋಮೆಟ್ರಿಕ್ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೂ, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಕಾರಣ ಪೊಲೀಸರು ವೆರಿಫಿಕೇಶನ್ ಪ್ರಕ್ರಿಯೆಯನ್ನು ಅಂತಿಮಗೊಳಿಸಿಲ್ಲ. ಬದಲಾಗಿ, ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವುದನ್ನು ಉಲ್ಲೇಖಿಸಿ ಕೋಲ್ಕತ್ತಾ ಪೊಲೀಸರು ಪ್ರತಿಕೂಲ ವರದಿ ಕಳುಹಿಸಿದ್ದಾರೆ. ಪರಿಣಾಮ, ಪಾಸ್‌ಪೋರ್ಟ್‌ಅನ್ನು ನವೀಕರಿಸಲು ಸಾಧ್ಯವಿಲ್ಲ ಎಂದು ಪಾಸ್‌ಪೋರ್ಟ್ ಪ್ರಾಧಿಕಾರವು ರಾಜಗೋಪಾಲ್ ಅವರಿಗೆ ಅಧಿಕೃತವಾಗಿ ತಿಳಿಸಿದೆ.

ಈ ಪಾಸ್‌ಪೋರ್ಟ್ ಬಿಕ್ಕಟ್ಟಿನಿಂದಾಗಿ, ಕ್ಯಾಲಿಫೋರ್ನಿಯಾದಲ್ಲಿ ಪತ್ರಕರ್ತೆಯಾಗಿರುವ ತಮ್ಮ ಮಗಳ ವಿವಾಹಕ್ಕೂ ಹಾಜರಾಗಲು ಸಾಧ್ಯವಾಗಿಲ್ಲ ಎಂದು ರಾಜಗೋಪಾಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಸದ್ಯ ನಾಗರಿಕ ಹಕ್ಕುಗಳ ಅನಿಶ್ಚಿತ ಸ್ಥಿತಿಯಲ್ಲಿರುವ ರಾಜಗೋಪಾಲ್ ಅವರು, ತಮ್ಮ ಹೆತ್ತವರ ಅಸ್ತಿತ್ವವನ್ನು ಸಾಬೀತುಪಡಿಸಲು ದಶಕಗಳಷ್ಟು ಹಳೆಯ ದಾಖಲೆಗಳನ್ನು ಮರುಸೃಷ್ಟಿಸುವ ಹೋರಾಟದಲ್ಲಿ ತೊಡಗಿದ್ದಾರೆ. 1965ರಲ್ಲಿ ಅವರ ತಾಯಿ ಬೋಧಿಸುತ್ತಿದ್ದ ಕಾಲೇಜು ಮತ್ತು 1959ರಲ್ಲಿ ಅವರು ಉತ್ತೀರ್ಣರಾದ ಶಾಲೆಗೆ ಪತ್ರ ಬರೆದು ದಾಖಲೆಗಳನ್ನು ಕೋರುತ್ತಿದ್ದಾರೆ. ಹಾಗೆಯೇ ಕೇರಳದಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಕೋಮುವಾದದ ವಿರುದ್ಧ ತಮ್ಮ ತಂದೆ ನಡೆಸಿದ ಹೋರಾಟಗಳ ಪತ್ರಿಕಾ ವರದಿಗಳು ಅಥವಾ ಛಾಯಾಚಿತ್ರಗಳಿಗಾಗಿ ಹಳೆಯ ಹೋರಾಟಗಾರರನ್ನು ಸಂಪರ್ಕಿಸುತ್ತಿದ್ದಾರೆ.

“ನಾನು ಪ್ರಸ್ತುತ ನಾಗರಿಕ ಅನಿಶ್ಚಿತತೆಯ ಸ್ಥಿತಿಯಲ್ಲಿದ್ದೇನೆ. ಇತ್ತೀಚೆಗಷ್ಟೇ ಸರ್ಕಾರ ಪಾಸ್‌ಪೋರ್ಟ್ ಪೌರತ್ವಕ್ಕೆ ಯಾವುದೇ ಪುರಾವೆಯಲ್ಲ ಎಂದು ಪುನರುಚ್ಚರಿಸಿದೆ. ನನ್ನ ಹೆಚ್ಚಿನ ಸಮಯವು ಈಗ ಹಲವಾರು ದಶಕಗಳಷ್ಟು ಹಳೆಯದಾದ ಕುಟುಂಬದ ದಾಖಲೆಗಳನ್ನು ಮರುನಿರ್ಮಾಣ ಮಾಡಲು ಮತ್ತು ದಾಖಲೆಗಳನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನಗಳಿಗಾಗಿಯೇ ವ್ಯಯವಾಗುತ್ತಿದೆ” ಎಂದು ರಾಜ್‌ಗೋಪಾಲ್ ಹೇಳಿದ್ದಾರೆ.

ಕಳವಳ ವ್ಯಕ್ತಪಡಿಸಿದ ಸಾಮಾಜಿಕ ಪ್ರಮುಖರು

ರಾಜ್‌ಗೋಪಾಲ್ ಅವರ ಪ್ರಕರಣದ ಕುರಿತು ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಸಾಮಾಜಿಕ ಪ್ರಮುಖರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.

ಟಿಎಂಸಿ ಸಂಸದೆ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿ, “ಸ್ತಬ್ದಗೊಳಿಸುವ ಮತ್ತು ಹೃದಯ ವಿದ್ರಾವಕವಾದ ವರದಿ. ಟೆಲಿಗ್ರಾಫ್‌ (The Telegraph) ಪತ್ರಿಕೆಯ ಮಾಜಿ ಸಂಪಾದಕರಾದ ಆರ್. ರಾಜಗೋಪಾಲ್ ಅವರಿಗೇ ಈ ಪರಿಸ್ಥಿತಿ ಎದುರಾಗಬಹುದಾದರೆ, ಇವರಿಗಿಂತ ತೀರಾ ಕಡಿಮೆ ಅವಕಾಶಗಳನ್ನು ಹೊಂದಿರುವ ಸಾಮಾನ್ಯ ನಾಗರಿಕರು ಇನ್ನೆಷ್ಟು ಕಷ್ಟಗಳನ್ನು ಅನುಭವಿಸುತ್ತಿರಬಹುದು ಎಂಬುದನ್ನು ಕಲ್ಪಿಸಿಕೊಳ್ಳಿ. ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲಾಗಿದೆ. ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ. ಈ ಹೆಸರು ತೆಗೆದುಹಾಕುವಿಕೆಗೆ ಸಂಬಂಧಿಸಿದ ಪ್ರತಿಕೂಲ ಪೊಲೀಸ್ ವರದಿಯ ಕಾರಣದಿಂದಾಗಿ ಪಾಸ್‌ಪೋರ್ಟ್ ನವೀಕರಣವನ್ನು 100 ದಿನಗಳವರೆಗೆ ತಡೆಹಿಡಿಯಲಾಗಿದೆ. ವಿದೇಶದಲ್ಲಿ ನಡೆಯಬೇಕಿದ್ದ ಸ್ವಂತ ಮಗಳ ಮದುವೆಗೆ ಹೋಗಲು ಸಾಧ್ಯವಾಗದೆ ವಂಚಿತರಾಗಿದ್ದಾರೆ. ಇದಾದ ನಂತರ ಪಾಸ್‌ಪೋರ್ಟ್ ಪೌರತ್ವಕ್ಕೆ “ಪುರಾವೆಯಲ್ಲ” ಎಂದು ಹೇಳಲಾಗಿದೆ. ಮೂಲಭೂತ ನಾಗರಿಕ ಹಕ್ಕುಗಳ ನಿಧಾನಗತಿಯ ಸವೆತವು ಹೀಗೆಯೇ ಇರುತ್ತದೆ. ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಸಂಗತಿಯೆಂದರೆ, ಮುಖ್ಯವಾಹಿನಿಯ ಬಹುತೇಕ ಮಾಧ್ಯಮಗಳು ಈ ಬಗ್ಗೆ ಮೌನ ವಹಿಸಿರುವುದು. ಇಂತಹ ಹೀನಾಯವಾದ ಕಥೆಗಳನ್ನು ಏಕೆ ಕಣ್ಣಿಗೆ ಕಾಣದಂತೆ ಮರೆಮಾಡಲಾಗುತ್ತಿದೆ?” ಎಂದು ಬರೆದುಕೊಂಡಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಎಸ್‌ಐಆರ್ ಪ್ರಕ್ರಿಯೆ ಜನರನ್ನು ಮತದಾನದ ಹಕ್ಕಿನಿಂದ ವಂಚಿತಗೊಳಿಸಲು ಮತ್ತು “ಬಿಜೆಪಿಯ ವಿಭಜಕ ಹಿಂದುತ್ವ ಕಾರ್ಯಸೂಚಿಯನ್ನು ಮುಂದುವರಿಸಲು ಪೌರತ್ವವನ್ನು ನಿರ್ಧರಿಸಲು” ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

“ಎಸ್‌ಐಆರ್ ಪ್ರಕ್ರಿಯೆಯು ನಮ್ಮ ದೇಶದ ಬಡ ಮತ್ತು ದುರ್ಬಲ ವರ್ಗದವರನ್ನು ಮತದಾನದ ಹಕ್ಕಿನಿಂದ ವಂಚಿತಗೊಳಿಸುತ್ತದೆ ಎಂದು ಸಿಪಿಐ(ಎಂ) ಆರಂಭದಿಂದಲೂ ಎಚ್ಚರಿಸಿತ್ತು. ಆದರೆ ಈಗ, ಆರ್. ರಾಜಗೋಪಾಲ್ ಅವರಂತಹ ಪ್ರಖ್ಯಾತ ಸಂಪಾದಕರು ಮತ್ತು ಹೆಸರಾಂತ ಪತ್ರಕರ್ತರಿಗೂ ಸಹ ಅವರ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ” ಎಂದು ಬೇಬಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ರಾಜ್‌ಗೋಪಾಲ್ ಅವರ ಪ್ರಕರಣದ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಎಸ್‌ಐಆರ್‌ನ ಬಗ್ಗೆ ಪ್ರತಿಪಕ್ಷಗಳು ಮತ್ತು ಜನಪರ ಸಂಘಟನೆಗಳು ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಆತಂಕಗಳು ಈಗ ನಿಜವಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...