Homeಕರ್ನಾಟಕಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿಯವರು ಮನವಿ ಮಾಡಿದ್ದರು. ”ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”’ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ” ಎಂದರು ವಿವರಿಸಿದರು.

”ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದರು.

”ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ. ಪಠ್ಯಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ” ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು ಅದರಂತೆ ಮಾಡುತ್ತೇವೆ” ಎಂದರು.

”ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ” ಎಂದರು.

”ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಮಕ್ಕಳ ಒಳಿತಿಗೆ ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅದು ಇದು ಅಂತ ಏನೂ ಇಲ್ಲ. ತುಂಬಾ ಸೂಕ್ಷ್ಮ ವಿಚಾರಗಳಿವು. ಹಾಗಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಿದೆ. ದೊಡ್ಡ ಮಟ್ಟದ ಚರ್ಚೆಗಳ ಅವಶ್ಯಕತೆಯಿದೆ. ಹಾಗಾಗಿ ಮಕ್ಕಳ ಒಳಿತನ್ನ ನೋಡಿಯೇ ಮಾಡಬೇಕು. ಮಕ್ಕಳಿಗೆ ಒಳಿತಾಗುವಂತೆ ನಾವು ಮಾಡ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

”ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ” ಎಂದು ತಿಳಿಸಿದರು.

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ:

ಪಠ್ಯಪುಸ್ತಕ ಮರು ಪರಿಷ್ಕರಣೆಗೆ ಸಾಹಿತಿ ಕುಂ. ವೀರಭದ್ರಪ್ಪ ಬೆಂಬಲ ಸೂಚಿಸಿದ್ದಾರೆ. ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ ಎಂದು ಅವರು ದೂರಿದ್ದಾರೆ.

”ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶ ಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿತ್ತು. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು. ಬರಗೂರು ರಾಮಚಂದ್ರಪ್ಪ ಜಾರಿಗೆ ತಂದಿದ್ದ ಪುಸ್ತಕಗಳೇ ಮತ್ತೆ ಬರಬೇಕು” ಎಂದು ಅವರು ಆಗ್ರಹಿಸಿದ್ದಾರೆ.

”ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವ. ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆ. ಬಿಜೆಪಿಯವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್​​​ಎಸ್​​ಎಸ್ ಪ್ರಣೀತ ಭಾರತೀಯತೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇಯ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು” ಎಂದು ವೀರಭದ್ರಪ್ಪ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಪ್ರತಿಪಕ್ಷಗಳಿಂದ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...