Homeಕರ್ನಾಟಕರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

ರಂಗ ಸಂಘಟಕ, ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ವಿ. ವೇಣುಗೋಪಾಲ್ ನಿಧನ

- Advertisement -
- Advertisement -

ರಂಗ ಸಂಘಟಕ, ಚಿಂತಕ, ನಿವೃತ್ತ ಪ್ರಾಂಶುಪಾಲ ಎಚ್.ವಿ.ವೇಣುಗೋಪಾಲ್‌ ಅವರು ಶುಕ್ರವಾರ ಸಂಜೆ ಹೃದಯಾಘಾತದಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ‘ಸಮುದಾಯ’ ಸಾಂಸ್ಕೃತಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಅವರು ‘ಸಮುದಾಯ’ ವಾರ್ತಾಪತ್ರದ ಜವಾಬ್ದಾರಿ ವಹಿಸಿಕೊಂಡು ನಡೆಸಿದ್ದರು.

ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಹಳ ಕಾಲ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಅವರು ಸೇವೆ ಸಲ್ಲಿಸಿದ್ದರು. ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಜನಪರ ಹೋರಾಟಗಳಲ್ಲಿಯೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮಗ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿಬಿದನೂರಿನಲ್ಲಿ ‘ಸಮುದಾಯ’ ಘಟಕದ ಆರಂಭಕ್ಕೆ ಅವರು ಕಾರಣಕರ್ತರಾಗಿ, ಸಕ್ರಿಯವಾಗಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಸಂಸ್ಕೃತ ಪ್ರಾಧ್ಯಾಪಕರಾಗಿದ್ದ ಅವರು ನಾಟಕಗಳನ್ನು ರಚಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾದ ನಂತರ ತಮ್ಮ ಮನೆಯ ಬೇಸ್ಮೆಂಟಿನಲ್ಲಿ ‘ಉನ್ನತಿ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

ಇದನ್ನೂ ಓದಿ: ವಿಭಿನ್ನ ಪ್ರಯೋಗಗಳ ನಾಟಕ ತಂಡ ರಂಗಪಯಣಕ್ಕೆ 12ನೇ ವರ್ಷದ ಸಂಭ್ರಮ

‘ಉನ್ನತಿ’ಯಲ್ಲಿ ಪ್ರತಿ ಶನಿವಾರ ಚಲನಚಿತ್ರವನ್ನು ಪ್ರದರ್ಶನವನ್ನು ಏರ್ಪಡಿಸುತ್ತಿದ್ದರು. ಚಿತ್ರ ಪ್ರದರ್ಶನ ಮತ್ತು ಇತರ ಕಾರ್ಯಕ್ರಮಗಳಿಗೆಂದೇ ಅವರು ಸ್ವಂತ ಹಣವನ್ನು ಬಳಸಿ ಸುಸಜ್ಜಿತವಾದ ಸಣ್ಣ ಸಭಾಂಗಣವನ್ನು ಕಟ್ಟಿಸಿದ್ದರು. ಒಳ್ಳೆಯ ಸಿನಿಮಾ ಸಂಸ್ಕೃತಿಯನ್ನು ಬೆಳೆಸಬೇಕೆಂದು ಶ್ರಮಿಸಿದ್ದ ಅವರು, ಈ ನಿಟ್ಟಿನಲ್ಲಿ, ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಸಮಯ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಅವರು, ಅನೇಕ ನಾಟಕಗಳನ್ನು ನಿರ್ದೇಶಿಸಿದ್ದರು. ಪ್ರಸ್ತುತ ಅವರು ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯ ಕಾರ್ಯಕಾರಿ ಸಮಿತಿಯಲ್ಲಿ ಸಹವರ್ತಿಯಾಗಿದ್ದರು. ಅನೇಕ ಸಮಾಜಮುಖಿ, ವೈಚಾರಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಎಡ ಪ್ರಗತಿಪರ ಚಿಂತನೆಯನ್ನು ಹೊಂದಿದ್ದ ಅವರ ಹಠಾತ್ ನಿಧನಕ್ಕೆ ‘ಸಮುದಾಯ ಕರ್ನಾಟಕ’ ಕಂಬನಿ‌ ಮಿಡಿದಿದೆ. “ಸಮುದಾಯದ ಅತ್ಯಂತ ಪ್ರಾಮಾಣಿಕ ಸದಸ್ಯ, ಸಕ್ರಿಯ ಕಾರ್ಯಕರ್ತರಾಗಿದ್ದ ವೇಣುಗೋಪಾಲ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ಇವರ ನಿಧನ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಸಮುದಾಯ ಬೆಂಗಳೂರು ಸಂತಾಪ ಸೂಚಿಸಿದೆ. ಅಲ್ಲದೆ, ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಮೃತರ ಅಂತ್ಯಕ್ರಿಯೆಯು ಶನಿವಾರ ಬೆಳಗ್ಗೆ ಬನಶಂಕರಿ ಚಿತಾಗಾರದಲ್ಲಿ 10 ರಿಂದ 10.30 ರ ಒಳಗೆ ನೆರವೇರಲಿದೆ. ಮೃತದೇಹವು ಬೆಳಗ್ಗೆ 9.30ರ ತನಕ ಅವರ ಸ್ವಗೃಹದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಲಿದೆ ಎಂದು ತಿಳಿದುಬಂದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಚುನಾವಣಾ ಆಯೋಗ

0
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ. ಈ ಕುರಿತು ಚುನಾವಣಾ ಆಯೋಗ...