ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಸಾಲದ ಅಧಿಕೃತ ಅಂಕಿಅಂಶಗಳ ಪ್ರಕಾರ, 2020-21ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ, ಭಾರತದ ಒಟ್ಟು ಸಾಲ ಶೇಕಡಾ 5.6 ರಷ್ಟು ಹೆಚ್ಚಳಗೊಂಡು 107.04 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.
ಕೊರೊನಾ ಸಾಂಕ್ರಾಮಿಕವು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ ಎಂದು ಸರ್ಕಾರ ಹೇಳಿದೆ.
ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಆರ್ಥಿಕತೆಯಲ್ಲಿ ಜಿಡಿಪಿ ಶೇಕಡಾ -23.9 ರಷ್ಟು ಕುಸಿತ ಕಂಡುಬಂದಿತ್ತು.
ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?
ಈ ಐತಿಹಾಸಿಕ ಕುಸಿತಕ್ಕೆ ಕೊರೊನಾ ವೈರಸ್ ಕಾರಣವೆಂದು ಹೇಳಿ ಸರ್ಕಾರ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ಈ ಹಿಂದೆಯೇ ಕೇಂದ್ರ ಜಾರಿಗೊಳಿಸಿದ್ದ ನೋಟು ಅಮಾನ್ಯೀಕರಣ, ಜಿಎಸ್‌ಟಿ ಸೇರಿದಂತೆ ಅನೇಕ ಅವೈಜ್ಞಾನಿಕ ನೀತಿಗಳೇ ಇದಕ್ಕೆ ಕಾರಣ ಎಂದು ಹೇಳಿವೆ.
ಈಗ ಕೇಂದ್ರ ಸರ್ಕಾರವೆ ಅಧಿಕೃತವಾಗಿ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ದೇಶವು ತನ್ನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ ಎನ್ನುವುದು ಬಹಿರಂಗವಾಗಿದೆ.
ಇದನ್ನೂ ಓದಿ: ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?
ಇತ್ತೀಚೆಗೆ ಆರ್‌ಬಿಐನ ಉಪ ಗವರ್ನರ್ ಮೈಕೆಲ್ ಪಾತ್ರಾ ಮಾತನಾಡಿ, ಆರ್ಥಿಕತೆ ಪುನರುಜ್ಜೀವನಗೊಳ್ಳಲು ಕೆಲವು ವರ್ಷಗಳೇ ಬೇಕಾಗಬಹುದು ಎಂದು ಹೇಳಿದ್ದರು.
ಅರ್ಥಿಕ ಕುಸಿತದಿಂದ ಕೇಂದ್ರ ಬಿಜೆಪಿ ಸರ್ಕಾರವು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ನಡುವೆ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿತ್ತು.
ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?