Homeಮುಖಪುಟಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ #IStandWithZubair ಹ್ಯಾಷ್‌ಟ್ಯಾಗ್‌

ಸೋಮವಾರ ಸಂಜೆಯಿಂದ ಹಿಡಿದು ಇಲ್ಲಿಯವರೆಗೆ #IStandWithZubair ಹ್ಯಾಷ್‌ಟ್ಯಾಗ್‌ನಲ್ಲಿ 5,83,000 ಟ್ವೀಟ್‌ಗಳಾಗಿವೆ.

- Advertisement -
- Advertisement -

2018ರ ಟ್ವೀಟ್ ಒಂದಕ್ಕೆ ಸಂಬಂಧಿಸಿ ದಿಟ್ಟ ಪತ್ರಕರ್ತ, ಆಲ್ಟ್‌ನ್ಯೂಸ್ ಸಹ ಸಂಪಾದಕ ಮೊಹಮ್ಮದ್ ಜುಬೇರ್‌ರನ್ನು ಬಂಧಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜುಬೇರ್‌ರನ್ನು ಬಂಧಿಸುವ ಮೂಲಕ ಸತ್ಯವನ್ನು ಬಂಧಿಸಿಡಲು ಸಾಧ್ಯವಿಲ್ಲ ಎಂದಿರುವ ಜನರು ಟ್ವಿಟರ್ ನಲ್ಲಿ #IStandWithZubair ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಮಾಡಿದ್ದಾರೆ.

ಸೋಮವಾರ ರಾತ್ರಿಯಿಂದಲೂ #IStandWithZubair ಹ್ಯಾಷ್‌ಟ್ಯಾಗ್‌ ಭಾರತದ ಟ್ರೆಂಡಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದೆ. 5,83,000 ಟ್ವೀಟ್‌ಗಳಾಗಿವೆ.

ಜುಬೇರ್ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿಯ ದ್ವೇಷ, ಮತಾಂಧತೆ ಮತ್ತು ಸುಳ್ಳನ್ನು ಬೆತ್ತಲು ಮಾಡುವ ಪ್ರತಿಯೊಬ್ಬ ವ್ಯಕ್ತಿಯೂ ಅವರಿಗೆ ಬೆದರಿಕೆಯಾಗಿ ಪರಿಣಮಿಸಿದ್ದಾರೆ. ಸತ್ಯದ ಒಂದು ಧ್ವನಿಯನ್ನು ಬಂಧಿಸಿದರೆ ಅದು ಸಾವಿರಾರು ದನಿಗಳಾಗಿ ಮೊಳಗುತ್ತದೆ. ಯಾವಾಗಲೂ ದೌರ್ಜನ್ಯದ ಮೇಲೆ ಸತ್ಯವೇ ಜಯಗಳಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಪತ್ರಿಕೋದ್ಯಮ ಎಂದರೆ ಪಟ್ಟಭದ್ರ ಹಿತಾಶಕ್ತಿಗಳು ಏನನ್ನು ಪ್ರಕಟಿಸಲು ಬಯಸುವುದಿಲ್ಲವೋ ಅದನ್ನು ಪ್ರಕಟಿಸುವುದು; ಉಳಿದಿದ್ದ ಸಾರ್ವಜನಿಕ ಸಂಪರ್ಕವಷ್ಟೆ” (ಜಾರ್ಜ್ ಆರ್ವೆಲ್, ಎಡಿಟ್ ಮಾಡಲಾಗಿದೆ) ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಯಾರು ಸುಳ್ಳು ಸಂದೇಶ ಹರಡಿದರೂ ಅದನ್ನು ಆಲ್ಟ್‌ನ್ಯೂಸ್ ಬಹಿರಂಗಗೊಳಿಸುತ್ತದೆ. ಸತ್ಯದ ಪರ ಅತ್ಯುತ್ತಮ ಕೆಲಸ ಮಾಡುತ್ತಿರುವ ಮೊಹಮ್ಮದ್ ಜುಬೇರ್ ಬಂಧನ ಖಂಡನೀಯ. ಕೂಡಲೇ ಅವರನ್ನು ಬಿಡುಗಡೆ ಮಾಡಿ” ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಒತ್ತಾಯಿಸಿದ್ದಾರೆ.

“ಒಬ್ಬರನ್ನಷ್ಟೇ ಫಾಲೋಯರ್‌ ಹೊಂದಿರುವ ಅನಾಮಧೇಯ ಟ್ವಿಟರ್ ಖಾತೆಯು ತಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರಿದ ಕಾರಣ ಜುಬೈರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಹಿಂಸಾಚಾರದ ವಿಡಿಯೋ ಸಾಕ್ಷ್ಯಗಳ ಹೊರತಾಗಿಯೂ ಕೋಮಲ್ ಶರ್ಮಾ ಅವರನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಈ ಇಡೀ ವ್ಯವಸ್ಥೆ ಎಷ್ಟು ಹಸ್ಯಾಸ್ಪದವಾಗಿದೆ” ಎಂದು ಹೋರಾಟಗಾರ ಧ್ರುವ್ ರಾಥೆ ಟ್ವೀಟ್‌ ಮಾಡಿದ್ದಾರೆ.

“ಭಾರತೀಯ ಮುಸ್ಲಿಮರು ಮತ್ತು ಇತರ 15 ದೇಶಗಳ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ ಬಿಜೆಪಿಯ ವಕ್ತಾರರನ್ನು ದೆಹಲಿ ಪೊಲೀಸರು ಬಂಧಿಸಲಿಲ್ಲ. ಆದರೆ ಜುಬೈರ್‌ ಅವರನ್ನು ಬಂಧಿಸಲು ಯಾವುದೇ ಸಮಯ ತೆಗೆದುಕೊಳ್ಳಲಿಲ್ಲ” ಎಂದು ಕಾಂಗ್ರೆಸ್‌ ನಾಯಕರಾದ ಜಾವೇದ್‌ ವಿಷಾದಿಸಿದ್ದಾರೆ.

“ಜುಬೇರ್ ಒಬ್ಬ ಹೀರೋ. ಬಲಪಂಥೀಯರ ದ್ವೇಷದ ಭಾಷಣಗಳು ಮತ್ತು ದ್ವೇಷದ ಅಪರಾಧಗಳನ್ನು ಏಕಾಂಗಿಯಾಗಿ ಬಹಿರಂಗಪಡಿಸಿದ ವ್ಯಕ್ತಿ ಜುಬೈರ್‌” ಎಂದು ಪತ್ರಕರ್ತ ಕೌಶಿಕ್‌ ರಾಜ್‌ ಬಣ್ಣಿಸಿದ್ದಾರೆ.

“ಸುದ್ದಿ ವಾಹಿನಿಗಳಲ್ಲಿ ಪ್ರತಿದಿನ ದ್ವೇಷವನ್ನು ಹರಡುವವರನ್ನು ರಕ್ಷಿಸಲಾಗಿದೆ. ಪ್ರತಿನಿತ್ಯ ಸುಳ್ಳು ಸುದ್ದಿ ಬಯಲಿಗೆಳೆಯುವವರನ್ನು ಬಂಧಿಸಲಾಗುತ್ತದೆ. ದೆಹಲಿ ಪೋಲೀಸ್ ಇಲ್ಲಿಯವರೆಗೆ ಕೋಮಲ್ ಶರ್ಮಾ ಅವರನ್ನು ಬಂಧಿಸಲು ವಿಫಲವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ದೆಹಲಿ ಪೊಲೀಸರು ಟಚ್‌ ಮಾಡಲೂ ಆಗಿಲ್ಲ” ಎಂದು ಸ್ವತಂತ್ರ ಪತ್ರಕರ್ತೆ ಸಾಕ್ಷಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ಯಾರು ಜುಬೇರ್?

ಪ್ರತಿ ನಿತ್ಯ ಸುಳ್ಳು ಸುದ್ದಿಗಳನ್ನು ಬೆತ್ತಲು ಮಾಡುತ್ತಿರುವ ‘Altnews’ ವೆಬ್ ಸೈಟ್‌ ಸಹ ಸಂಪಾದಕರಾದ ಜುಬೇರ್ ಮೂಲತಃ ಕರ್ನಾಟಕದವರು. ಅಲ್ಪಸಂಖ್ಯಾತರ ಮೇಲಿನ ಕಲ್ಪಿತ ಆರೋಪಗಳನ್ನು, ತಪ್ಪ ಸಂದೇಶಗಳನ್ನು ಅವರು ಸಾಕ್ಷಿ ಸಮೇತ ಬಯಲುಗೊಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಖ್ಯವಾಹಿನಿ ಮಾಧ್ಯಮಗಳು ಹರಡುವ ಸುಳ್ಳುಗಳು, ದ್ವೇಷಪೂರಿತ ಕಾರ್ಯಕ್ರಮಗಳನ್ನು ಇವರು ಬೆತ್ತಲುಗೊಳಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಟೈಮ್ಸ್ ನೌ ಚಾನೆಲ್‌ನಲ್ಲಿ ಪ್ರವಾದಿಯವರಿಗೆ ಅವಮಾನ ಮಾಡಿದ ವಿಡಿಯೋವನ್ನು ಟೈಮ್ಸ್ ನೌ ಚಾನೆಲ್ ಡಿಲೀಟ್ ಮಾಡಿದ್ದರೂ ಸಹ ಅದನ್ನು ಡೌನ್‌ಲೌಡ್ ಮಾಡಿಟ್ಟು ಜಗತ್ತಿಗೆ ತಿಳಿಯುವಂತೆ ಮಾಡಿದ್ದು ಇದೇ ಜುಬೇರ್.

ಧರಮ್ ಸಂಸದ್ ಹೆಸರಿನಲ್ಲಿ ಯತಿನರಸಿಂಗಾನಂದ ಸರಸ್ವತಿ ಸೇರಿದಂತೆ ಇತರ ಧಾರ್ಮಿಕ ನಾಯಕರು ಮಾಡಿದ ದ್ವೇಷ ಭಾಷಣಗಳನ್ನು ಜುಬೇರ್ ನಿರಂತರವಾಗಿ ಪ್ರಚಾರ ಮಾಡಿ ಅವರ ಮೇಲೆ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದರು. ಅಲ್ಲದೇ ಎಲ್ಲೆ ತಪ್ಪು ಮಾಹಿತಿಗಳು, ದ್ವೇ‍ಷ ಭಾಷಣಗಳು ಕಂಡರೂ ಅವುಗಳನ್ನು ಸ್ಥಳೀಯ ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ಜುಬೇರ್ ನಿಂದಾಗಿ ಹಲವಾರು ಜನರು ತಮ್ಮ ತಪ್ಪು ಮಾಹಿತಿಗಳ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದರು.

ಜುಬೇರ್‌ರವರ ಈ ಜನಪರ, ಪ್ರಜಾಪ್ರಭುತ್ವದ ಪರವಾಗಿನ ಕೆಲಸಗಳನ್ನು ಪರಿಗಣಿಸಿ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಾಂತಿ ಸಂಶೋಧನಾ ಸಂಸ್ಥೆ ಓಸ್ಲೊ (PRIO) ನಾಮನಿರ್ದೇಶನ ಮಾಡಿತ್ತು. “ಸತ್ಯ ಪರಿಶೀಲನೆಯ ವೆಬ್‌ಸೈಟ್‌ ಮೂಲಕ ಗಮನಾರ್ಹ ಕೊಡುಗೆ ನೀಡಿದ ಪ್ರತೀಕ್ ಸಿನ್ಹಾ ಮತ್ತು ಜುಬೈರ್ ಅವರನ್ನು ‘ಯೋಗ್ಯ ಅಭ್ಯರ್ಥಿಗಳು’ ಎಂದು ಪರಿಗಣಿಸಲಾಗಿದೆ. ಆಲ್ಟ್ ನ್ಯೂಸ್ ಬರೆದ ಸತ್ಯಶೋಧನಾ ಲೇಖನಗಳು ಹಲವು ನಕಲಿ ಸುದ್ದಿಗಳನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯವನ್ನು ನಿಂದಿಸುವ ನಿಟ್ಟಿನಲ್ಲಿ ಹಬ್ಬುತ್ತಿರುವ ಹಲವು ಸುಳ್ಳುಸುದ್ದಿಗಳ ಸತ್ಯ ಪರಿಶೀಲನೆ ನಡೆಸಿದ ಹಿರಿಮೆ ಅವರಿಗಿದೆ” ಎಂದು ತಿಳಿಸಿತ್ತು.

ತನ್ನ ಈ ಜವಾಬ್ದಾರಿಯುತ ಕೆಲಸಗಳಿಗಾಗಿ ಬಲಪಂಥೀಯರಿಂದ ತನ್ನ ಜೀವಕ್ಕೆ ಬೆದರಿಕೆ ಎಂದು ಇತ್ತೀಚೆಗೆ ಜುಬೇರ್ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಇದೀಗ ಅವರನ್ನೆ ದೆಹಲಿ ಪೊಲೀಸರು ಬಂಧಿಸಿರುವುದು ವಿಪರ್ಯಾಸವಾಗಿದೆ. ಆದರೆ ಜನರು ಜುಬೇರ್ ಪರ ನಿಂತು ಸತ್ಯದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ; ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ಆರೋಪ: ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್‌ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...