Homeಕರ್ನಾಟಕ'ಸತ್ಯ ಆದಷ್ಟು ಬೇಗ ಹೊರಬರಲಿದೆ..'; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

‘ಸತ್ಯ ಆದಷ್ಟು ಬೇಗ ಹೊರಬರಲಿದೆ..’; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

- Advertisement -
- Advertisement -

ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ ನಂತರ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ ಎಸ್‌ಐಟಿ ಮುಖ್ಯಸ್ಥರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿರುವ ಅವರು, ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೋರಿ ವಕೀಲರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರಜ್ವಲ್ ಪರವಾಗಿ ವಕೀಲರು ಬರೆದ ಪತ್ರದಲ್ಲಿ ಏನಿದೆ?

“ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಮನೆಯ ಮೇಲೆ ತಮ್ಮ ಕಛೇರಿಯಿಂದ ಕಳುಹಿಸಿರುವ ನೋಟಿಸನ್ನು ಅಂಟಿಸಿರುವ ಬಗ್ಗೆ ನನಗೆ ನನ್ನ ಕಕ್ಷಿದಾರರಾದ ಪ್ರಜ್ವಲ್‌ ರವರ ಕುಟುಂಬದವರಿಂದ ಬಂದ ಮಾಹಿತಿ ಪ್ರಕಾರ ಕಲ೦ 41 (ಎ) ಸಿ.ಆರ್‌.ಪಿ.ಸಿ ದಿನಾಂಕ:30-04-2024ರ ತಮ್ಮ ನೋಟಿಸ್‌ ನಲ್ಲಿ ತಾವು ದಿನಾಂಕ:01-05-2024 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿರುತ್ತೀರಿ. ಆದರೆ, ನನ್ನ ಕಕ್ಷಿದಾರರಾದ ಪ್ರಜ್ವಲ್‌ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ನನ್ನ ಕಕ್ಷಿದಾರರು ಬೆ೦ಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದು, ನನ್ನ ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ನನ್ನ ಕಕ್ಷಿದಾರರ ಪರವಾಗಿ ಕೋರುತ್ತೇನೆ” ಎಂದು ವಕೀಲರಾದ ಅರುಣ್ ಜಿ ಎಂಬಿವವರು ಪತ್ರ ಬರೆದಿದ್ದಾರೆ.

ಎಸ್‌ಐಟಿ ಮುಂದೆ ಹಾಜರಾದ 10 ಜನ ಸಂತ್ರಸ್ತೆಯರು:

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೊಗಳು ಎಲ್ಲೆಡೆ ವೈರಲ್ ಆದ ನಂತರ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದ್ದು, ತನಿಖಾ ತಂಡ ರಚಿಸುವ ಆದೇಶ ಹೊರಬಿದ್ದ ದಿನದಿಂದ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂದು ಸುದ್ದಿಯಾಗಿದೆ.

ಈ ನಡುವೆ ಎಸ್‌ಐಟಿ ಅಧಿಕಾರಿಗಳ ಮುಂದೆ ಈವರೆಗೆ 10ಕ್ಕೂ ಹೆಚ್ಚು ಸಂತ್ರಸ್ತೆಯರು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಏ.30ರಂದು ಪ್ರಕರಣದ ಪ್ರಮುಖ ಆರೋಪಿಗಳಾದ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ಅವರಿಗೆ ಅಧಿಕಾರಿಗಳು ನೋಟಿಸ್ ಕೊಟ್ಟು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಹಿರಿಯ ಪೊಲೀಸ್ ಆಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದ್ದು, ಮೈಸೂರು ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಲಾಗಿದೆ. ಇದೀಗ ರಾಜ್ಯ ಸರ್ಕಾರ 18 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ನಿಯೋಜಿಸಿದೆ‌. ಇದರಿಂದ ಎಸ್ಐಟಿ ತನಿಖೆ ಇನ್ನಷ್ಟು ಬಲಗೊಂಡಿದೆ.

ಬೆಂಗಳೂರು ನಗರದ ಮಾರತ್ ಹಳ್ಳಿ ಉಪ ವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಬೆಂಗಳೂರು ನಗರ ಸಿಸಿಬಿ ಎಸಿಪಿ ಸತ್ಯನಾರಾಯಣ ಸಿಂಗ್ ಎಸ್.ಬಿ., ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್, ಮಂಗಳೂರು ಉರ್ವಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಭಾರತಿ ಜಿ., ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುಮರಾಣಿ ಬಿ.ಎಸ್., ಆಲನಹಳ್ಳಿ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸ್ವರ್ಣಾ ಜಿ.ಎಸ್., ವೈಟ್ ಫೀಲ್ಡ್ ನ ಸೆನ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಹೇಮಂತ್ ಕುಮಾರ್ ಎಂ., ಬೆಂಗಳೂರು ನಗರ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ರಾಜಾ ಜಿ.ಸಿ., ಉಡುಪಿ ಮಲ್ಪೆ ಸಿಎಸ್‌ಪಿ ಪಿಎಸ್‌ಐ ವೈಲೆಟ್ ಫ್ಲೆಮೀನಾ ಸೇರಿದಂತೆ 18 ಮಂದಿಯನ್ನು ಓಓಡಿ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಸ್‌ಐಟಿಗೆ ಸರ್ಕಾರ ನಿಯೋಜಿಸಿದೆ.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ದೇಶ ತೊರೆಯುವುದನ್ನು ಪ್ರಧಾನಿ ಮೋದಿ ತಡೆದಿಲ್ಲ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...