Homeಮುಖಪುಟರೈತ ಹೋರಾಟದ ಲಾಭವನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಪಡೆಯಲು ಯತ್ನಿಸುತ್ತಿದೆ: ಕೇಂದ್ರ ಸಚಿವ

ರೈತ ಹೋರಾಟದ ಲಾಭವನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಪಡೆಯಲು ಯತ್ನಿಸುತ್ತಿದೆ: ಕೇಂದ್ರ ಸಚಿವ

ಕಳೆದ 19 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಉಪವಾಸ ಮುಷ್ಕರ ಹೂಡಲಿದ್ದಾರೆ.

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರು ನಡೆಸುತ್ತಿರುವ ಪ್ರತಿಭಟನೆಯ ಲಾಭವನ್ನು “ಟುಕ್ಡೆ-ಟುಕ್ಡೆ ಗ್ಯಾಂಗ್” ಪಡೆಯಲು ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್ ಹೇಳಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಸರಕಾರವು ರೈತರನ್ನು ಗೌರವಿಸುತ್ತದೆ, ಆದರೆ ರೈತರ ಪ್ರತಿಭಟನೆಯ ಲಾಭ ಪಡೆಯಲು ಯತ್ನಿಸುತ್ತಿರುವ ಟುಕ್ಡೆ-ಟುಕ್ಡೆ ಗ್ಯಾಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟಕ್ಕೆ ನಿವೃತ್ತ IAS, IPS ಸೇರಿದಂತೆ 78 ಮಾಜಿ ಅಧಿಕಾರಿಗಳ ಬೆಂಬಲ

“ದೇಶವನ್ನು ವಿಭಜಿಸುವ ಭಾಷೆ ಬಳಸುವ ಈ ಜನರು ಯಾರು ಎಂದು ಕೇಳಬಯಸುತ್ತೇನೆ, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಗಲಭೆಗಳಲ್ಲಿ ಪಾಲ್ಗೊಂಡಿದ್ದಕ್ಕಾಗಿ ಜೈಲಿನಲ್ಲಿರುವ ಬುದ್ದಿಜೀವಿಗಳೆಂದು ಕರೆಯಲ್ಪಡುವವರನ್ನು ಬಿಡುಗಡೆಗೊಳಿಸಬೇಕೆಂಬ ಬೇಡಿಕೆಯೂ ವ್ಯಕ್ತವಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ 19 ದಿನಗಳಿಂದ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಉಪವಾಸ ಮುಷ್ಕರ ಹೂಡಲಿದ್ದಾರೆ. ಅಲ್ಲದೆ ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸುವುದಾಗಿಯು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...