ಇಂಗ್ಲೇಂಡ್‌ನ ಆಕ್ಸ್‌ಫರ್ಡ್ ಯುನಿವರ್ಸಿಟಿ ಹಾಗೂ ಅಸ್ಟ್ರಾಜೆನೆಕಾ ಸಂಸ್ಥೆಗಳು ಜಂಟಿಯಾಗಿ ಅಭಿವೃದ್ದಿ ಪಡಿಸಿರುವ, ಕೊರೊನಾ ಲಸಿಕೆಯಾದ ‘‘ಕೋವಿಶೀಲ್ಡ್’’ ಅನ್ನು ಭಾರತದಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಒಕ್ಕೂಟ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.
ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ತಜ್ಞರ ಸಮಿತಿಯು ಒಪ್ಪಿಗೆ ನೀಡಿದ್ದು ಇದಕ್ಕೆ ಭಾರತ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತದಾದ್ಯಂತ ಉಚಿತ ಕೊರೊನಾ ಲಸಿಕೆ: ಒಕ್ಕೂಟ ಸರ್ಕಾರದ ಆರೋಗ್ಯ ಸಚಿವ
India is perhaps the only country where four vaccines are getting ready. Serum's Covishield was yesterday approved for emergency use: Union Minister Prakash Javadekar. pic.twitter.com/IelEQP6VZK
— ANI (@ANI) January 2, 2021
ಕೋವಿಶೀಲ್ಡ್ ಅನ್ನು ಭಾರತದಲ್ಲಿ ಪುಣೆಯ ಸಿರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ತಯಾರಿಸುತ್ತಿದ್ದು, ಭಾರತದಲ್ಲಿ ಮೊದಲಿಗೆ ಅನುಮೋದನೆ ಪಡೆದ ಲಸಿಕೆ ಇದಾಗಿದೆ ಎಂದು ಜಾವಡೇಕರ್ ಮಾಹಿತಿ ನೀಡಿದ್ದಾರೆ.
“ವಿಶ್ವದಲ್ಲೇ ನಾಲ್ಕು ಲಸಿಕೆಗಳನ್ನು ಅಭಿವೃದ್ಧಿಪಡಿಸಿದ ಜಗತ್ತಿನ ಏಕೈಕ ದೇಶ ಭಾರತವಾಗಿದೆ. ಕೋವಿಶೀಲ್ಡ್ ಅಲ್ಲದೆ, ಇನ್ನೂ ಮೂರು ಲಸಿಕೆಗಳು ತುರ್ತು ಬಳಕೆಯ ಅನುಮೋದನೆಗಾಗಿ ಕಾಯತ್ತಿದೆ. ತಜ್ಞರ ಸಮಿತಿಯು ಅದರ ಪ್ರಯೋಗಗಳ ಡೇಟಾಗಳನ್ನು ಪರಿಶೀಲನೆ ಮಾಡುತ್ತಿದೆ. ಒಪ್ಪಿಗೆ ಸೂಚಿಸಿದ ಕೂಡಲೇ ಅನುಮೋದನೆ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್