Homeಮುಖಪುಟಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಿಷೇಧಿತ ಸಶಸ್ತ್ರ ಗುಂಪು

ಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಿಷೇಧಿತ ಸಶಸ್ತ್ರ ಗುಂಪು

- Advertisement -
- Advertisement -

ಕೇಂದ್ರ ಗೃಹ ಸಚಿವಾಲಯವು ಇತ್ತೀಚೆಗೆ ನಿಷೇಧಿಸಿದ್ದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ಹಿಂಸಾಚಾರವನ್ನು ತ್ಯಜಿಸಲು ಒಪ್ಪಿಕೊಂಡು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಸತ್ತಾತ್ಮಕ ವೇದಿಕೆಗೆ ಸ್ವಾಗತಿಸುತ್ತೇನೆ ಮತ್ತು ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರು ಉದ್ದೇಶಿಸಿರುವ ಪ್ರಯಾಣಕ್ಕೆ ಅವರಿಗೆ ಶುಭ ಹಾರೈಸುತ್ತೇನೆ ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತೊಂದು ಪೋಸ್ಟ್‌ ಮಾಡಿದ ಅಮಿತ್ ಶಾ, ಯುಎನ್‌ಎಲ್‌ಎಫ್‌ನೊಂದಿಗೆ ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಸಹಿ ಮಾಡಿದ ಶಾಂತಿ ಒಪ್ಪಂದವು ಆರು ದಶಕಗಳ ಕಾಲದ ಸಶಸ್ತ್ರ ಚಳುವಳಿಯ ಅಂತ್ಯವನ್ನು ಸೂಚಿಸುತ್ತದೆ. ಇದು ಈಶಾನ್ಯ ಭಾರತದ ಯುವಕರಿಗೆ ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯವನ್ನು ಒದಗಿಸುವ ಮೋದಿ ಜಿ ಅವರ ದೂರದೃಷ್ಟಿ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯವು ಈ ಬಗ್ಗೆ ಪೋಸ್ಟ್‌ ಮಾಡಿದ್ದು, ಕಣಿವೆ ಮೂಲದ ಮಣಿಪುರದ ಸಶಸ್ತ್ರ ಗುಂಪು ಹಿಂಸಾಚಾರವನ್ನು ತ್ಯಜಿಸುವ ಮೂಲಕ ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿರುವುದು ಮತ್ತು ಭಾರತದ ಸಂವಿಧಾನ ಮತ್ತು ದೇಶದ ಕಾನೂನುಗಳನ್ನು ಗೌರವಿಸಲು ಒಪ್ಪಿಕೊಳ್ಳುವುದು ಇದೇ ಮೊದಲು. ಒಪ್ಪಂದವು ಸಾಮಾನ್ಯವಾಗಿ ಈಶಾನ್ಯದಲ್ಲಿ ಮತ್ತು ನಿರ್ದಿಷ್ಟವಾಗಿ ಮಣಿಪುರದಲ್ಲಿ ಶಾಂತಿಯ ಹೊಸ ಯುಗವನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಸಚಿವಾಲಯ ಹೇಳಿದೆ.

ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಮತ್ತು ಅದರ ಸಶಸ್ತ್ರ ವಿಭಾಗವಾದ ಮಣಿಪುರ ಪೀಪಲ್ಸ್ ಆರ್ಮಿ  ಈ ತಿಂಗಳ ಆರಂಭದಲ್ಲಿ ಕೇಂದ್ರ ಗೃಹ ಸಚಿವಾಲಯವು ನಿಷೇಧಿಸಿದ ಮಣಿಪುರದ ಹಲವಾರು ಮೈತೈ ತೀವ್ರಗಾಮಿ ಸಂಘಟನೆಗಳಲ್ಲಿ ಸೇರಿದೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಸಂಘಟನೆಯನ್ನು ಕಾನೂನುಬಾಹಿರ ಎಂದು ಘೋಷಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರಕಾರವು ಹೇಳಿತ್ತು.

ಭಾನುವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಇಂಫಾಲ್ ಕಣಿವೆ ಮೂಲದ ಸಶಸ್ತ್ರ ಗುಂಪಿನೊಂದಿಗೆ ತಮ್ಮ ಸರ್ಕಾರ ಮಾತುಕತೆ ನಡೆಸುತ್ತಿದೆ. ಶೀಘ್ರದಲ್ಲೇ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಹಿಂಸಾಚಾರವನ್ನು ತ್ಯಜಿಸಲು ಯುಎನ್‌ಎಲ್‌ಎಫ್ ಒಪ್ಪಿಕೊಂಡಿದೆ.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿ ಶತದಷ್ಟು ಮೈತೈಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇ.40ರಷ್ಟಿದ್ದಾರೆ ಮತ್ತು ಮುಖ್ಯವಾಗಿ ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಇದನ್ನು ಓದಿ: ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...