Homeಮುಖಪುಟಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

ಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

- Advertisement -
- Advertisement -

38 ವರ್ಷದ ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ನಾಗ್ಪುರದ ಮೂವರು ಪೊಲೀಸರು ಮತ್ತು ತಾಯಿ-ಮಗಳು ಜೋಡಿ ಸೇರಿದಂತೆ ಆರು ಜನರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಸಂತ್ರಸ್ತ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದು, ಇದರಿಂದಾಗಿ ವ್ಯಕ್ತಿಯು ಕಳೆದ ತಿಂಗಳು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಚಿನ್ ಸಾಬಲ್ ಎಂದು ಗುರುತಿಸಲ್ಪಟ್ಟಿದ್ದು, ಅವರು ಮುಂಬಯಿಯಲ್ಲಿ ಮಕ್ಕಳ ಕಲ್ಯಾಣ ಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಾ, ಥಾಣೆ ಜಿಲ್ಲೆಯ ಅಂಬರ್ನಾಥ್‌ನಲ್ಲಿ ವಾಸಿಸುತ್ತಿದ್ದರು” ಎಂದು ಅಂಬರ್ನಾಥದ ಶಿವಾಜಿ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ನಾಗ್ಪುರದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸರ್ವೀಸಸ್ (ಐಸಿಡಿಎಸ್) ನಲ್ಲಿ ಕೆಲಸ ಮಾಡುತ್ತಿದ್ದ ನೀತಾ ಖೇಡ್ಕರ್‌ ಎಂಬವರು ಸಚಿನ್‌ ಅವರೊಂದಿಗೆ ಸ್ನೇಹ ಸಂಪಾದಿಸಿದ್ದರು. ನಂತರ ತನ್ನ ಪತಿ ತೀರಿಕೊಂಡಿದ್ದು ತನ್ನನ್ನು ಮದುವೆಯಾಗು ಎಂದು ಸಚಿನ್ ಅವರೊಂದಿಗೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಆದರೆ ಸಚಿನ್‌ಗೆ ಇದರಲ್ಲಿ ಆಸಕ್ತಿಯಿಲ್ಲ ಎಂದು ತಿಳಿಯುತ್ತಿದ್ದಂತೆ ತನ್ನ ಗಂಡನ ಆತ್ಮಹತ್ಯೆಯ ಪ್ರಕರಣದಲ್ಲಿ ಅವರನ್ನೂ ಸೇರಿಸಿಕೊಳ್ಳುವುದಾಗಿ ಮಹಿಳೆ ಬೆದರಿಕೆ ಹಾಕಿದ್ದರು. ಡಿಸೆಂಬರ್ 2020 ಮತ್ತು ಫೆಬ್ರವರಿ 2021 ರ ನಡುವೆ ಅವರು ಈ ಬಗ್ಗೆ ಕಿರುಕುಳ ನೀಡುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಕೆಲವು ದಿನಗಳ ನಂತರ, ನಾಗ್ಪುರದ ಯಶೋಧರ ನಗರ ಪೊಲೀಸ್ ಠಾಣೆಯ ಕೆಲವು ಸಿಬ್ಬಂದಿಗಳು ಸಚಿನ್ ಅವರನ್ನು ವಿಚಾರಣೆಗೆ ಕರೆಯಲು ಪ್ರಾರಂಭಿಸಿದ್ದು, ಖೇಡ್ಕರ್ ಅವರ ಪತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸಚಿನ್ ಸಹೋದರ ನೀಡಿದ ದೂರಿನ ಪ್ರಕಾರ, ಈ ಪೊಲೀಸರು ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ ಇರಲು 9.50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

“ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲಿಂಗ್‌ನಿಂದಾಗಿ, ಫೆಬ್ರವರಿ 18 ರಂದು ಅಂಬರ್ನಾಥದಲ್ಲಿರುವ ತನ್ನ ನಿವಾಸದಲ್ಲಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್, ತನ್ನ ಸಹೋದರನಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ತನಗೆ ಒದಗಿ ಬಂದ ಕಷ್ಟಗಳ ಬಗ್ಗೆ ವಿವರಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಅದರಂತೆ ಮಾರ್ಚ್ 10 ರಂದು ಮಹಿಳೆ, ಅವರ ಮಗಳು, ಸಹೋದರ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯಾವುದೇ ಬಂಧನ ನಡೆದಿಲ್ಲ ಮತ್ತು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡದ ಫಲಕಗಳಿಗೆ ಮಸಿ: ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

0
ಬಿಜೆಪಿ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ 'ಅಲ್ಪಸಂಖ್ಯಾತರು' ಎಂಬ ಪದವನ್ನು ಕೂಡ ಬಳಸಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಮುಸ್ಲಿಮರನ್ನು ಅಂಚಿಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ...