Homeಅಂತರಾಷ್ಟ್ರೀಯ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

- Advertisement -
- Advertisement -

ಬಿಜೆಪಿಯ ಇಬ್ಬರು ನಾಯಕರು ಪ್ರವಾದಿ ಮೊಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಬಗ್ಗೆ ಈಗಾಗಗಲೇ ವಿಶ್ವದ ಹಲವು ಮುಸ್ಲಿಂ ರಾಷ್ಟ್ರಗಳು ಖಂಡಿಸಿದ್ದು, ತೀವ್ರ ಪ್ರತಿಭಟನೆಯನ್ನು ದಾಖಲಿಸಿತ್ತು. ಇದೀಗ ಅಮೇರಿಕಾ ಕೂಡಾ ಧಾರ್ಮಿಕ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಗುರುವಾರ ಖಂಡಿಸಿದೆ.

“ಇಬ್ಬರು ಬಿಜೆಪಿ ಪದಾಧಿಕಾರಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ಆ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷವಾಯಿತು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಗಳ ಕುರಿತು ಹಿರಿಯ ಹಂತಗಳಲ್ಲಿ ಭಾರತೀಯ ಸರ್ಕಾರದೊಂದಿಗೆ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ಅವಹೇಳನಕ್ಕೆ ವಿರೋಧ: ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಪಕ್ಷವಾದ ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಮೇ 26 ರಂದು ಪ್ರವಾದಿ ಮುಹಮ್ಮದ್ ಅವರ ಕುರಿತು ಟಿವಿ ಚರ್ಚೆಯಲ್ಲಿ ಮಾಡಿದ ಅವಹೇಳನ ಇಸ್ಲಾಮಿಕ್ ಪ್ರಪಂಚದಾದ್ಯಂತ ಭಾರಿ ಪ್ರತಿಭಟನೆಯನ್ನು ಹುಟ್ಟು ಹಾಕಿತ್ತು.

ಈ ಹೇಳಿಕೆಗಳು ಸಾಮಾನ್ಯವಾಗಿ ಭಾರತದೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವ ಶ್ರೀಮಂತ ಅರಬ್ ದೇಶಗಳಲ್ಲಿ ರಾಜತಾಂತ್ರಿಕ ಪ್ರತಿಭಟನೆಗೆ ಕಾರಣವಾಗಿತ್ತು. ಬಾಂಗ್ಲಾದೇಶದಲ್ಲಿ ಕೂಡಾ ಪ್ರತಿಭಟನಾಕಾರರು ಭಾರತದ ನಿಕಟ ಮಿತ್ರರಾದ ಪ್ರಧಾನಿ ಶೇಖ್ ಹಸೀನಾ ಅವರಿಂದ ಔಪಚಾರಿಕ ಖಂಡನೆಗೆ ಒತ್ತಾಯಿಸಿದ್ದಾರೆ.

ಇದರ ನಂತರ ಮುಜುಗರವನ್ನು ತಪ್ಪಿಸಲು ಬಿಜೆಪಿಯು, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ಅವರನ್ನು ಅಮಾನತು ಮಾಡಿದ್ದು, ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಹೊರಹಾಕಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

1990 ರ ದಶಕದ ಉತ್ತರಾರ್ಧದಿಂದ ಅಮೇರಿಕಾವು ಭಾರತದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ಪ್ರಯತ್ನಿಸುತ್ತಿದೆ. ಪ್ರಪಂಚದ ಎರಡು ದೊಡ್ಡ ಪ್ರಜಾಪ್ರಭುತ್ವಗಳಾದ ಭಾರತ ಮತ್ತು ಅಮೆರಿಕ ವಿಶೇಷವಾಗಿ ಚೀನಾದ ವಿರುದ್ಧ ಸಾಮಾನ್ಯ ಹಿತಾಸಕ್ತಿಗಳನ್ನು ಹೊಂದಿವೆ ಎಂದು ನಂಬಲಾಗಿದೆ. ಆದರೂ, ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸುವ ನೀತಿಗಳ ವಿರುದ್ಧ ಅಮೆರಿಕಾವು ಹಲವಾರು ಬಾರಿ ಮಾತನಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...