HomeUncategorizedಲಾಕ್‌ಡೌನ್‌ ಉಲ್ಲಂಘಿಸುವವರೆ ಹುಷಾರ್‌ : ಬೀದಿಗಿಳಿದರೆ ವಾಹನ ಜಪ್ತಿ ಮಾಡಲಿದ್ದಾರೆ ಪೊಲೀಸರು

ಲಾಕ್‌ಡೌನ್‌ ಉಲ್ಲಂಘಿಸುವವರೆ ಹುಷಾರ್‌ : ಬೀದಿಗಿಳಿದರೆ ವಾಹನ ಜಪ್ತಿ ಮಾಡಲಿದ್ದಾರೆ ಪೊಲೀಸರು

- Advertisement -
- Advertisement -

21 ದಿನಗಳ ಲಾಕ್‌ಡೌನ್‌ ಅಂತೂ ಇಂತೂ ಒಂದು ವಾರ ಪೂರೈಸಿದೆ. ಆದರೆ ಸಮರ್ಪಕ ಯೋಜನೆಯಿಲ್ಲದ ಕಾರಣ ಅಸ್ತವ್ಯಸ್ತತೆ ಮನೆ ಮಾಡಿದೆ. ಒಂದು ಕಡೆ ವಲಸೆ ಕಾರ್ಮಿಕರು, ನಿರಾಶ್ರಿತರು ಆಹಾರ ವಸತಿಗಳಿಲ್ಲದೆ ತೊಂದರೆಗೊಳಗಾದರೆ, ಅಗತ್ಯ ವಸ್ತುಗಳ ಖರೀದಿಗೆ ಹೊರಬಂದವರ ಮೇಲೆ ಪೊಲೀಸರು ಲಾಠಿ ಬೀಸಿದಾಯ್ತು.  ಪೊಲೀಸರ ಅಮಾನವೀಯ ಕೃತ್ಯಗಳ ವಿರುದ್ಧ ತೀವ್ರ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಲಾಠಿ ಮನೆಯಲ್ಲಿಟ್ಟು ಬರುವಂತೆ ಪೊಲೀಸ್‌ ಕಮಿಷನರ್‌ ಭಾಸ್ಕರ್‌ರಾವ್‌ ಸೂಚನೆ ನೀಡಬೇಕಾದ ಪರಿಸ್ಥಿತಿ ಬಂತು.

ಈಗ ಪೊಲಿಸ್‌ ಇಲಾಖೆ ಜನ ಬೀದಿಗೆ ಬರದಂತೆ ತಡೆಯಲು ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಅದೆಂದರೆ ಬೈಕ್‌, ಕಾರುಗಳಲ್ಲಿ ಜನ ಬಂದಲ್ಲಿ ಅವರ ವಾಹವನ್ನು ಜಪ್ತಿ ಮಾಡಿ ಒಂದು ತಿಂಗಳ ನಂತರ ದಂಡ ಕಟ್ಟಿಸಿಕೊಂಡು ಬಿಡುವುದಾಗಿದೆ. ಅಂದರೆ ಲಾಕ್‌ಡೌನ್‌ ಅವಧಿ ಮುಗಿದರೂ ನಿಮ್ಮ ವಾಹನ ಮಾತ್ರಿ ನಿಮ್ಮ ಕೈಸೇರದ ಪರಿಸ್ಥಿತಿ ನಿರ್ಮಿಸಲು ಮುಂದಾಗಿದೆ ಪೊಲೀಸ್‌ ಇಲಾಖೆ.

ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನ ಹಲವು ನಗರಗಳಲ್ಲಿ ಈ ಕುರಿತು ಪ್ರಚಾರ, ಜಾಗೃತಿ, ಎಚ್ಚರಿಕೆ ನೀಡಲಾಗಿದೆ. ಲಾಕ್‌ಡೌನ್‌ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವುದಿಲ್ಲ ಬದಲಾಗಿ ನಿಮ್ಮ ಗಾಡಿ ಜಪ್ತಿ ಮಾಡುತ್ತಾರೆ. ಒಂದು ತಿಂಗಳವರೆಗೂ ಯಾವುದೇ ಕಾರಣಕ್ಕೂ ವಾಪಸ್‌ ಮಾಡುವುದಿಲ್ಲ ಎಂದು ಸಾರಲಾಗಿದೆ.


ಇದನ್ನೂ ಓದಿ: ಕೊರೋನಾ ಕಾಲವೆಂಬುದು “ಮನುಷ್ಯನ ಮೇಲಿನ ಗೂಢಚಾರಿಕೆ”ಯ ಯುಗದ ಬಹುಮುಖ್ಯ ಸಂಧ್ಯಕಾಲ..


ಆದರೆ ಮನೆಬಳಕೆಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತೇವೆ ಎಂದೂ ಸಹ ಸ್ಪಷ್ಟನೆ ನೀಡಿಲ್ಲ. ಬದಲಿಗೆ ಬೆದರಿಕೆ ಮಾತ್ರ ಬಂದಿರುವುದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಸರಿಯಾದ ಯೋಜನೆಯಿಲ್ಲದೆ ಪ್ರಕಟಿಸಿದ ಲಾಕ್‌ಡೌನ್‌ನಿಂದಾಗಿ ಮುಂದೆ ಇನ್ನು ಏನೇನು ಅನಾಹುತಗಳಾಗುತ್ತವೊ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...