Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...