Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...