Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...