Homeಅಂತರಾಷ್ಟ್ರೀಯಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ 'ದಿ ವಾಯ್ಸ್ ಆಫ್ ಹಿಂದ್ ರಜಬ್'

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

- Advertisement -
- Advertisement -

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಲನಚಿತ್ರವು 2026ರ ಆಸ್ಕರ್ (ಅಕಾಡೆಮಿ ಪ್ರಶಸ್ತಿ) ಪ್ರಶಸ್ತಿಗೆ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. 

ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿದೆ. ಈ ಚಿತ್ರವನ್ನು ಖ್ಯಾತ ಟುನೀಶಿಯನ್ ಚಲನಚಿತ್ರ ನಿರ್ದೇಶಕಿ ಕೌಥರ್ ಬೆನ್ ಹನಿಯಾ ಅವರು ನಿರ್ದೇಶಿಸಿದ್ದಾರೆ.

ಈ ವರ್ಷದ ಅಥವಾ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಪ್ರಧಾನ ಸಮಾರಂಭವು ಅಮೆರಿಕದ ಲಾಸ್ ಏಂಜಲೀಸ್‌ನ ಓವೇಶನ್ ಹಾಲಿವುಡ್‌ನಲ್ಲಿರುವ ಐತಿಹಾಸಿಕ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15, 2026 (ಭಾನುವಾರ) ರಂದು ನಡೆಯಲಿದೆ.

ಭಾರತೀಯ ವೀಕ್ಷಕರಿಗೆ ಸಮಯದ ವ್ಯತ್ಯಾಸದಿಂದಾಗಿ ಈ ಕಾರ್ಯಕ್ರಮವು ಮಾರ್ಚ್ 16, 2026 (ಸೋಮವಾರ) ರಂದು ಬೆಳಿಗ್ಗೆ 4.30ಕ್ಕೆ ನೇರ ಪ್ರಸಾರವಾಗಲಿದೆ.

ಖ್ಯಾತ ಹಾಸ್ಯನಟ ಮತ್ತು ದೂರದರ್ಶನ ನಿರೂಪಕ ಕೋನನ್ ಒ’ಬ್ರಿಯಾನ್ ಅವರು ಸತತ ಎರಡನೇ ಬಾರಿಗೆ ಸಮಾರಂಭವನ್ನು ನಡೆಸಿಕೊಡಲಿದ್ದಾರೆ.

ಈ ಬಾರಿಯ ಆಸ್ಕರ್ ರೇಸ್‌ನಲ್ಲಿ ‘ಸಿನರ್ಸ್ಚಿತ್ರವು ಗರಿಷ್ಠ 16 ನಾಮನಿರ್ದೇಶನಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ.

‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಿತ್ರದ ನಿರ್ಮಾಪಕರು ಮತ್ತು ಬೆಂಬಲಿಗರು ಈ ಚಿತ್ರವು ಪ್ರಶಸ್ತಿ ಪಡೆಯುವ ದೊಡ್ಡ ಭರವಸೆಯಲ್ಲಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಹಿಂದ್ ರಜಬ್ ಗಾಝಾದ ಆರು ವರ್ಷದ ಫ್ಯಾಲೆಸ್ತೀನ್ ಬಾಲಕಿ. 2024ರ ಜನವರಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಸಂದರ್ಭದಲ್ಲಿ ಈಕೆ ಜಗತ್ತಿನಾದ್ಯಂತ ಸುದ್ದಿಯಾಗಿದ್ದಳು.

ಜನವರಿ 29, 2024ರಂದು ಹಿಂದ್ ರಜಬ್ ತನ್ನ ಕುಟುಂಬದೊಂದಿಗೆ ಗಾಝಾ ನಗರದಿಂದ ಪಲಾಯನ ಮಾಡುವಾಗ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಸ್ರೇಲ್ ಸೇನೆ ಸುಮಾರು 300 ಸುತ್ತು ಗುಂಡುಗಳ ಭೀಕರ ದಾಳಿ ನಡೆಸಿತ್ತು.

ಇಸ್ರೇಲ್ ಸೇನೆಯ ದಾಳಿಯಿಂದ ಕಾರಿನಲ್ಲಿದ್ದ ಕುಟುಂಬದ ಇತರ ಆರು ಸದಸ್ಯರು ತಕ್ಷಣ ಮೃತಪಟ್ಟಾಗ, ಬಾಲಕಿ ಹಿಂದ್ ಮಾತ್ರ ಬದುಕುಳಿದಿದ್ದಳು. ಸುಮಾರು ಮೂರು ಗಂಟೆಗಳ ಕಾಲ ಆಕೆ ತನ್ನವರ ಶವಗಳ ನಡುವೆ ಕಾರಿನಲ್ಲಿ ಸಿಲುಕಿಕೊಂಡಿದ್ದಳು. ಈ ಸಂದರ್ಭದಲ್ಲಿ ಆಕೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (ಪಿಆರ್‌ಸಿಎಸ್‌) ಫೋನ್ ಮಾಡಿ ತನ್ನನ್ನು ರಕ್ಷಿಸುವಂತೆ ಅಳುತ್ತಾ ಬೇಡಿಕೊಂಡಿದ್ದಳು.

ಆಕೆಯನ್ನು ರಕ್ಷಿಸಲು ಹೋದ ಪಿಆರ್‌ಸಿಎಸ್‌ನ ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ ಕೂಡಾ ದಾಳಿಯಲ್ಲಿ ಮೃತಪಟ್ಟಿದ್ದರು. ಸುಮಾರು 12 ದಿನಗಳ ನಂತರ ಹಿಂದ್ ರಜಬ್‌ಳ ಶವ ಗುಂಡಿನ ದಾಳಿಯಿಂದ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಪತ್ತೆಯಾಗಿತ್ತು.

ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ಸೇನೆಯ ಆಕ್ರಮಣವನ್ನು ಪ್ರತಿಭಟಿಸಿ ತಮ್ಮ ಹ್ಯಾಮಿಲ್ಟನ್ ಹಾಲ್‌ಗೆ ‘ಹಿಂದ್ ಹಾಲ್’ ಎಂದು ಮರುನಾಮಕರಣ ಮಾಡಿದ್ದರು.

ಈಕೆಯ ಕಥೆಯನ್ನು ಆಧರಿಸಿದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಸೆಪ್ಟೆಂಬರ್ 3, 2025 ರಂದು ವೆನಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಆಗ ಪ್ರೇಕ್ಷಕರು ಸುಮಾರು 23 ನಿಮಿಷಗಳ ಕಾಲ ಎದ್ದು ನಿಂತು ಚಿತ್ರಕ್ಕೆ ಗೌರವ ಸೂಚಿಸಿದ್ದರು. ಈ ಮೂಲಕ ಚಿತ್ರ ದಾಖಲೆ ಬರೆದಿತ್ತು.

ಅಲ್ಲದೆ, ಅಲ್ಲಿ ಅದು ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಮತ್ತು ಇತರ ಆರು ಸಮಾನಾಂತರ ಬಹುಮಾನಗಳನ್ನು ಗೆದ್ದುಕೊಂಡಿತ್ತು. 2025ರ ಸೆಪ್ಟೆಂಬರ್ 10ರಂದು ಟುನೀಶಿಯಾದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರ, ನಂತರ ನವೆಂಬರ್ 26 ರಂದು ದಿ ಪಾರ್ಟಿ ಫಿಲ್ಮ್ ಸೇಲ್ಸ್‌ನಿಂದ ಫ್ರಾನ್ಸ್‌ನಲ್ಲಿ ಬಿಡುಗಡೆಗೊಂಡಿತ್ತು.

ಹಿಂದ್ ರಜಬ್ ಇಂದು ಗಾಝಾದ ನಾಗರಿಕರ, ವಿಶೇಷವಾಗಿ ಮಕ್ಕಳ ಸಂಕಷ್ಟದ ಸಂಕೇತವಾಗಿ ಗುರುತಿಸಲ್ಪಡುತ್ತಿದ್ದಾಳೆ.

2023ರಿಂದ 2025ರವರೆಗೆ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣ ಮತ್ತು ನರಮೇಧದಲ್ಲಿ ಸುಮಾರು 75 ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ 20 ಸಾವಿರ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಚಲನಚಿತ್ರವೊಂದಕ್ಕೆ ‘ಆಸ್ಕರ್ ಪ್ರಶಸ್ತಿ’ ಎಂಬುವುದು ವಿಶ್ವದ ಅತಿದೊಡ್ಡ ವೇದಿಕೆಗಳಲ್ಲಿ ಒಂದಾಗಿರುವುದರಿಂದ ಅದು ಅತ್ಯಂತ ಪ್ರಮುಖವಾಗಿದೆ ಎಂದು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಒಡೆಸ್ಸಾ ರೇ ಲಾಸ್ ಏಂಜಲೀಸ್‌ನಿಂದ ದೂರವಾಣಿ ಮೂಲಕ ಮಾತನಾಡುತ್ತಾ ಹೇಳಿದ್ದಾರೆ. ಈ ಚಿತ್ರದ ಮುಖ್ಯ ಉದ್ದೇಶ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪುವುದಾಗಿದೆ. ಆಸ್ಕರ್ ವೇದಿಕೆಯು ಈ ಗುರಿಯನ್ನು ಜಾಗತಿಕ ಮಟ್ಟದಲ್ಲಿ ಸಾಧಿಸಲು ನೆರವಾಗುತ್ತದೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ಅಲ್- ಜಝೀರಾ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...