HomeಮುಖಪುಟNCPಯ 54 ಮತ್ತು 11 ಸ್ವತಂತ್ರ ಶಾಸಕರ ಬೆಂಬಲವಿದೆ ಎಂದ ಬಿಜೆಪಿ

NCPಯ 54 ಮತ್ತು 11 ಸ್ವತಂತ್ರ ಶಾಸಕರ ಬೆಂಬಲವಿದೆ ಎಂದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸಿಎಂ ಹುದ್ದೆಗೇರಿರುವ ದೇವೇಂದ್ರ ಫಡ್ನವೀಸ್ ಅವರು ಸರ್ಕಾರ ರಚಿಸುತ್ತಾರೆ. ಎನ್ ಸಿಪಿಯ 54 ಮತ್ತು 11 ಸ್ವತಂತ್ರ ಶಾಸಕರು ಮತ್ತು ಬಿಜೆಪಿಯ 105 ಶಾಸಕರ ಬಲದೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವುದಾಗಿ ಬಿಜೆಪಿ ಹೇಳಿದೆ.

ನವೆಂಬರ್ 30ರವರೆಗೂ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶವಿದೆ. 288 ಬಲ ಹೊಂದಿರುವ ಮಹಾರಾಷ್ಟ್ರದಲ್ಲಿ ಬಹುಮತ ಸಾಬೀತಿಗೆ 145 ಸ್ಥಾನ ಬೇಕು. ಈಗಾಗಲೇ ಬಿಜೆಪಿ ತನ್ನ ಬಳಿ 170 ಸ್ಥಾನಗಳ ಬಲವಿದೆ ಎಂದು ಹೇಳಿದೆ.

ಇನ್ನು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋದರಳಿಯ ಮತ್ತು ಹಿರಿಯ ನಾಯಕ ಅಜಿತ್ ಪವಾರ್ ಅವರು ಬಿಜೆಪಿ ಜತೆಗೆ ಮಾಡಿಕೊಂಡಿರುವ ಮೈತ್ರಿಗೆ ಪಕ್ಷದ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಅಕ್ಟೋಬರ್ 30 ರಂದು ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತಮ್ಮ ಪಕ್ಷದ ಎಲ್ಲ ಶಾಸಕರ ಬೆಂಬಲ ಪತ್ರವನ್ನು ಅಜಿತ್ ಹೊಂದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ: ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

ಬಿಜೆಪಿಯ ಹಿರಿಯ ಮುಖಂಡರೊಬ್ಬರು ಮಾತನಾಡಿ, ಪಕ್ಷದ 105 ಸದಸ್ಯರು ಹಾಗೂ ಎನ್ ಸಿಪಿಯ 54 ಮತ್ತು 11 ಸ್ವತಂತ್ರ ಶಾಸಕರಿರುವ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಒಂದು ವೇಳೆ ಎನ್ ಸಿಪಿ ವಿಭಜನೆಯಾದರೆ 30ಕ್ಕಿಂತ ಹೆಚ್ಚು ಶಾಸಕರು ನಮ್ಮನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ಅಲ್ಲದೇ ಬದಲಾಗುತ್ತಿರುವ ಸನ್ನಿವೇಶದಲ್ಲಿ ಸ್ವತಂತ್ರ ಶಾಸಕರ ಬೆಂಬಲವನ್ನೇ ಹೆಚ್ಚೆಚ್ಚು ಪಡೆಯುತ್ತೇವೆ ಎಂದು ಹೇಳಿದರು. ಇನ್ನು ಅಗತ್ಯವಿರುವ ಶಾಸಕರ ಬೆಂಬಲ ಪಡೆಯಲು ಒಂದು ವಾರ ಸಾಕು ಎಂದು ಬಿಜೆಪಿ ತಿಳಿಸಿದೆ.

ಈ ಮಧ್ಯೆ ಎನ್ ಸಿಪಿಯ ಎಲ್ಲಾ ಶಾಸಕರನ್ನು ಶರದ್ ಪವಾರ್ ತಮ್ಮ ಸಿಲ್ವರ್ ಓಕ್ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ. ಮುಂಬೈನಲ್ಲಿ ಇಲ್ಲದ ಶಾಸಕರು ಸಂಜೆ 4:30ರೊಳಗೆ ಹಾಜರಿರಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...