Homeಅಂತರಾಷ್ಟ್ರೀಯಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

- Advertisement -
- Advertisement -

ಅಮೆರಿಕದ ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡಿದ ಸುಮಾರು ಮೂರು ವಾರಗಳ ನಂತರ ಶ್ವೇತಭವನದ ಅಧಿಕೃತ ಟ್ವಿಟರ್ ಹ್ಯಾಂಡಲ್ ಈಗ ಅವರೆಲ್ಲರನ್ನೂ ಅನ್‌ಫಾಲೋ ಮಾಡಿದೆ. ಶ್ವೇತಭವನವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಅಧಿಕೃತ ನಿವಾಸವಾಗಿದೆ.

ಏಪ್ರಿಲ್ 10 ರ ಸುಮಾರಿಗೆ ಶ್ವೇತಭವನವು ಪಿಎಂ ಮೋದಿ, ಅವರ ಕಚೇರಿ (ಪಿಎಂಒ) ಮತ್ತು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ವೈಯಕ್ತಿಕ ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸಿತು. ಇದರೊಂದಿಗೆ, ಪಿಎಂ ಮೋದಿ ಮತ್ತು ಅಧ್ಯಕ್ಷ ಕೋವಿಂದ್ ಅವರು ಟ್ವಿಟ್ಟರ್‌ನಲ್ಲಿ ಶ್ವೇತಭವನವು ಅನುಸರಿಸಿದ ಏಕೈಕ ವಿಶ್ವ ನಾಯಕರಾಗಿದ್ದರು. ಶ್ವೇತಭವನವು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ಯುಎಸ್ ರಾಯಭಾರ ಕಚೇರಿಯನ್ನು ಸಹ ಅನುಸರಿಸಿತ್ತು.

ಭಾರತದಲ್ಲಿ ಈ ಸುದ್ದಿ ಮಿಂಚಿನ ವೇಗದಲ್ಲಿ ಹರಡಿ ನರೇಂದ್ರ ಮೋದಿಯವರು ವಿಶ್ವನಾಯಕರು ಎಂದೆಲ್ಲಾ ಕೊಂಡಾಡಲಾಗಿತ್ತು.

ಇದರೊಂದಿಗೆ, ಶ್ವೇತಭವನವು 19 ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸುತ್ತಿತ್ತು ಮತ್ತು ಸುಮಾರು 21.5 ಮಿಲಿಯನ್ ಅನುಯಾಯಿಗಳನ್ನು ಹೊಂದಿತ್ತು. ಆದರೆ ಈಗ ಅದು ಕೇವಲ 13 ಖಾತೆಗಳನ್ನು ಅನುಸರಿಸುತ್ತಿದೆ ಭಾರತೀಯ ಮೂಲದ ಎಲ್ಲವನ್ನು ಅನ್‌ಫಾಲೋ ಮಾಡಿದೆ.

ಕೇವಲ ಮೂರು ವಾರಗಳ ಅವಧಿಯಲ್ಲಿ ಫಾಲೋ ಮತ್ತು ಅನ್‌ಫಾಲೋ ಮಾಡಲು ಕಾರಣವೇನೆಂದು ಸಮರ್ಪಕವಾಗಿ ತಿಳಿದುಬಂದಿಲ್ಲ. ಏಪ್ರಿಲ್‌ 7 ರಂದು ಅಮೆರಿಕಾದ ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧಿಸುವ ಭಾರತದ ನಿರ್ಧಾರದ ಕುರಿತು ಪ್ರತಿಕಾರದ ಮಾತುಗಳನ್ನಾಡಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅಂದೇ ಭಾರತದ ಪ್ರಧಾನಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧವನ್ನು ಹಿಂತೆಗೆದುಕೊಂಡಿದ್ದರು. ಆಗ ಅಮೆರಿಕಾ ಭಾರತದೊಂದಿಗೆ ನಮಗೆ ಆತ್ಮೀಯ ಸಂಬಂಧವಿದೆ ಎಂದು ಕೊಂಡಾಡಿದ್ದರು.

“ಅಸಾಧಾರಣ ಸಮಯಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರ ಬೇಕಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕುರಿತ ನಿರ್ಧಾರಕ್ಕೆ ಭಾರತ ಮತ್ತು ಭಾರತೀಯ ಜನರಿಗೆ ಧನ್ಯವಾದಗಳು. ಇದನ್ನು ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತಕ್ಕೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವಲ್ಲಿ ನಿಮ್ಮ ಪ್ರಬಲ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು!”ಎಂದು ಏಪ್ರಿಲ್ 8 ರಂದು ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಅಲ್ಲದೇ ಏಪ್ರಿಲ್‌ 10ರಂದು ವೈಟ್‌ ಹೌಸ್‌ ಟ್ವಿಟ್ಟರ್‌ ಖಾತೆಯಿಂದ ಭಾರತದ ಐದು ಟ್ವಿಟ್ಟರ್‌ ಅಕೌಂಟ್‌ಗಳನ್ನು ಫಾಲೋ ಮಾಡಲಾಗಿತ್ತು. ಈಗ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಿದ ನಂತರ ಅನ್‌ಫಾಲೋ ಮಾಡಲಾಗಿದೆ. ಅಂದರೆ ಕೆಲಸ ಮಗಿದ ಮೇಲೆ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: 50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...