Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: ವಿದ್ಯಾರ್ಥಿ ಸಂಘಟನೆ SFI ಮುಖಂಡನನ್ನು ಬಂಧಿಸಿದ ಪೊಲೀಸರು

ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದ್ದು, ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ ಎಂದು SFI ರಾಜ್ಯ ಕಾರ್ಯದರ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ವಿದ್ಯಾರ್ಥಿ ಸಂಘಟನೆ SFI ಯ ರಾಜ್ಯ ಸಮಿತಿ ಸದಸ್ಯ ಹಾಗೂ ಕೋಲಾರ ತಾಲೂಕು ಅಧ್ಯಕ್ಷರೂ ಆಗಿರುವ ಶ್ರೀಕಾಂತ್ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ಡಿಸೆಂಬರ್‌ 12 ರ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದುವರೆಗೂ ಸುಮಾರು 160 ಜನರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಘಟನೆಯ ರಾಜ್ಯ ಸಮಿತಿ ಸದಸ್ಯನ ಬಂಧನವನ್ನು ವಿರೋಧಿಸಿರುವ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಅವರು, “ಕಂಪೆನಿಯ ಏಜೆನ್ಸಿಯು ಕಾರ್ಮಿಕ ಕಾನೂನನ್ನು ಉಲ್ಲಂಘಿಸಿ ಕಾರ್ಮಿಕರನ್ನು ನಡೆಸಿಕೊಂಡಿರುವ ರೀತಿಯಿಂದ ಬೇಸತ್ತ ಕಾರಣಕ್ಕೆ ಈ ಘಟನೆ ನಡೆದಿದೆ. ಕಾರ್ಮಿಕ ಕಾನೂನುಗಳು ಉಲ್ಲಂಘನೆಯಾಗುತ್ತಿದೆ ಎಂದು ಅಲ್ಲಿನ ಕಾರ್ಮಿಕರು ಪದೆ ಪದೆ ಕಾರ್ಮಿಕ ಇಲಾಖೆಗೆ ದೂರಿಕೊಂಡಿದ್ದರು. ಆದರೆ ಇದನ್ನು ಸರಿಪಡಿಸಲು ಜಿಲ್ಲಾಡಳಿತವಾಗಲಿ, ಕಾರ್ಮಿಕ ಇಲಾಖೆಯಾಗಲಿ ಕೆಲಸ ಮಾಡದೆ ನಿರ್ಲಕ್ಷ್ಯ ಮಾಡಿ ಕಾರ್ಮಿಕರ ಕೋಪ ಸ್ಪೋಟಗೊಳ್ಳುವಂತೆ ಮಾಡಿದೆ”

“ಅಷ್ಟೇ ಅಲ್ಲದೆ ತಮ್ಮ ಕೆಲಸಗಳೇ ಹೆಚ್ಚು ನಡೆಯಬೇಕು ಎಂಬ ಗುತ್ತಿಗೆ ಏಜನ್ಸಿಗಳ ಆಂತರಿಕ ಪೈಪೋಟಿ ಕೂಡಾ ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಈಗ ಪ್ರಕರಣವನ್ನು ನಮ್ಮ ತಲೆಗೆ ಕಟ್ಟುತ್ತಿದ್ದಾರೆ. ಇದು ಖಂಡನಾರ್ಹ” ಎಂದು ವಾಸುದೇವ ರೆಡ್ಡಿ ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ಸಂಸದ ಮುನಿಸ್ವಾಮಿ, SFI ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದ್ದು, SFI ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಸಂಸದರ ಆರೋಪವನ್ನು ನಿರಾಕರಿಸಿದ್ದ SFI ರಾಜ್ಯ ಘಟಕ, ವಿಸ್ಟ್ರಾನ್‌ ಘಟನೆಗೂ SFI ಗೂ ಯಾವುದೇ ಸಂಬಂಧವಿಲ್ಲ. ಸಂಸದರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...