Homeಮುಖಪುಟಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

- Advertisement -
- Advertisement -

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ನ್ನು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಮಂಡನೆಯನ್ನು ಮಾಡಿದ್ದಾರೆ.

ಸಂಸತ್ತಿನ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಮೊದಲ ದಿನದ  ವಿಶೇಷ ಅಧಿವೇಶನದಲ್ಲಿ ಬಿಲ್‌ ಮಂಡನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಂಡನೆ ಮಾಡಲಾಗಿದೆ.

ಈ ಕುರಿತು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾರಿ ಶಕ್ತಿ ವಂದನ ಅಧಿನಿಯಮ’ ಮಸೂದೆಯು ಹೆಚ್ಚಿನ ಮಹಿಳೆಯರು ಸಂಸತ್ತು ಮತ್ತು ವಿಧಾನಸಭೆಗಳ ಸದಸ್ಯರಾಗುವುದಕ್ಕೆ ಹೆಚ್ಚಿನ ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಮಸೂದೆಯು ಲೋಕಸಭೆ ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡುತ್ತದೆ, ಆದರೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ತುಗಳಲ್ಲಿ ಈ ಮೀಸಲಾತಿ ಇರುವುದಿಲ್ಲ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಮೀಸಲಾದ ಮೂರನೇ ಒಂದು ಭಾಗದಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ ಸೇರಿ ಹಲವು ಅಂಶಗಳನ್ನು ಬಿಲ್‌ ಹೊಂದಿದೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಸರ್ಕಾರ ಹೇಳಿದೆ. ಪ್ರಸ್ತಾವಿತ ಮಸೂದೆಯು ಸುಮಾರು 27 ವರ್ಷಗಳಿಂದ ಬಾಕಿ ಉಳಿದಿತ್ತು.

ಇದನ್ನು ಓದಿ: ಮಹಿಳಾ ಮೀಸಲಾತಿ ಮಸೂದೆ: ಪ್ರಧಾನಿ ಮೋದಿಗೆ ‘ಬೇಷರತ್ ಬೆಂಬಲ’ ನೀಡಿದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...