Homeಮುಖಪುಟಭಾರತ-ಪಾಕಿಸ್ತಾನ ಮಿಲಿಟರಿ ಮುಖಾಮುಖಿಯನ್ನು ಜಗತ್ತು ಭರಿಸಲಾರದು: ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್

ಭಾರತ-ಪಾಕಿಸ್ತಾನ ಮಿಲಿಟರಿ ಮುಖಾಮುಖಿಯನ್ನು ಜಗತ್ತು ಭರಿಸಲಾರದು: ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್

- Advertisement -
- Advertisement -

ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಮಿಲಿಟರಿ ಕಾರ್ಯಾಚರಣೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಭಾರತ ಮತ್ತು ಪಾಕಿಸ್ತಾನದ ನಡುವೆ ಮಿಲಿಟರಿ ಮುಖಾಮುಖಿಯನ್ನು ಜಗತ್ತು ಭರಿಸಲಾರದು ಎಂದು ಹೇಳಿದ್ದಾರೆ.

ವರದಿಗಾರರಿಗೆ ನೀಡಿದ ಟಿಪ್ಪಣಿಯಲ್ಲಿ, ಎರಡೂ ದೇಶಗಳಿಂದ ಮಿಲಿಟರಿ ಸಂಯಮಕ್ಕೆ ಗುಟೆರೆಸ್ ಕರೆ ನೀಡಿದ್ದಾರೆ.

ಪರಮಾಣು ಶಸ್ತ್ರಸಜ್ಜಿತ ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯು ಹಲವಾರು ದೇಶಗಳಲ್ಲಿ ಕಳವಳವನ್ನು ಹೆಚ್ಚಿಸಿದೆ.

ಬುಧವಾರ ಮುಂಜಾನೆ, ಭಾರತವು ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು  ಹಲವಾರು ಸ್ಥಳಗಳಲ್ಲಿ ಪಾಕಿಸ್ತಾನ ನಿಯಂತ್ರಿತ ಪ್ರದೇಶದ ಮೇಲೆ ಕ್ಷಿಪಣಿಗಳನ್ನು ಹಾರಿಸಿತು, ಇದರಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

‘ಆಪರೇಷನ್ ಸಿಂಧೂರ್’ ಸಮಯದಲ್ಲಿ ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದಕ ನಿರ್ಮೂಲನೆ ಎಂದು ಹೇಳಿಕೊಳ್ಳುವ ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನವು ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ.

“ಭಾರತ ಮತ್ತು ಪಾಕಿಸ್ತಾನದ ನಡುವೆ ಮಿಲಿಟರಿ ಮುಖಾಮುಖಿಯನ್ನು ಜಗತ್ತು ಭರಿಸಲಾರದು” ಎಂದು ಗುಟೆರೆಸ್ ಅವರ ಟಿಪ್ಪಣಿಯಲ್ಲಿ ಹೇಳಲಾಗಿದೆ.

ದಕ್ಷಿಣ ಏಷ್ಯಾದ ಎರಡು ನೆರೆಹೊರೆಯವರ ನಡುವಿನ ಉದ್ವಿಗ್ನತೆ ಇತ್ತೀಚಿನ ವರ್ಷಗಳಲ್ಲಿಯೇ ಅತಿರೇಕದ ಮಟ್ಟವನ್ನು ತಲುಪಿದೆ ಎಂದು ಎಚ್ಚರಿಸಿದ್ದರು. ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ರಾಜತಾಂತ್ರಿಕತೆಯನ್ನು ಉತ್ತೇಜಿಸಲು ಅವರು ಎರಡೂ ಸರ್ಕಾರಗಳಿಗೆ ತಮ್ಮ ಸಲಹೆ ನೀಡಿದ್ದಾರೆ. ‘ಮಿಲಿಟರಿ ಕಾರ್ಯಾಚರಣೆ ಪರಿಹಾರವಲ್ಲ” ಎಂದು ಒತ್ತಿ ಹೇಳಿದರು.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗುಟೆರೆಸ್, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಕನಿಷ್ಠ 26 ನಾಗರಿಕರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡರು.

“ನಾಗರಿಕರನ್ನು ಗುರಿಯಾಗಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ, ಜವಾಬ್ದಾರಿಯುತರನ್ನು ವಿಶ್ವಾಸಾರ್ಹ ಮತ್ತು ಕಾನೂನುಬದ್ಧ ವಿಧಾನಗಳ ಮೂಲಕ ನ್ಯಾಯಕ್ಕೆ ತರಬೇಕು” ಎಂದು ಅವರು ಹೇಳಿದರು.

ಭಾರತ-ಪಾಕ್ ನಡುವೆ ಉದ್ವಿಗ್ನತೆ; ಸಂಯಮದಿಂದ ವರ್ತಿಸುವಂತೆ ಯುಎಇ ಉಪ ಪ್ರಧಾನಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...