Homeಅಂತರಾಷ್ಟ್ರೀಯಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, "ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ" ಎಂದಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನ ಪತ್ರ ಬರೆದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, “ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ನಾಯಕತ್ವದಲ್ಲಿ ಭಾರತವು ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋನಿಯಾ ಗಾಂಧಿ ಬರೆದ ಪತ್ರದಲ್ಲಿ, “ಜೋ ಬೈಡೆನ್, ತಮ್ಮ ಪ್ರಚಾರದ ಸಮಾವೇಶಗಳಲ್ಲಿ ಅಳತೆಯ ಭಾಷಣಗಳ ಮೂಲಕ ಜನರನ್ನು ಒಗ್ಗೂಡಿಸುವ, ಲಿಂಗ ಮತ್ತು ಜನಾಂಗೀಯ ಸಮಾನತೆ, ಜಾಗತಿಕ ಸಹಕಾರ ಮತ್ತು ಎಲ್ಲಾ ದೇಶಗಳ ಸುಸ್ಥಿರ ಅಭಿವೃದ್ಧಿಯ ವಿಷಯವು ಬಹಳಷ್ಟು ಧೈರ್ಯ ತುಂಬಿದೆ ಮತ್ತು ಹೆಚ್ಚಿನ ಭರವಸೆ ನೀಡಿದೆ. ಹಾಗಾಗಿ ನಮಗೆ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಬೈಡೆನ್ ಅವರಂತಹ ಬುದ್ಧಿವಂತ ಮತ್ತು ಪ್ರಭುದ್ಧ ನಾಯಕತ್ವದ ಅವಶ್ಯಕತೆಯಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಶ್ವೇತಭವನ ಕಚೇರಿಯ ಮೊದಲ ಮಹಿಳೆ ನಾನಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್

ಕಮಲಾ ಹ್ಯಾರಿಸ್‌ಗೆ ಬರೆದ ಪತ್ರದಲ್ಲಿ, ಚುನಾವಣೆಯಲ್ಲಿ ಅವರು ತೋರಿದ ಅಚಲ ಧೈರ್ಯವನ್ನು ಶ್ಲಾಘಿಸಿ, “ಮಿಸ್ ಹ್ಯಾರಿಸ್ ಅಮೆರಿಕಾ ಮತ್ತು ಭಾರತದ ನಡುವಿನ ಸ್ನೇಹವನ್ನು ಬಲಪಡಿಸುತ್ತಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಕಪ್ಪು ಅಮೆರಿಕನ್ನರು ಮತ್ತು ಭಾರತೀಯ ಅಮೆರಿಕನ್ನರ ಯಶಸ್ಸು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಅಮೆರಿಕಾದ ಉಪಾಧ್ಯಕ್ಷರಾಗಿ ವಿಭಜಿತ ರಾಷ್ಟ್ರವನ್ನು ಒಗ್ಗೂಡಿಸಲು ಕಮಲಾ ಹ್ಯಾರಿಸ್ ಪ್ರಯತ್ನಪಡುತ್ತಾರೆ ಎನ್ನುವ ನಂಬಿಕೆಯಿದೆ. ಅವರು ಭಾರತದ ಸ್ನೇಹ ಸಂಬಂಧವನ್ನು ಬಲಪಡಿಸಿ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಮೋದಿ ಘೋರವಾಗಿ ಸಾಯುತ್ತಾರೆ; ಕರ್ನಾಟಕ ವಿಭಜನೆಯಾತ್ತದೆ: ಬ್ರಹ್ಮಾಂಡ ಗುರೂಜಿ

“ಭಾರತಕ್ಕೆ ನಿಮ್ಮನ್ನು ಸ್ವಾಗತಿಸಲು ನಮಗೆ ಶೀಘ್ರದಲ್ಲೇ ಅವಕಾಶ ಸಿಗಲಿದೆ ಎಂದು ನಾವು ಭಾವಿಸುತ್ತೇವೆ. ಇಲ್ಲಿ ನಿಮ್ಮನ್ನು, ಮಹಾನ್ ಪ್ರಜಾಪ್ರಭುತ್ವದ ಮೆಚ್ಚುಗೆ ಪಡೆದ ನಾಯಕಿಯಾಗಿ ಮಾತ್ರವಲ್ಲ, ಪ್ರೀತಿಯ ಮಗಳಾಗಿಯೂ ಅಕ್ಕರೆಯಿಂದ ಪ್ರಶಂಸಿಸಲಾಗುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು.

ಕಠಿಣ ಪೈಪೋಟಿಯ ನಡುವೆ ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗಿದ್ದಾರೆ. ಕಮಲಾ ಹ್ಯಾರಿಸ್ ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...