Homeಮುಖಪುಟಉತ್ತರಪ್ರದೇಶ: 'ನೋ ನಾನ್ ವೆಜ್ ಡೇ' ಘೋಷಣೆ; ಮಾಂಸದ ಅಂಗಡಿಗಳ ಬಂದ್‌ಗೆ ಸೂಚನೆ

ಉತ್ತರಪ್ರದೇಶ: ‘ನೋ ನಾನ್ ವೆಜ್ ಡೇ’ ಘೋಷಣೆ; ಮಾಂಸದ ಅಂಗಡಿಗಳ ಬಂದ್‌ಗೆ ಸೂಚನೆ

- Advertisement -
- Advertisement -

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ನ.25ನ್ನು ‘ನೋ ನಾನ್ ವೆಜ್ ಡೇ’ ಎಂದು ಘೋಷಿಸಿದ್ದು, ರಾಜ್ಯದ ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ನ.25ಕ್ಕೆ(ಇಂದು) ಮುಚ್ಚಲು ಸುತ್ತೋಲೆಯನ್ನು ಹೊರಡಿಸಿದೆ.

ಸಾಧು ಟಿಎಲ್ ವಾಸ್ವಾನಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನ.25ನ್ನು ಮಾಂಸಾಹಾರ ರಹಿತ ದಿನ ಎಂದು ಘೋಷಿಸಿರುವುದಾಗಿ ಉತ್ತರಪ್ರದೇಶ ಸರಕಾರ ಹೇಳಿದೆ.

ಉತ್ತರಪ್ರದೇಶ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿರುವ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಸಾಧು ಟಿಎಲ್ ವಾಸ್ವಾನಿ ಹಬ್ಬದ ದಿನ ಮುಚ್ಚಬೇಕು. ಸಾಧು ಟಿ.ಎಲ್.ವಾಸ್ವಾನಿ ಅವರ ಜನ್ಮದಿನವಾದ ನ.25ನ್ನು ಮಾಂಸ ರಹಿತ ದಿನವನ್ನಾಗಿ ಘೋಷಿಸಲು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆದೇಶಗಳ ಕಟ್ಟುನಿಟ್ಟಾದ ಪಾಲನೆಗೆ ಸೂಚಿಸಲಾಗಿದೆ.

ಸಾಧು ತನ್ವಾರ್ದಾಸ್ ಲೀಲಾರಾಮ್ ವಾಸ್ವಾನಿ ಮೀರಾ ಆಂದೋಲನವನ್ನು ಪ್ರಾರಂಭಿಸಿದ್ದರು ಮತ್ತು  ಸಸ್ಯಾಹಾರವನ್ನು ಬಲವಾಗಿ ಪ್ರತಿಪಾದಿಸಿದ್ದರು.

ಕಳೆದ ವಾರವಷ್ಟೇ ಉತ್ತರಪ್ರದೇಶದಲ್ಲಿ ಹಲಾಲ್‌ ಟ್ಯಾಗ್  ಹೊಂದಿರುವ ಉತ್ಪನ್ನಗಳನ್ನು ನಿಷೇಧಿಸಿ ಉತ್ತರಪ್ರದೇಶ ಸರಕಾರ ಆದೇಶವನ್ನು ನೀಡಿತ್ತು. ಹಲಾಲ್ ಪ್ರಮಾಣೀಕರಣದೊಂದಿಗೆ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿತ್ತು. ಆದರೆ ರಫ್ತಿಗಾಗಿ ತಯಾರಿಸಿದ ಉತ್ಪನ್ನಗಳಿಗೆ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿತ್ತು.

ಉತ್ತರಪ್ರದೇಶದೊಳಗೆ ಹಲಾಲ್ ಪ್ರಮಾಣೀಕೃತ ಔಷಧಗಳು, ವೈದ್ಯಕೀಯ ಸಾಧನಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿತ್ತು.

ಆಹಾರ ಉತ್ಪನ್ನಗಳ ಹಲಾಲ್ ಪ್ರಮಾಣೀಕರಣವು ಒಂದು ಸಮಾನಾಂತರ ವ್ಯವಸ್ಥೆಯಾಗಿದ್ದು ಅದು ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿಸುತ್ತದೆ ಮತ್ತು ಆಹಾರ ಕಾನೂನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆಯ ಸೆಕ್ಷನ್ 89ರ ಅಡಿಯಲ್ಲಿ ಸಮರ್ಥನೀಯವಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

ಇದನ್ನು ಓದಿ: ಶಿವಮೊಗ್ಗ: ಮೊಟ್ಟೆ ತಿನ್ನುವಂತೆ ಶಿಕ್ಷಕರು ಬಲವಂತ ಮಾಡಿಲ್ಲ- ಬಿಇಓ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...